Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 4:12 - ಕನ್ನಡ ಸತ್ಯವೇದವು C.L. Bible (BSI)

12 ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆ ಕುಲದ ಅರ್ಧಜನರು ಮೋಶೆ ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ಧರಾಗಿ ಮಿಕ್ಕ ಇಸ್ರಯೇಲರಿಗಿಂತ ಮುಂದಾಗಿ ಹೊರಟು ನದಿ ದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ರೂಬೇನ್ಯರೂ, ಗಾದ್ಯರೂ, ಮನಸ್ಸೆ ಕುಲದ ಅರ್ಧ ಗೋತ್ರದವರೂ ಮೋಶೆಯು ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ದರಾಗಿ ಇಸ್ರಾಯೇಲ್ಯರ ಮುಂದಾಗಿ ಹೊರಟು ಹೊಳೆದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ರೂಬೇನ್ಯರೂ ಗಾದ್ಯರೂ ಮನಸ್ಸೆಕುಲದ ಅರ್ಧಜನರೂ ಮೋಶೆಯು ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ಧರಾಗಿ ಇಸ್ರಾಯೇಲ್ಯರ ಮುಂದಾಗಿ ಹೊರಟು ಹೊಳೆದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ರೂಬೇನ್ಯರು, ಗಾದ್ಯರು ಮತ್ತು ಮನಸ್ಸೆ ಕುಲದ ಅರ್ಧಜನರು ಮೋಶೆಯ ಆಜ್ಞೆಯನ್ನು ಪಾಲಿಸಿದರು. ಇವರು ಬೇರೆಯವರಿಗಿಂತ ಮುಂಚೆಯೇ ನದಿಯನ್ನು ದಾಟಿದರು. ಯೆಹೋವನು ವಾಗ್ದಾನ ಮಾಡಿದ ದೇಶವನ್ನು ಪಡೆಯಲು ಇಸ್ರೇಲರಿಗೆ ಸಹಾಯ ಮಾಡಲು ಇವರು ಯುದ್ಧಸನ್ನದ್ಧರಾಗಿ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಯ ಅರ್ಧ ಗೋತ್ರದವರು ಮೋಶೆಯು ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ಧರಾಗಿ ಮಿಕ್ಕ ಇಸ್ರಾಯೇಲರಿಗಿಂತ ಮುಂದಾಗಿ ಹಾದುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 4:12
9 ತಿಳಿವುಗಳ ಹೋಲಿಕೆ  

ನಿಮ್ಮ ಮಡದಿಮಕ್ಕಳು ಮತ್ತು ದನಕುರಿಗಳು ಮೋಶೆ ನಿಮಗೆ ಜೋರ್ಡನಿನ ಆಚೆ ಕೊಟ್ಟ ನಾಡಿನಲ್ಲೇ ಇರಲಿ. ಆದರೆ ನಿಮ್ಮ ಯೋಧರೆಲ್ಲರು ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಮುಂದಾಗಿ ಹೊರಟು, ನದಿದಾಟಿ, ಅವರಿಗೆ ನೆರವಾಗಬೇಕು.


ಇಸ್ರಯೇಲರು ಯುದ್ಧಸನ್ನದ್ಧ ಆಗಿಯೇ ಈಜಿಪ್ಟಿನಿಂದ ಹೊರಟರು.


ಗಾದ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 45,650:


ಆದರೆ ನಾವು ಇಸ್ರಯೇಲರನ್ನು ಅವರವರ ಸ್ಥಳಗಳಿಗೆ ಸೇರಿಸುವ ತನಕ ಯುದ್ಧಕ್ಕೆ ಸನ್ನದ್ಧರಾಗಿ ಅವರ ಮುಂದೆಯೇ ನಡೆಯುತ್ತೇವೆ. ಅಷ್ಟರಲ್ಲಿ ನಮ್ಮ ಕುಟುಂಬಗಳವರು ಕೋಟೆ ಕಟ್ಟಿದ ಊರುಗಳಲ್ಲಿ ವಾಸಿಸಲಿ. ಏಕೆಂದರೆ ಈ ನಾಡಿನ ನಿವಾಸಿಗಳ ಭಯವಿದೆ.


“ಆ ಕಾಲದಲ್ಲಿ ನಾನು ನಿಮಗೆ, ‘ನಿಮ್ಮ ದೇವರಾದ ಸರ್ವೇಶ್ವರ ಈ ಪ್ರದೇಶವನ್ನೇ ನಿಮಗೆ ಸೊತ್ತಾಗಿ ಕೊಟ್ಟಿದ್ದಾರೆ. ಆದರೆ ನಿಮ್ಮ ಯೋಧರೆಲ್ಲರು ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಯೇಲರ ಮುಂದೇ ಹೊರಟು ನದಿ ದಾಟಿ ಹೋಗಬೇಕು.


ತನಗೆಂದು ತೆಗೆದುಕೊಂಡನು ನಾಡಿನ ಮೊದಲಭಾಗವನು ದೊರಕಿತಲ್ಲಿ ಅವನಿಗೆ ಮುಖ್ಯಸ್ಥನಿಗಾಗುವ ಸ್ವಾಸ್ತ್ಯವು. ಜನಾಧಿಪತಿಗಳ ಜೊತೆಬಂದು ನೆರವೇರಿಸಿದನು ಸರ್ವೇಶ್ವರನ ಆಣತಿಯನು; ಇಸ್ರಯೇಲನೊಡನೆ ಸ್ಥಾಪಿಸಿದನು ಸರ್ವೇಶ್ವರನ ನ್ಯಾಯನೀತಿಯನು.”


ಜನರು ಬೇಗನೆ ನದಿ ದಾಟಿದರು. ಅವರೆಲ್ಲರು ಆಚೆಗೆ ಸೇರಿದ ಮೇಲೆ ಯಾಜಕರು ಸರ್ವೇಶ್ವರನ ಮಂಜೂಷದೊಡನೆ ನದಿ ದಾಟಿ ಜನರ ಮುಂದುಗಡೆಯೇ ಹೋದರು.


ಸುಮಾರು ನಾಲ್ವತ್ತು ಸಾವಿರ ಯೋಧರಿಂದ ಕೂಡಿದ ಅವರು ಸರ್ವೇಶ್ವರನ ಸಮ್ಮುಖದಲ್ಲಿ ನದಿ ದಾಟಿ ಯುದ್ಧ ಮಾಡುವುದಕ್ಕಾಗಿ ಜೆರಿಕೋವಿನ ಬಯಲಿಗೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು