Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 3:6 - ಕನ್ನಡ ಸತ್ಯವೇದವು C.L. Bible (BSI)

6 ಯಾಜಕರಿಗೆ, “ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ನದಿದಾಟಿರಿ,” ಎಂದು ಆಜ್ಞಾಪಿಸಿದನು. ಅವರು ಅಂತೆಯೇ ಮಂಜೂಷವನ್ನು ಹೊತ್ತುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಂತರ ಯೆಹೋಶುವನು ಯಾಜಕರಿಗೆ “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ಹೊಳೆ ದಾಟಿರಿ” ಎಂದು ಆಜ್ಞಾಪಿಸಲು ಅವರು ಆ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮತ್ತು ಯಾಜಕರಿಗೆ - ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ಹೊಳೆ ದಾಟಿರಿ ಎಂದು ಆಜ್ಞಾಪಿಸಲು ಅವರು ಆ ಮಂಜೂಷವನ್ನು ಹೊತ್ತುಕೊಂಡು ಅವರ ಮುಂದಾಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬಳಿಕ ಯೆಹೋಶುವನು ಯಾಜಕರಿಗೆ, “ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಜನಗಳ ಮುಂದೆ ನದಿಯ ಕಡೆಗೆ ನಡೆಯಿರಿ” ಎಂದನು. ಯಾಜಕರು ಪೆಟ್ಟಿಗೆಯನ್ನು ಹೊತ್ತುಕೊಂಡು ಜನರ ಮುಂದೆ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಯೆಹೋಶುವನು ಯಾಜಕರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹೋಗಿರಿ,” ಎಂದನು. ಹಾಗೆಯೇ ಅವರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 3:6
11 ತಿಳಿವುಗಳ ಹೋಲಿಕೆ  

ಬಾಗಿಲನ್ನು ಒಡೆದು ತೆರೆಯುವಂಥವನು ಜನರ ಮುಂದಾಳಾಗಿ ಹೊರಡುವನು; ಅವರೂ ಬಾಗಿಲನ್ನು ಒಡೆದು ನುಗ್ಗುವರು; ಅವರ ಅರಸನು ಮುಂದಾಳಾಗಿ ಹೋಗುವನು. ಸರ್ವೇಶ್ವರಸ್ವಾಮಿಯೇ ಅವರ ಮುಂದಾಳತ್ವವನ್ನು ವಹಿಸುವರು.


“ನಿಮ್ಮ ದೇವರಾದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಯಾಜಕರಾದ ಲೇವಿಯರು ಹೊತ್ತಿರುವುದನ್ನು ನೀವು ಕಂಡಕೂಡಲೆ ನೀವು ಕೂಡ ನಿಮ್ಮ ನಿಮ್ಮ ಸ್ಥಳವನ್ನು ಬಿಟ್ಟು ಅದರ ಹಿಂದೆ ಹೋಗಿ.


ಹೀಗಿರಲಾಗಿ ನೀವು ಒಂದೇ ಪೆಟ್ಟಿನಿಂದ ಈ ಜನರನ್ನೆಲ್ಲಾ ಸಾಯಿಸಿದರೆ ನಿಮ್ಮ ಪ್ರಖ್ಯಾತಿಯನ್ನು ಕೇಳಿದ ಜನಾಂಗಗಳವರು ನಿಮಗೆ ವಿರುದ್ಧ ಮಾತಾಡಿಕೊಳ್ಳುವರು:


ಅವರು ಸರ್ವೇಶ್ವರನ ಬೆಟ್ಟವನ್ನು ಬಿಟ್ಟು ಮೂರುದಿನದ ಪ್ರಯಾಣದಷ್ಟು ದೂರಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡಲು ಸರ್ವೇಶ್ವರನ ಒಡಂಬಡಿಕೆಯ ಮಂಜೂಷವು ಆ ಮೂರು ದಿವಸ ಅವರಿಗೆ ಮುಂದಾಗಿ ಹೋಗುತ್ತಿತ್ತು.


ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಪ್ರಧಾನಯಾಜಕರಾದ ಯೇಸು ನಮ್ಮ ಮುಂದಾಳಾಗಿ ಹೋಗಿ ಆ ಗರ್ಭಗುಡಿಯನ್ನು ಪ್ರವೇಶಿಸಿದ್ದಾರೆ.


ಇದಲ್ಲದೆ, ಯೆಹೋಶುವನು ಜನರಿಗೆ, “ಸರ್ವೇಶ್ವರ ನಾಳೆ ನಿಮ್ಮ ಮಧ್ಯೆ ಅದ್ಭುತಗಳನ್ನು ಮಾಡಲಿದ್ದಾರೆ. ಆದುದರಿಂದ ನಿಮ್ಮನ್ನೇ ಶುದ್ಧೀಕರಿಸಿಕೊಳ್ಳಿ,” ಎಂದು ಹೇಳಿದನು.


ಆಗ ಸರ್ವೇಶ್ವರ, ಯೆಹೋಶುವನಿಗೆ: “ನಾನು ಇಂದಿನಿಂದ ನಿನ್ನನ್ನು ಇಸ್ರಯೇಲರ ಮುಂದೆ ಮಹಾತ್ಮನನ್ನಾಗಿಸುವೆನು. ನಾನು ಮೋಶೆಯ ಸಂಗಡ ಇದ್ದಹಾಗೆ ನಿನ್ನ ಸಂಗಡವೂ ಇರುವೆನೆಂದು ಅವರಿಗೆ ಗೊತ್ತಾಗುವುದು.


ಇಸ್ರಯೇಲರ ಹಿರಿಯರೆಲ್ಲರು ಹೀಗೆ ಕೂಡಿಬಂದಿರಲು ಯಾಜಕರು ಸರ್ವೇಶ್ವರನ ಮಂಜೂಷವನ್ನು ಹೊತ್ತುಕೊಂಡರು.


ಅವರ ಹಿರಿಯರೆಲ್ಲರೂ ಕೂಡಿಬಂದಿರಲಾಗಿ ಲೇವಿಯರು ಸರ್ವೇಶ್ವರನ ಮಂಜೂಷವನ್ನು ಹೊತ್ತುಕೊಂಡರು.


ನೂನನ ಮಗ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಹೋಗಿರಿ. ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಸರ್ವೇಶ್ವರನ ಮಂಜೂಷದ ಮುಂದೆ ನಡೆಯಲಿ,” ಎಂದು ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು