Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 4:24 - ಕನ್ನಡ ಸತ್ಯವೇದವು C.L. Bible (BSI)

24 ಇದರಿಂದ ಭೂನಿವಾಸಿಗಳೆಲ್ಲರು ಸರ್ವೇಶ್ವರನ ಹಸ್ತವು ಪರಾಕ್ರಮವುಳ್ಳದ್ದೆಂದು ತಿಳಿದುಕೊಳ್ಳುವರು. ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಯಾವಾಗಲೂ ಭಯಭಕ್ತಿಯುಳ್ಳವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇದರಿಂದ ಭೂನಿವಾಸಿಗಳೆಲ್ಲರೂ ಯೆಹೋವನ ಹಸ್ತವು ಪರಾಕ್ರಮವುಳ್ಳದ್ದೆಂದು ತಿಳಿದುಕೊಳ್ಳುವ ಹಾಗೆಯೂ ನಿಮ್ಮ ದೇವರಾದ ಯೆಹೋವನಿಗೆ ಯಾವಾಗಲೂ ಭಯಪಡುವವರಾಗಿರುವರು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇದರಿಂದ ಭೂನಿವಾಸಿಗಳೆಲ್ಲರೂ ಯೆಹೋವನ ಹಸ್ತವು ಪರಾಕ್ರಮವುಳ್ಳದ್ದೆಂದು ತಿಳಿದುಕೊಳ್ಳುವರು. ನಿಮ್ಮ ದೇವರಾದ ಯೆಹೋವನಿಗೆ ಯಾವಾಗಲೂ ಭಯಪಡುವರು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಈ ಭೂಲೋಕದ ಜನರೆಲ್ಲರೂ ಯೆಹೋವನೇ ಸರ್ವಶಕ್ತನೆಂದು ತಿಳಿದುಕೊಳ್ಳಬೇಕೆಂದು ಆತನು ಹೀಗೆ ಮಾಡಿದನು. ಹೀಗೆ ಅವರು ನಿಮ್ಮ ದೇವರಾದ ಯೆಹೋವನಿಗೆ ಯಾವಾಗಲೂ ಭಯಪಡುವರು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಭೂಮಿಯ ಜನರೆಲ್ಲಾ ಯೆಹೋವ ದೇವರ ಹಸ್ತವು ಬಲವುಳ್ಳದ್ದೆಂದು ತಿಳಿಯುವಂತೆಯೂ ನೀವು ನಿರಂತರವೂ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡುವಂತೆಯೂ ದೇವರಾದ ಯೆಹೋವ ದೇವರು ಹೀಗೆ ಮಾಡಿದರು,’ ಎಂದು ನೀವು ಹೇಳಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 4:24
24 ತಿಳಿವುಗಳ ಹೋಲಿಕೆ  

ಆದರೂ ತನ್ನ ನಾಮಪ್ರಯುಕ್ತ ರಕ್ಷಿಸಿದನವರನು I ಪ್ರಕಟಿಸಿದನಾತ ಹೀಗೆ ತನ್ನ ಶಕ್ತಿಸಾಮರ್ಥ್ಯವನು II


ನಿನ್ನ ಹಸ್ತ ಶಕ್ತಿಯುತ, ಬಲಗೈ ಮಹೋನ್ನತ I ನಿನ್ನ ಭುಜಬಲವಾದರೊ ಪರಾಕ್ರಮರೂಪಿತ II


ಆಸ್ತಿ - ಪಾಸ್ತಿ, ಐಶ್ವರ್ಯ ಬರುವುದು ನಿಮ್ಮಿಂದಲೇ. ಸರ್ವಾಧಿಕಾರ, ಬಲಪರಾಕ್ರಮ ಇರುವುದು ನಿಮ್ಮ ಕೈಯಲ್ಲೇ. ಪಟ್ಟ ಪದವಿಗೆ, ಸರ್ವಶಕ್ತಿ ಸಾಹಸಕ್ಕೆ ಮೂಲ ನೀವೇ.


ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ದೇವರು ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಈ ಅಸ್ಸೀರಿಯನ ಕೈಯಿಂದ ಬಿಡಿಸಿರಿ.”


ಭಯಭೀತಿ ಅವರನ್ನು ಆವರಿಸಿದೆ ನಿನ್ನ ಭುಜಬಲ ನೋಡಿ ಸ್ತಬ್ದರಾಗಿಹರವರು ಕಲ್ಲಿನಂತೆ.


ಸರ್ವೇಶ್ವರ ಈಜಿಪ್ಟಿನವರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಯೇಲರು ನೋಡಿ ಸರ್ವೇಶ್ವರನಿಗೆ ಭಯಪಟ್ಟು ಅವರಲ್ಲೂ ಅವರ ದಾಸ ಮೋಶೆಯಲ್ಲೂ ನಂಬಿಕೆಯಿಟ್ಟರು.


ನೀವು ಹಾಗು ನಿಮ್ಮ ಪುತ್ರಪೌತ್ರಾದಿ ಸಂತತಿಯವರು ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಈಗ ಬೋಧಿಸುವ ಅವರ ವಿಧಿನಿರ್ಣಯಗಳನ್ನೆಲ್ಲಾ ಅನುಸರಿಸಬೇಕು; ಆಗ ನೀವು ದೀರ್ಘಕಾಲ ಬಾಳುವಿರಿ. ಅದಕ್ಕಾಗಿಯೇ ಇವುಗಳನ್ನು ಆಜ್ಞಾಪಿಸಿದ್ದಾರೆ.


ನಾನು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡುವೆನು. ಹೀಗೆ ನಾನು ಅವರಿಗೆ ಒಳಿತನ್ನು ಮಾಡುವುದನ್ನು ಬಿಡೆನು. ನನ್ನ ಬಗ್ಗೆ ಅವರ ಹೃದಯದಲ್ಲಿ ಭಯಭಕ್ತಿ ನೆಲಸುವಂತೆ ಮಾಡುವೆನು. ಆಗ ಅವರು ನನ್ನನ್ನು ಬಿಟ್ಟು ಅಗಲಿಹೋಗರು.


ಸ್ವರ್ಗೀಯ ಸಭೆಯಲಿ ಪ್ರತಿಭಾವಂತನು ದೇವನು II ಸುತ್ತಣದೆಲ್ಲ ಪರಿವಾರಕ್ಕಿಂತ ಬಹು ಭೀಕರನು II


ಅನಂತರ ನಾಮಾನನು ತನ್ನ ಪರಿವಾರದವರೊಡನೆ ಹಿಂದಿರುಗಿ ದೈವಪುರುಷನ ಬಳಿಗೆ ಹೋಗಿ ಅವನ ಮುಂದೆ ನಿಂತನು. “ಇಸ್ರಯೇಲ್ ನಾಡಿನಲ್ಲಿರುವ ದೇವರ ಹೊರತು, ಲೋಕದಲ್ಲಿ ಬೇರೆ ದೇವರು ಇಲ್ಲವೇ ಇಲ್ಲವೆಂಬುದು ಈಗ ನನಗೆ ಗೊತ್ತಾಯಿತು; ತಾವು ದಯವಿಟ್ಟು ಈ ಕಾಣಿಕೆಯನ್ನು ಅಂಗೀಕರಿಸಬೇಕು,” ಎಂದು ಹೇಳಿದನು.


ಅವರು ಈ ದಿನ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವರು. ನಾನು ನಿನ್ನನ್ನು ಕೊಂದು, ನಿನ್ನ ತಲೆಯನ್ನು ಕಡಿದು, ಫಿಲಿಷ್ಟಿಯ ಸೈನ್ಯದ ಶವಗಳನ್ನು ಆಕಾಶದ ಪಕ್ಷಿಗಳಿಗೂ ವನ್ಯಮೃಗಗಳಿಗೂ ಹಂಚಿಕೊಡುವೆನು. ಇದರಿಂದ ಇಸ್ರಯೇಲರ ಸಂಗಡ ದೇವರಿದ್ದಾರೆಂಬುದು ಜಗತ್ತಿಗೆಲ್ಲಾ ತಿಳಿದುಬರುವುದು.


ಅದಕ್ಕೆ ಮೋಶೆ, “ಭಯಪಡಬೇಡಿ; ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ ಬಂದಿದ್ದಾರೆ; ಹೀಗೆ ದೈವಭೀತಿ ನಿಮ್ಮ ಕಣ್ಮುಂದಿದ್ದು ನೀವು ಪಾಪಮಾಡದೆ ಇರುವಿರಿ,” ಎಂದನು.


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೆ ನಿನ್ನನ್ನು ಸಾಯಿಸದೆ ಉಳಿಸಿದ್ದೇನೆ.


ಜಗದ ಜನರೆಲ್ಲರು ನಿಮ್ಮನ್ನು ಸರ್ವೇಶ್ವರನ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು.


ಭೂಲೋಕದ ಜನರೆಲ್ಲರೂ ಸರ್ವೇಶ್ವರನ ಹೊರತು ಬೇರೆ ದೇವರಿಲ್ಲವೆಂಬುದನ್ನು ತಿಳಿದುಕೊಳ್ಳುವಂತೆ, ಅವರು ಅವಶ್ಯವಿರುವಾಗೆಲ್ಲಾ ತಮ್ಮ ದಾಸನ ಹಾಗು ಪ್ರಜೆಗಳಾದ ಇಸ್ರಯೇಲರ ನ್ಯಾಯವನ್ನು ಸ್ಥಾಪಿಸುತ್ತಾ ಬರಲಿ.


ಆಗ ನಮ್ಮ ಪಿತೃಗಳಿಗೆ ನೀವು ಕೊಟ್ಟ ಈ ನಾಡಿನಲ್ಲಿ ಅವರು ವಾಸಿಸುವ ಕಾಲವೆಲ್ಲಾ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿರುವರು.


ದೇವರಾದ ನನಗಿರುವಂಥ ಭುಜಬಲ ನಿನಗಿದೆಯೋ? ನನ್ನ ಧ್ವನಿಗೆ ಸಮನಾಗಿ ನೀನು ಗುಡುಗಬಲ್ಲೆಯೋ?


ಪ್ರದರ್ಶಿಸಿಹನು ಸ್ವಾಮಿ ಸರ್ವೇಶ್ವರನು ರಾಷ್ಟ್ರಗಳಿಗೆಲ್ಲ ತನ್ನ ಶ್ರೀಶಕ್ತಿಯನು. ಕಾಣುವುವು ಜಗದ ಎಲ್ಲೆ ಎಲ್ಲೆಗಳು ನಮ್ಮ ದೇವ ಸಾಧಿಸುವ ಮುಕ್ತಿಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು