Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 4:23 - ಕನ್ನಡ ಸತ್ಯವೇದವು C.L. Bible (BSI)

23 ನಿಮ್ಮ ದೇವರಾದ ಸರ್ವೇಶ್ವರ ನಮ್ಮ ಕಣ್ಮುಂದೆ ಕೆಂಪುಸಮುದ್ರವನ್ನು ಬತ್ತಿಸಿ, ನಮ್ಮನ್ನು ದಾಟಿಸಿದಂತೆ ಈಗ ನಿಮ್ಮ ಕಣ್ಮುಂದೆಯೇ ಈ ಜೋರ್ಡನನ್ನು ಬತ್ತಿಸಿ, ನಿಮ್ಮನ್ನು ದಾಟಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಿಮ್ಮ ದೇವರಾದ ಯೆಹೋವನು ನಮ್ಮ ಕಣ್ಣು ಮುಂದೆ ಕೆಂಪುಸಮುದ್ರವನ್ನು ಬತ್ತಿಸಿ, ನಮ್ಮನ್ನು ದಾಟಿಸಿದಂತೆ ಈಗ ನಿಮ್ಮ ಕಣ್ಣು ಮುಂದೆಯೇ ಈ ಯೊರ್ದನನ್ನು ಬತ್ತಿಸಿ, ನಿಮ್ಮನ್ನು ದಾಟಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಿಮ್ಮ ದೇವರಾದ ಯೆಹೋವನು ನಮ್ಮ ಮುಂದೆ ಕೆಂಪು ಸಮುದ್ರವನ್ನು ಬತ್ತಿಸಿ ನಮ್ಮನ್ನು ದಾಟಿಸಿದಂತೆ ಈಗ ನಿಮ್ಮ ಮುಂದೆ ಈ ಯೊರ್ದನನ್ನು ಬತ್ತಿಸಿ ನಿಮ್ಮನ್ನು ದಾಟಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಿಮ್ಮ ದೇವರಾದ ಯೆಹೋವನು ಜೋರ್ಡನ್ ನದಿಯ ನೀರಿನ ಚಲನೆಯನ್ನು ನಿಲ್ಲಿಸಿದನು. ಕೆಂಪುಸಮುದ್ರದ ಹಾಗೆ ಈ ನದಿಯೂ ಸಹ ಜನರೆಲ್ಲರೂ ದಾಟುವವರೆಗೆ ಬತ್ತಿಹೋಗಿತ್ತು. ಜನರು ದಾಟಲು ಸಾಧ್ಯವಾಗುವಂತೆ ಕೆಂಪುಸಮುದ್ರದ ನೀರಿನ ಚಲನೆಯನ್ನು ಸಹ ಯೆಹೋವನು ತಡೆದಿದ್ದನೆಂಬುದನ್ನು ಸ್ಮರಿಸಿಕೊಳ್ಳಿ ಎಂದು ನೀವು ಮಕ್ಕಳಿಗೆ ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನೀವು ಯೊರ್ದನ್ ನದಿ ನೀರನ್ನು ದಾಟಿ ಬರುವವರೆಗೂ, ನಿಮ್ಮ ದೇವರಾದ ಯೆಹೋವ ದೇವರು ಆ ನದಿಯ ನೀರನ್ನು ಒಣಗಿ ಹೋಗುವಂತೆ ಮಾಡಿದರು. ಕೆಂಪು ಸಮುದ್ರವನ್ನು ನಾವು ದಾಟುವವರೆಗೂ ನಮ್ಮ ಮುಂದೆ ಬತ್ತಿಸಿದಂತೆ, ಯೊರ್ದನ್ ನದಿ ನೀರನ್ನೂ ಬತ್ತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 4:23
8 ತಿಳಿವುಗಳ ಹೋಲಿಕೆ  

ಮೋಶೆ ಸಮುದ್ರದ ಮೇಲೆ ಕೈ ಚಾಚಿದಾಗ ಸರ್ವೇಶ್ವರ ಸ್ವಾಮಿ ಆ ರಾತ್ರಿಯೆಲ್ಲಾ ಪೂರ್ವದಿಕ್ಕಿನಿಂದ ಬಲವಾದ ಬಿರುಗಾಳಿ ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದುಕಡೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದರು. ನೀರು ಇಬ್ಭಾಗವಾಯಿತು.


ಸಮುದ್ರದ ಮಧ್ಯೆ ದಾರಿಮಾಡಿದವನಾರೋ, ಭೋರ್ಗರೆವ ಜಲರಾಶಿಗಳಲ್ಲಿ ಮಾರ್ಗವೇರ್ಪಡಿಸಿದವನಾರೋ,


ದಾಟಿಸಿದನವರನು ಸಮುದ್ರವನೆ ಭೇದಿಸಿ I ಅದರತುಳ ನೀರನು ರಾಶಿಯಾಗಿ ನಿಲ್ಲಿಸಿ II


ಕಡಲನು ಸೀಳಿ, ಆ ಪಿತೃಗಳ ನಡೆಸಿದಿರಿ ಒಣನೆಲದಲೋ ಎಂಬಂತೆ ಅವರ ಬೆನ್ನಟ್ಟಿ ಬಂದವರನು ಜಲರಾಶಿಯ ತಳಮುಟ್ಟಿಸಿದಿರಿ ಕಲ್ಲಂತೆ.


ನಿಮ್ಮ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿರಿ; ಆಗ ಲೋಕದ ಎಲ್ಲಾ ಜನರು ನಿಮ್ಮ ನಾಮಮಹತ್ತನ್ನು ತಿಳಿದು, ನಿಮ್ಮ ಜನರಾದ ಇಸ್ರಯೇಲರಂತೆ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ, ನಾನು ನಿಮ್ಮ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದೆನೆಂದು ತಿಳಿದುಕೊಳ್ಳುವರು.


ಫರೋಹನ ಕುದುರೆಗಳು, ರಥಗಳು ಹಾಗು ರಾಹುತರು ಸಮುದ್ರವನ್ನು ಹೊಕ್ಕು ನಡೆಯಲಾರಂಭಿಸಿದಾಗ ಸರ್ವೇಶ್ವರ ಸ್ವಾಮಿ ಸಮುದ್ರದ ನೀರನ್ನು ಮೊದಲಿನಂತೆ ಬರಮಾಡಿ ಅವರನ್ನು ಮುಳುಗಿಸಿಬಿಟ್ಟರು. ಇಸ್ರಯೇಲರಾದರೋ, ಸಮುದ್ರದ ನಡುವೆ ಒಣನೆಲದಲ್ಲಿ ನಡೆದು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು