Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 4:18 - ಕನ್ನಡ ಸತ್ಯವೇದವು C.L. Bible (BSI)

18 ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿನಿಂದ ಮೇಲೆ ಬಂದು ಒಣನೆಲದಲ್ಲಿ ಕಾಲಿಟ್ಟ ಕೂಡಲೇ ನೀರು ಮುಂಚಿನಂತೆ ಬಂದು ಜೋರ್ಡನ್ ನದಿಯ ದಡಮೀರಿ ಹರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನಿಂದ ಮೇಲೆ ಬಂದು ಒಣನೆಲದಲ್ಲಿ ತಮ್ಮ ಕಾಲುಗಳನ್ನಿಟ್ಟ ಕೂಡಲೇ ನೀರು ಮೊದಲಿನಂತೆ ಬಂದು, ಯೊರ್ದನ್ ನದಿಯು ದಡಮೀರಿ ಹರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನಿಂದ ಮೇಲೆ ಬಂದು ಒಣನೆಲದಲ್ಲಿ ತಮ್ಮ ಕಾಲುಗಳನ್ನಿಟ್ಟ ಕೂಡಲೆ ನೀರು ಮುಂಚಿನಂತೆ ಬಂದು ಯೊರ್ದನ್ ಹೊಳೆಯು ದಡಮೀರಿ ಹರಿಯಹತ್ತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯಾಜಕರು ಯೆಹೋಶುವನ ಆಜ್ಞೆಯಂತೆ ಪವಿತ್ರ ಪೆಟ್ಟಿಗೆಯನ್ನು ತಮ್ಮ ಸಂಗಡ ತೆಗೆದುಕೊಂಡು ನದಿಯಿಂದ ಹೊರಗಡೆ ಬಂದರು. ಯಾಜಕರ ಪಾದಗಳು ನದಿಯ ಆಚೆದಡದ ನೆಲವನ್ನು ಮುಟ್ಟಿದ ಕೂಡಲೇ ನದಿಯ ನೀರು ಮತ್ತೆ ಹರಿಯುವುದಕ್ಕೆ ಆರಂಭಿಸಿತು. ಜನರು ದಾಟುವುದಕ್ಕಿಂತ ಮುಂಚೆ ಹರಿಯುತ್ತಿದ್ದಂತೆ ನೀರು ಮತ್ತೆ ದಡಮೀರಿ ಹರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನ್ ನದಿ ಮಧ್ಯದಲ್ಲಿಂದ ಏರಿ, ತಮ್ಮ ಅಂಗಾಲುಗಳನ್ನು ಒಣನೆಲದ ಮೇಲೆ ಇಟ್ಟಕೂಡಲೇ ನೀರು ಮುಂಚಿನಂತೆ ಬಂದು ಯೊರ್ದನ್ ನದಿಯ ದಡ ತುಂಬಿ ಹರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 4:18
8 ತಿಳಿವುಗಳ ಹೋಲಿಕೆ  

ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿಗೆ ಬಂದರು. ಅದು ಸುಗ್ಗಿಯ ಕಾಲ ನದಿ ದಡಮೀರಿ ಹರಿಯುತ್ತಿತ್ತು. ಯಾಜಕರು ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಹರಿಯುತ್ತಿದ್ದ ಜೋರ್ಡನ್ ನದಿಯ ನೀರು ನಿಂತುಹೋಯಿತು.


ಹದ್ದುಮೀರಿ ಜುದೇಯದೆಲ್ಲೆಡೆ ನುಗ್ಗಿ ಹಳ್ಳಕೊಳ್ಳಗಳನ್ನು ತುಂಬುವುದು. ಕುತ್ತಿಗೆಯ ತನಕ ಉಕ್ಕಿಬಂದು ದಿಣ್ಣೆದಿಬ್ಬಗಳನ್ನು ಮುಳುಗಿಸುವುದು. ದೇವರು ನಮ್ಮೊಡನೆ (ಇಮ್ಮಾನುವೇಲ್) ಇರುವರು. ಅವರ ಬಿಚ್ಚುರೆಕ್ಕೆಗಳು ನಾಡಿನ ಉದ್ದಗಲವನ್ನೂ ಆವರಿಸುವುವು, ಇಡೀ ನಾಡಿಗೆ ಆಶ್ರಯ ನೀಡುವುವು.


ಜೋರ್ಡನ್ ನದಿಯು ಪ್ರಥಮ ಮಾಸದಲ್ಲಿ ದಡತುಂಬಿ ಹರಿಯುತ್ತ ಇದ್ದಾಗ ಅದನ್ನು ದಾಟಿ ನದಿಯ ತಗ್ಗಿನ ಪೂರ್ವಪಶ್ಚಿಮ ಪ್ರದೇಶದಲ್ಲಿದ್ದವರೆಲ್ಲರನ್ನು ಓಡಿಸಿಬಿಟ್ಟವರು ಇವರೇ.


ಸರ್ವಲೋಕದ ಒಡೆಯನಾದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಜೋರ್ಡನ್ ನದಿಯ ನೀರಿನಲ್ಲಿ ಇಡುತ್ತಲೇ ಮೇಲಿಂದ ಹರಿದುಬರುವ ನೀರು ಮುಂದೆ ಸಾಗದೆ ಅಲ್ಲೇ ರಾಶಿಯಾಗಿ ನಿಂತುಕೊಳ್ಳುವುದು,” ಎಂದು ತಿಳಿಸಿದನು.


ಆತ ಅವರಿಗೆ ಅಂತೆಯೇ ವಿಧಿಸಿದನು.


ಜನರು ಮೊದಲನೇ ತಿಂಗಳಿನ ಹತ್ತನೆಯ ದಿನ ಜೋರ್ಡನನ್ನು ದಾಟಿ ಜೆರಿಕೋವಿನ ಪೂರ್ವಗಡಿಯಲ್ಲಿರುವ ಗಿಲ್ಗಾಲೆಂಬಲ್ಲಿಗೆ ಬಂದು ತಂಗಿದರು.


ಜನರು ಬೇಗನೆ ನದಿ ದಾಟಿದರು. ಅವರೆಲ್ಲರು ಆಚೆಗೆ ಸೇರಿದ ಮೇಲೆ ಯಾಜಕರು ಸರ್ವೇಶ್ವರನ ಮಂಜೂಷದೊಡನೆ ನದಿ ದಾಟಿ ಜನರ ಮುಂದುಗಡೆಯೇ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು