Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 4:10 - ಕನ್ನಡ ಸತ್ಯವೇದವು C.L. Bible (BSI)

10 ಮೋಶೆ ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ ಸರ್ವೇಶ್ವರನ ಅಪ್ಪಣೆಗಳನ್ನೆಲ್ಲ ಅವರು ನೆರವೇರಿಸುವ ತನಕ ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿನ ಮಧ್ಯದಲ್ಲೇ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮೋಶೆಯು ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ ಯೆಹೋವನ ಅಪ್ಪಣೆಗಳನ್ನೆಲ್ಲಾ ಅವರು ನೆರವೇರಿಸುವ ತನಕ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲೇ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮೋಶೆಯು ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ ಯೆಹೋವನ ಅಪ್ಪಣೆಗಳನ್ನೆಲ್ಲಾ ಅವರು ನೆರವೇರಿಸುವವರೆಗೂ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲೇ ನಿಂತರು. ಜನರು ಬೇಗನೆ ಹೊಳೆದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮೋಶೆಯು ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ. ಯೆಹೋವನ ಅಪ್ಪಣೆಗಳನ್ನೆಲ್ಲ ಅವರು ಕೈಗೊಳ್ಳುವವರೆಗೆ ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿದ್ದ ಯಾಜಕರು ನದಿಯ ಮಧ್ಯದಲ್ಲಿ ನಿಂತುಕೊಂಡೇ ಇದ್ದರು. ಜನರು ತ್ವರಿತಗತಿಯಿಂದ ನದಿಯನ್ನು ದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದ ಪ್ರಕಾರ, ಯೆಹೋವ ದೇವರು ಆಜ್ಞಾಪಿಸಿದ್ದೆಲ್ಲಾ ನೆರವೇರಿಸುವ ತನಕ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನ್ ನದಿ ನಡುವೆಯೇ ನಿಂತರು. ಜನರು ತ್ವರೆಯಾಗಿ ಆಚೆಗೆ ದಾಟಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 4:10
14 ತಿಳಿವುಗಳ ಹೋಲಿಕೆ  

ಸರ್ವಲೋಕದ ಒಡೆಯನಾದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಜೋರ್ಡನ್ ನದಿಯ ನೀರಿನಲ್ಲಿ ಇಡುತ್ತಲೇ ಮೇಲಿಂದ ಹರಿದುಬರುವ ನೀರು ಮುಂದೆ ಸಾಗದೆ ಅಲ್ಲೇ ರಾಶಿಯಾಗಿ ನಿಂತುಕೊಳ್ಳುವುದು,” ಎಂದು ತಿಳಿಸಿದನು.


:ಸುಪ್ರಸನ್ನತೆಯ ಕಾಲದಲ್ಲಿ ನಿನ್ನನ್ನಾಲಿಸಿದೆನು; ಉದ್ಧಾರ ದಿನದಂದು ನಿನಗೆ ನೆರವಾದೆನು,” ಎಂದಿದ್ದಾರೆ ದೇವರು. ಇದೇ ಆ ಸುಪ್ರಸನ್ನತೆಯ ಕಾಲ. ಇದೇ ಆ ಉದ್ಧಾರದ ಸುದಿನ.


ಎಂದೇ, ಒಡೆಯರಾದ ಸರ್ವೇಶ್ವರ ಹೀಗೆನ್ನುತ್ತಾರೆ : ‘ಇಗೋ, ನಾನು ಸಿಯೋನಿನಲ್ಲಿ ಅಸ್ತಿವಾರದ ಕಲ್ಲೊಂದನ್ನು ಇಡುತ್ತೇನೆ. ಅದು ಸ್ಥಿರವಾದ, ಪರೀಕ್ಷಿತವಾದ, ಮೌಲ್ಯವಾದ ಮೂಲೆಗಲ್ಲು. ಇದರಲ್ಲಿ ವಿಶ್ವಾಸವಿಡುವವನು ತಾಳ್ಮೆಯಿಂದ ಬಾಳುವನು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ನಾಳೆ ಕುರಿತು ಕೊಚ್ಚಿಕೊಳ್ಳಬೇಡ; ಇಂದು ಒದಗಲಿರುವುದೇ ನಿನಗೆ ತಿಳಿದಿಲ್ಲ.


ನಿನ್ನ ಆಜ್ಞೆಯನು ನಾನು ಅನುಸರಿಸುವಲ್ಲಿ I ಆಲಸಿಯಲ್ಲ, ಆಸಕ್ತ ನಾನು ಅದರಲ್ಲಿ II


ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಸರ್ವೇಶ್ವರನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಹಿರಿಯರ ವಶಕ್ಕೆ ಕೊಟ್ಟನು.


ಈಜಿಪ್ಟ್ ದೇಶದಿಂದ ಅವರು ತಂದಿದ್ದ ಕಣಕದ ಮುದ್ದೆಯಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಸುಟ್ಟರು. ಅಲ್ಲಿಂದ ಅವರನ್ನು ಹೊರಡಿಸಿದಾಗ ಸ್ವಲ್ಪವೂ ಸಮಯ ಸಿಕ್ಕದೆ ಕಣಕದಲ್ಲಿ ಹುಳಿಯನ್ನು ಕಲಸಲಿಕ್ಕೂ ಆಗಲಿಲ್ಲ ಹಾಗು ಬೇರೆ ಆಹಾರವನ್ನು ಸಿದ್ಧಪಡಿಸಿಕೊಳ್ಳಲೂ ಸಾಧ್ಯವಾಗಿರಲಿಲ್ಲ.


ಇದಲ್ಲದೆ ಯೆಹೋಶುವನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು, ಜೋರ್ಡನಿನ ಮಧ್ಯೆ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ನಿಂತಿದ್ದ ಸ್ಥಳದಲ್ಲಿ ನಿಲ್ಲಿಸಿದನು. ಅವು ಇಂದಿನವರೆಗೂ ಅಲ್ಲೇ ಇವೆ.


ಜನರು ಬೇಗನೆ ನದಿ ದಾಟಿದರು. ಅವರೆಲ್ಲರು ಆಚೆಗೆ ಸೇರಿದ ಮೇಲೆ ಯಾಜಕರು ಸರ್ವೇಶ್ವರನ ಮಂಜೂಷದೊಡನೆ ನದಿ ದಾಟಿ ಜನರ ಮುಂದುಗಡೆಯೇ ಹೋದರು.


ನೀವು ಜೋರ್ಡನನ್ನು ದಾಟಿ ಜೆರಿಕೋವಿಗೆ ಬಂದಿರಿ. ಆಗ ಜೆರಿಕೋವಿನವರು, ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷ್ಟಿಯರು, ಹಿವ್ವಿಯರು ಹಾಗೂ ಯೆಬೂಸಿಯರು ಇವರೆಲ್ಲರೂ ನಿಮಗೆ ವಿರುದ್ಧ ಯುದ್ಧಕ್ಕೆ ಬಂದರು. ನಾನು ಅವರೆಲ್ಲರನ್ನು ನಿಮ್ಮ ಕೈವಶಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು