ಯೆಹೋಶುವ 3:13 - ಕನ್ನಡ ಸತ್ಯವೇದವು C.L. Bible (BSI)13 ಸರ್ವಲೋಕದ ಒಡೆಯನಾದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಜೋರ್ಡನ್ ನದಿಯ ನೀರಿನಲ್ಲಿ ಇಡುತ್ತಲೇ ಮೇಲಿಂದ ಹರಿದುಬರುವ ನೀರು ಮುಂದೆ ಸಾಗದೆ ಅಲ್ಲೇ ರಾಶಿಯಾಗಿ ನಿಂತುಕೊಳ್ಳುವುದು,” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸರ್ವಲೋಕದ ಒಡೆಯನಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಯೊರ್ದನ್ ನದಿಯ ನೀರಲ್ಲಿ ಇಡುತ್ತಲೇ ಮೇಲಿನಿಂದ ಹರಿದು ಬರುವ ನೀರು ಮುಂದೆ ಸಾಗದೆ, ಅಲ್ಲೇ ರಾಶಿಯಾಗಿ ನಿಂತುಕೊಳ್ಳುವುದು” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಸರ್ವಲೋಕದ ಒಡೆಯನಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಯೊರ್ದನ್ ಹೊಳೆಯ ನೀರಲ್ಲಿ ಇಡುತ್ತಲೇ ಮೇಲಣಿಂದ ಬರುವ ನೀರು ಮುಂದೆ ಹೋಗದೆ ಅಲ್ಲೇ ರಾಶಿಯಾಗಿ ನಿಂತುಕೊಳ್ಳುವದು ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯಾಜಕರು ಯೆಹೋವನ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವರು. ಯೆಹೋವನು ಸರ್ವಲೋಕದ ಒಡೆಯನಾಗಿದ್ದಾನೆ. ಅವರು ಆ ಪೆಟ್ಟಿಗೆಯನ್ನು ನಿಮ್ಮ ಮುಂದೆ ಜೋರ್ಡನ್ ನದಿಯಲ್ಲಿ ತೆಗೆದುಕೊಂಡು ಹೋಗುವರು. ಅವರು ನೀರಿನಲ್ಲಿ ಪ್ರವೇಶ ಮಾಡಿದಾಗ ಜೋರ್ಡನ್ ನದಿಯ ನೀರು ಹರಿಯದೆ ನಿಂತುಬಿಡುವುದು. ನೀರು ಮುಂದಕ್ಕೆ ಹರಿಯದೆ ಹರಡಿಕೊಂಡು ಸರೋವರದಂತೆ ತೋರುವುದು” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಸಮಸ್ತ ಭೂಮಿಗೂ ಒಡೆಯರಾಗಿರುವ ಯೆಹೋವ ದೇವರ ಮಂಜೂಷವನ್ನು ಹೊರುವ ಯಾಜಕರ ಪಾದಗಳು ಯೊರ್ದನ್ ನದಿಯ ನೀರಲ್ಲಿ ಇಡುತ್ತಲೇ, ಮೇಲಿನಿಂದ ಹರಿದು ಬರುವ ನೀರು ಮುಂದೆ ಹರಿಯದೆ ಅಲ್ಲಿಯೇ ರಾಶಿಯಾಗಿ ನಿಲ್ಲುವುದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |