Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 3:16 - ಕನ್ನಡ ಸತ್ಯವೇದವು C.L. Bible (BSI)

16 ಮೇಲಿಂದ ಬರುತ್ತಿದ್ದ ನೀರು ಬಹು ದೂರದಲ್ಲಿದ್ದ ಚಾರೆತಾನಿನ ಬಳಿಯಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದುಹೋಯಿತು. ಜನರು ಜೆರಿಕೋವಿನ ಎದುರಿನಲ್ಲಿ ನದಿ ದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮೇಲಿನಿಂದ ಹರಿದು ಬರುತ್ತಿದ್ದ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದು ಹೋಯಿತು ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮೇಲಣಿಂದ ಬರುವ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತುಕೊಂಡಿತು. ಕೆಳಗಣ ನೀರು ಅರಾಬಾ ತಗ್ಗಿನಲ್ಲಿರುವ ಲವಣ ಸಮುದ್ರಕ್ಕೆ ಹರಿದುಹೋಯಿತು. ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಗ ನೀರು ಹರಿಯದೆ ನಿಂತುಬಿಟ್ಟಿತು. ಆ ಸ್ಥಳದ ಹಿಂಭಾಗದಲ್ಲಿ ಒಂದು ಸರೋವರದಂತೆ ನೀರು ತುಂಬಿಕೊಂಡಿತು. ನೀರು ಬಹುದೂರದಲ್ಲಿರುವ ಆದಾಮ್ ಊರು ಅಂದರೆ ಜಾರೆತಾನಿನ ಹತ್ತಿರ ಇರುವ ಒಂದು ಊರಿನವರೆಗೂ ರಾಶಿರಾಶಿಯಾಗಿ ನಿಂತುಕೊಂಡಿತು. ಜನರು ಜೆರಿಕೊವಿನ ಹತ್ತಿರ ನದಿಯನ್ನು ದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಮೇಲಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಸಮೀಪವಾಗಿದ್ದ ಆದಾಮ್ ಪಟ್ಟಣಕ್ಕೆ ಬಂದು ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ಎಂಬ ಲವಣ ಸಮುದ್ರಕ್ಕೆ ಹರಿದುಹೋಯಿತು. ಆಗ ಜನರು ಯೆರಿಕೋವಿನ ಎದುರಾಗಿ ನದಿ ದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 3:16
31 ತಿಳಿವುಗಳ ಹೋಲಿಕೆ  

ಸರ್ವಲೋಕದ ಒಡೆಯನಾದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಜೋರ್ಡನ್ ನದಿಯ ನೀರಿನಲ್ಲಿ ಇಡುತ್ತಲೇ ಮೇಲಿಂದ ಹರಿದುಬರುವ ನೀರು ಮುಂದೆ ಸಾಗದೆ ಅಲ್ಲೇ ರಾಶಿಯಾಗಿ ನಿಂತುಕೊಳ್ಳುವುದು,” ಎಂದು ತಿಳಿಸಿದನು.


ಅರಸನು ಜೋರ್ಡನಿನ ತಗ್ಗಿನಲ್ಲಿ ಸುಕ್ಕೋತಿಗೂ ಚಾರೆತಾನಿಗೂ ಮಧ್ಯದಲ್ಲಿರುವ ಮಣ್ಣು ನೆಲದ ಕುಲುಮೆಯಲ್ಲಿ ಎರಕಹೊಯ್ಸಿದನು.


ಬಿನ್ ಅಬೀನಾದಾಬ್ - ನಾಪೋತ್ ದೋರ್ (ಇವನು ಸೊಲೊಮೋನನ ಮಗಳು ಟಾಫತಳನ್ನು ವಿವಾಹವಾಗಿದ್ದನು);


ಇದ ಕಂಡು ಓಡಿಹೋಯಿತು ಕಡಲು I ಮರಳಿ ಬಂದಿತು ಜೋರ್ಡಾನ್ ಹೊನಲು II


ಜೋರ್ಡನ್ ನದಿಯ ಆಚೆ, ಪಾರಾನಿಗೂ, ತೋಫೆಲ್, ಲಾಬಾನ್, ಹಚೇರೋತ್, ದೀಜಾಹಾಬ್ ಎಂಬ ಊರುಗಳಿಗೂ ನಡುವೆ, ಮರುಭೂಮಿಯಲ್ಲಿ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಸೂಫಿಗೆ ಎದುರಾಗಿ ಮೋಶೆ ಇಸ್ರಯೇಲರಿಗೆ ಮಾಡಿದ ಉಪನ್ಯಾಸಗಳು ಇವು.


ನೀವು ಅಲ್ಲಿ ಸೇರಿದಾಗ ಎದೋಮ್ಯರ ಸರಹದ್ದಿನ ಬಳಿಯಿರುವ ಚಿನ್ ಮರುಭೂಮಿಯೇ ನಿಮ್ಮ ದಕ್ಷಿಣ ಮೇರೆಯಾಗಿರಬೇಕು. ಆ ಮೇರೆ ಮೂಡಣ ದಿಕ್ಕಿನಲ್ಲಿ ಲವಣಸಮುದ್ರದ ಕೊನೆಯಿಂದ ತೊಡಗುವುದು.


ಸಾಗರವನೆ ನೀ ತುಳಿದು ನಡೆದೆ I ಮಹಾಸಾಗರವನೆ ನೀ ದಾಟಿದೆ I ಹೆಜ್ಜೆಯ ಗುರುತನೂ ಕಾಣಬಿಡದೆ II


ಒರತೆ ಊಟೆಗಳ ಉಕ್ಕಿಸಿದಾತ ನೀನು I ಹರಿವ ನದಿಗಳ ಬತ್ತಿಸಿಬಿಟ್ಟವ ನೀನು II


ಒಣನೆಲವಾಗಿ ಮಾರ್ಪಡಿಸಿದ ಕಡಲನು I ಕಾಲು ನಡೆಯಲೇ ದಾಟಿಸಿದ ನದಿಯನು I ಇದ ನಿಮಿತ್ತ ಪಡೆಯೋಣ ಆನಂದವನು II


ಜಲಪ್ರಳಯದೊಳು ಪ್ರಭು ಆಸೀನನಾಗಿಹನು I ಯುಗಯುಗಾಂತರಕು ಅರಸನಾಗಿ ಆಳುವನು II


ಅದರ ದಕ್ಷಿಣದ ಎಲ್ಲೆ, ಲವಣ ಸಮುದ್ರದ ತೆಂಕಣ ತುದಿಯಿಂದ ತೊಡಗಿ


ಪಶ್ಚಿಮದಲ್ಲಿ ಅವರ ಪ್ರದೇಶ ಜೋರ್ಡನ್ ನದಿಯವರೆಗೆ ಹರಡಿತ್ತು. ಉತ್ತರದಲ್ಲಿ ಕಿನ್ನೆರೆತ್ ಸರೋವರ ಮೊದಲ್ಗೊಂಡು ದಕ್ಷಿಣದಲ್ಲಿ ಲವಣ ಸಮುದ್ರದವರೆಗೆ ವಿಸ್ತರಿಸಿತ್ತು. ಅದು ಪೂರ್ವದಲ್ಲಿ ಪಿಸ್ಗಾ ಬೆಟ್ಟದ ಬುಡದವರೆಗೆ ವ್ಯಾಪಿಸಿತ್ತು.


ಮೋಶೆ ಸಮುದ್ರದ ಮೇಲೆ ಕೈ ಚಾಚಿದಾಗ ಸರ್ವೇಶ್ವರ ಸ್ವಾಮಿ ಆ ರಾತ್ರಿಯೆಲ್ಲಾ ಪೂರ್ವದಿಕ್ಕಿನಿಂದ ಬಲವಾದ ಬಿರುಗಾಳಿ ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದುಕಡೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದರು. ನೀರು ಇಬ್ಭಾಗವಾಯಿತು.


ತುಂಬಿಟ್ಟಿಹನು ಜಲರಾಶಿಗಳನು ಕಡಲೆಂಬ ಕುಡಿಕೆಯಲಿ I ಕೂಡಿಟ್ಟಿಹನು ಜಲಾಶಯಗಳನು ಬುವಿಯುಗ್ರಾಣದಲಿ II


ಕಡಲೇ, ಓಡುತ್ತಿರುವೆ ಏಕೆ? I ಜೋರ್ಡನ್, ಮರಳುತಿರುವೆ ಏಕೆ? II


ನಾನು ರಕ್ಷಿಸಲು ಬಂದಾಗ ಯಾರೂ ಕಾದಿರಲಿಲ್ಲ, ಏಕೆ? ನಾನು ಕೂಗಿಕರೆದಾಗ ಯಾರೂ ಉತ್ತರಕೊಡಲಿಲ್ಲ, ಏಕೆ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿ ನನ್ನಲ್ಲಿ ಇಲ್ಲವೋ? ಬರಿ ಗರ್ಜನೆಯಿಂದ ಬತ್ತಿಸಬಲ್ಲೆ ಸಮುದ್ರವನು ಬೆಂಗಾಡಾಗಿಸಬಲ್ಲೆ ನಾ ನದಿಸರೋವರಗಳನು ಬಾಯಾರಿ ಸತ್ತು ನಾರುವಂತೆ ಮಾಡಬಲ್ಲೆ ಅಲ್ಲಿಯ ಮೀನುಗಳನು.


ಆಗ ಅವನು ನನಗೆ ಹೀಗೆ ಹೇಳಿದನು: “ಈ ಪ್ರವಾಹ ಪೂರ್ವಪ್ರಾಂತ್ಯಕ್ಕೆ ಹೊರಟು ಅರಬಾ ಎಂಬ ಕಣಿವೆಗೆ ಇಳಿದು ಲವಣ ಸಮುದ್ರದ ಕಡೆಗೆ ಹರಿಯುವುದು; ದೇವಸ್ಥಾನದಿಂದ ಹೊರಟ ಪ್ರವಾಹವು ಲವಣ ಸಮುದ್ರಕ್ಕೆ ಸೇರಲು ಅದರ ನೀರು ಸಿಹಿಯಾಗುವುದು.


ಆತನ ಗದರಿಕೆಯೊಂದಕೆ ಬತ್ತಿಹೋಗುತ್ತದೆ ಸಮುದ್ರ; ನಂದಿಹೋಗುತ್ತವೆ ನದಿಸರೋವರ. ಕಂದುತ್ತವೆ ಕಾರ್ಮೆಲ್ ಗುಡ್ಡಗಳು ಬಾಡುತ್ತವೆ ಬಾಷಾನಿನ ಹೊಲಗಳು ಮುದುಡುತ್ತವೆ ಲೆಬನೋನಿನ ಚಿಗುರುಗಳು.


ಮೋಡಗಳ ಮೇಲೆ ನೀ ಆಗಮಿಸಿದೆ ಏಕೆ? ಜಯರಥಗಳಲ್ಲಿ ಆಸೀನನಾಗಿ ಬಂದೆ ಏಕೆ? ಸರ್ವೇಶ, ನಿನಗೆ ರೌದ್ರವೇ ನದಿಗಳ ಮೇಲೆ? ಸಿಟ್ಟುಸಿಡುಕವೇ ಹೊಳೆಗಳ ಮೇಲೆ? ರೋಷಾವೇಷವೇ ಸಮುದ್ರದ ಮೇಲೆ?


ಇಸ್ರಯೇಲರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲೇ ನಡೆದುಹೋದರು. ನೀರು ಅವರ ಎಡಗಡೆ ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತು.


ಇಸ್ರಯೇಲರಾದರೋ, ಸಮುದ್ರದೊಳಗೆ ಒಣ ನೆಲದಲ್ಲೇ ನಡೆದುಹೋದರು. ನೀರು ಅವರ ಎಡಬಲಗಳಲ್ಲಿ ಗೋಡೆಯಂತೆ ನಿಂತಿತ್ತು.


ಸಿಟ್ಟಿನಿಂದ ನೀ ಮುಸುಗೆರೆದಾಗಲೆ ಸಮುದ್ರವಾಯಿತು ನೀರೊಡ್ಡಿನಂತೆ ಪ್ರವಾಹ ನಿಂತಿತು ಗೋಡೆಯಂತೆ ಸಾಗರ (ಗರ್ಭ) ದೊಳಗಿನ ಜಲ ಗಟ್ಟಿಯಾಯಿತು ನೆಲದಂತೆ.


‘ಇಸ್ರಯೇಲರು ಒಣನೆಲವಾಗಿದ್ದ ಈ ಜೋರ್ಡನನ್ನು ದಾಟಿ ಬಂದುದಕ್ಕಾಗಿ’ ಎಂದು ಹೇಳಿ.


ಜೋರ್ಡನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲ ಅರಸರು ಮತ್ತು ಸಮುದ್ರದ ಬಳಿಯಿದ್ದ ಸರ್ವ ಕಾನಾನ್ ರಾಜರು ಸರ್ವೇಶ್ವರ ಸ್ವಾಮಿ ಇಸ್ರಯೇಲರ ಕಣ್ಮುಂದೆಯೇ ಜೋರ್ಡನನ್ನು ಬತ್ತಿಸಿ ಆ ನದಿ ದಾಟಿಸಿದರೆಂದು ಕೇಳಿದರು. ಆಗ ಅವರ ಎದೆ ಒಡೆದುಕೋಯಿತು. ಇಸ್ರಯೇಲರ ಮುಂದೆ ಅವರಿಗೆ ಧೈರ್ಯವಿಲ್ಲದೆ ಹೋಯಿತು.


ಹಾಗೂ ಜೋರ್ಡನ್ ನದಿಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣ ಸಮುದ್ರ (ಮೃತ್ಯುಕಡಲು) ಎಣಿಸಿಕೊಳ್ಳುವ ಅರಾಬಾ ಸಮುದ್ರದ ಹತ್ತಿರವಿರುವ ಬೇತ್ ಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ಕಣಿವೆ ಪ್ರದೇಶ ಇವುಗಳಿಂದ ಕೂಡಿತ್ತು.


ಆ ಮುನ್ನೂರು ಮಂದಿ ಕೊಂಬುಗಳನ್ನು ಊದುತ್ತಿರುವಲ್ಲಿ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಸರ್ವೇಶ್ವರ ಮಾಡಿದರು. ಪಾಳೆಯದವರು ಚೇರೆರದ ದಾರಿಯಲ್ಲಿರುವ ಬೇತ್‍ಷೀಟ್ಟದವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾ ಪ್ರಾಂತ್ಯದವರೆಗೂ ಓಡಿಹೋದರು.


ದಾಟಿಸಿದನವರನು ಸಮುದ್ರವನೆ ಭೇದಿಸಿ I ಅದರತುಳ ನೀರನು ರಾಶಿಯಾಗಿ ನಿಲ್ಲಿಸಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು