Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 3:14 - ಕನ್ನಡ ಸತ್ಯವೇದವು C.L. Bible (BSI)

14 ಜನರು ಜೋರ್ಡನ್ ನದಿಯನ್ನು ದಾಟಲು ತಮ್ಮ ತಮ್ಮ ಡೇರೆಗಳಿಂದ ಹೊರಟರು. ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಅವರ ಮುಂದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಜನರು ಯೊರ್ದನ್ ನದಿಯನ್ನು ದಾಟುವುದಕ್ಕೋಸ್ಕರ ತಮ್ಮ ಡೇರೆಗಳನ್ನು ಬಿಚ್ಚಿಕೊಂಡು ಹೊರಟರು. ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಅವರ ಮುಂದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಜನರು ಯೊರ್ದನ್ ಹೊಳೆಯನ್ನು ದಾಟುವದಕ್ಕೋಸ್ಕರ ತಮ್ಮ ಡೇರೆಗಳನ್ನು ಕಿತ್ತುಕೊಂಡು ಹೊರಟರು. ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಅವರ ಮುಂದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯಾಜಕರು ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ನಡೆದರು. ಜನರು ತಾವು ಪಾಳೆಯ ಮಾಡಿಕೊಂಡಿದ್ದ ಸ್ಥಳದಿಂದ ಹೊರಟು ಜೋರ್ಡನ್ ನದಿಯ ಕಡೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದ್ದರಿಂದ ಜನರು ಯೊರ್ದನ್ ನದಿಯನ್ನು ದಾಟಲು ತಮ್ಮ ಡೇರೆಗಳನ್ನು ಬಿಚ್ಚಿಕೊಂಡು ಹೊರಟರು. ಯಾಜಕರು ಒಡಂಬಡಿಕೆಯ ಮಂಜೂಷವನ್ನು ಜನರಿಗೆ ಮುಂದಾಗಿ ಹೊತ್ತುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 3:14
10 ತಿಳಿವುಗಳ ಹೋಲಿಕೆ  

ಗರ್ಭಗುಡಿಯಲ್ಲಿ ಚಿನ್ನದ ಧೂಪಾರತಿ ಮತ್ತು ಚಿನ್ನದ ತಗಡನ್ನು ಸುತ್ತಲೂ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇದ್ದವು. ಈ ಮಂಜೂಷದಲ್ಲಿ ಮನ್ನವನ್ನು ಇಟ್ಟಿದ್ದ ಚಿನ್ನದ ಪಾತ್ರೆ ಆರೋನನ ಚಿಗುರಿದ ಕೋಲು ಮತ್ತು ಒಡಂಬಡಿಕೆಯ ಶಿಲಾಶಾಸನಗಳು ಇದ್ದವು.


ನೀವು ನಾಡಿನಲ್ಲಿ ಹೆಚ್ಚಿ ಅಭಿವೃದ್ಧಿಯಾದಾಗ, ‘ಸರ್ವೇಶ್ವರನ ಒಡಂಬಡಿಕೆಯ ಮಂಜೂಷವೆಲ್ಲಿ?’ ಎಂದು ಪ್ರಸ್ತಾಪಿಸುವಂತಿಲ್ಲ. ಅದು ಜ್ಞಾಪಕಕ್ಕೆ ಬರುವುದಿಲ್ಲ, ಯಾರೂ ಅದನ್ನು ಸ್ಮರಿಸುವುದಿಲ್ಲ. ಅದು ಇಲ್ಲವಲ್ಲಾ ಎಂದು ದುಃಖಿಸುವುದಿಲ್ಲ. ಹೊಸದೊಂದನ್ನು ಕಲ್ಪಿಸಿಕೊಳ್ಳುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.


ಆಗಮಿಸು ಪ್ರಭು, ನಿನ್ನ ತೇಜೋ ಮಂಜೂಷದೊಡನೆ I ನಿನ್ನಾ ವಾಸಸ್ಥಾನವನು ಬಂದು ಸೇರು ಬೇಗನೆ II


ನೂನನ ಮಗ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಹೋಗಿರಿ. ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಸರ್ವೇಶ್ವರನ ಮಂಜೂಷದ ಮುಂದೆ ನಡೆಯಲಿ,” ಎಂದು ತಿಳಿಸಿದನು.


ಯಾಜಕರಿಗೆ, “ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ನದಿದಾಟಿರಿ,” ಎಂದು ಆಜ್ಞಾಪಿಸಿದನು. ಅವರು ಅಂತೆಯೇ ಮಂಜೂಷವನ್ನು ಹೊತ್ತುಕೊಂಡು ಹೋದರು.


“ನಿಮ್ಮ ದೇವರಾದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಯಾಜಕರಾದ ಲೇವಿಯರು ಹೊತ್ತಿರುವುದನ್ನು ನೀವು ಕಂಡಕೂಡಲೆ ನೀವು ಕೂಡ ನಿಮ್ಮ ನಿಮ್ಮ ಸ್ಥಳವನ್ನು ಬಿಟ್ಟು ಅದರ ಹಿಂದೆ ಹೋಗಿ.


ನೀವು ಜೋರ್ಡನನ್ನು ದಾಟಿ ಜೆರಿಕೋವಿಗೆ ಬಂದಿರಿ. ಆಗ ಜೆರಿಕೋವಿನವರು, ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷ್ಟಿಯರು, ಹಿವ್ವಿಯರು ಹಾಗೂ ಯೆಬೂಸಿಯರು ಇವರೆಲ್ಲರೂ ನಿಮಗೆ ವಿರುದ್ಧ ಯುದ್ಧಕ್ಕೆ ಬಂದರು. ನಾನು ಅವರೆಲ್ಲರನ್ನು ನಿಮ್ಮ ಕೈವಶಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು