Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 4:3 - ಕನ್ನಡ ಸತ್ಯವೇದವು C.L. Bible (BSI)

3 ಅವರಿಗೆ, ‘ನೀವು ಜೋರ್ಡನಿನ ಮಧ್ಯದಲ್ಲಿ ಯಾಜಕರು ನಿಂತ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ, ಅವುಗಳನ್ನು ನಿಮ್ಮ ಸಂಗಡ ಈಚೆ ದಡಕ್ಕೆ ತಂದು ನೀವು ಈ ರಾತ್ರಿ ತಂಗುವ ಸ್ಥಳದಲ್ಲಿ ನಿಲ್ಲಿಸಿ’ ಎಂದು ಆಜ್ಞಾಪಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೊರ್ದನಿನ ಮಧ್ಯದಲ್ಲಿ ಯಾಜಕರು ನಿಂತಿದ್ದ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ಅವುಗಳನ್ನು ನಿಮ್ಮ ಸಂಗಡ ಈಚೇ ದಡಕ್ಕೆ ತಂದು ನೀವು ಈ ರಾತ್ರಿ ತಂಗುವ ಸ್ಥಳದಲ್ಲಿ ನಿಲ್ಲಿಸಿರಿ” ಎಂದು ಆಜ್ಞಾಪಿಸು ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೊರ್ದನಿನ ಮಧ್ಯದಲ್ಲಿ ಯಾಜಕರು ನಿಂತಿರುವ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ಅವುಗಳನ್ನು ನಿಮ್ಮ ಸಂಗಡ ಈಚೇ ದಡಕ್ಕೆ ತಂದು ನೀವು ಈ ರಾತ್ರಿ ಇಳುಕೊಳ್ಳುವ ಸ್ಥಳದಲ್ಲಿ ನಿಲ್ಲಿಸಿರಿ ಎಂದು ಆಜ್ಞಾಪಿಸಬೇಕೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನದಿಯಲ್ಲಿ ಯಾಜಕರು ನಿಂತುಕೊಂಡಿದ್ದ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ಹುಡುಕಿ ತೆಗೆದುಕೊಂಡು ಬರುವುದಕ್ಕೆ ಅವರಿಗೆ ಹೇಳು. ನೀವು ಈ ರಾತ್ರಿ ಇಳಿದುಕೊಳ್ಳುವ ಸ್ಥಳದಲ್ಲಿ ಆ ಕಲ್ಲುಗಳನ್ನು ನಿಲ್ಲಿಸಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೊರ್ದನ್ ನದಿ ಮಧ್ಯದಲ್ಲಿ ಯಾಜಕರ ಕಾಲುಗಳು ಸ್ಥಿರವಾಗಿ ನಿಂತ ಸ್ಥಳದಲ್ಲಿಂದ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು, ಅವುಗಳನ್ನು ನಿಮ್ಮ ಸಂಗಡ ಆಚೆದಡಕ್ಕೆ ತಂದು, ನೀವು ಈ ರಾತ್ರಿಯಲ್ಲಿ ಇಳಿದುಕೊಳ್ಳುವ ಸ್ಥಳದಲ್ಲಿ ಅವುಗಳನ್ನು ಹಾಕಿರಿ ಎಂದು ಅವರಿಗೆ ಆಜ್ಞಾಪಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 4:3
11 ತಿಳಿವುಗಳ ಹೋಲಿಕೆ  

ಇಸ್ರಯೇಲರು ಯೆಹೋಶುವನು ಆಜ್ಞಾಪಿಸಿದಂತೆಯೇ ಮಾಡಿದರು. ಸರ್ವೇಶ್ವರಸ್ವಾಮಿ ಯೆಹೋಶುವನಿಗೆ ಹೇಳಿದ ಪ್ರಕಾರ ಅವರು ಇಸ್ರಯೇಲರ ಸಂಖ್ಯೆಗೆ ಅನುಸಾರವಾಗಿ ಜೋರ್ಡನಿನ ಮಧ್ಯದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ತಮ್ಮ ಬಿಡಾರದ ಸ್ಥಳಕ್ಕೆ ತಂದು ಅಲ್ಲಿ ಅವುಗಳನ್ನು ನಿಲ್ಲಿಸಿದರು.


ಸರ್ವಲೋಕದ ಒಡೆಯನಾದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಜೋರ್ಡನ್ ನದಿಯ ನೀರಿನಲ್ಲಿ ಇಡುತ್ತಲೇ ಮೇಲಿಂದ ಹರಿದುಬರುವ ನೀರು ಮುಂದೆ ಸಾಗದೆ ಅಲ್ಲೇ ರಾಶಿಯಾಗಿ ನಿಂತುಕೊಳ್ಳುವುದು,” ಎಂದು ತಿಳಿಸಿದನು.


ಅದಕ್ಕೆ ಯೇಸು, “ಇವರು ಸುಮ್ಮನಾದರೆ ಈ ಕಲ್ಲುಗಳೇ ಕೂಗತೊಡಗುವುವು ಎಂಬುದು ನಿಮಗೆ ತಿಳಿದಿರಲಿ,” ಎಂದರು.


ಭಜಿಸು ನನ್ನ ಮನವೇ, ಭಜಿಸು ಪ್ರಭುವನು I ಮರೆಯದಿರು ಆತನ ಉಪಕಾರಗಳೊಂದನು II


ಪ್ರಭು ಪ್ರಸನ್ನವಿರುವನು ಪವಿತ್ರಾಲಯದಲಿ I ಸ್ಥಾಪಿಸಿಹನು ಸಿಂಹಾಸನವನು ಪರದಲಿ I ನರಮಾನವರನು ನೋಡುತಿಹನು ನೇತ್ರಗಳಲಿ I ಪರೀಕ್ಷಿಸುತಿಹನು ಅವರನು ಸೂಕ್ಷ್ಮರೀತಿಯಲಿ II


ಅನಂತರ ಸಮುವೇಲನು ಮಿಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ, “ಸರ್ವೇಶ್ವರ ಇಲ್ಲಿಯವರೆಗೆ ನಮಗೆ ಸಹಾಯ ಮಾಡಿದರು,” ಎಂದು ಹೇಳಿ ಅದಕ್ಕೆ, ‘ಎಬನೆಜೆರ್’ ಎಂದು ಹೆಸರಿಟ್ಟನು.


ಬಳಿಕ ಎಲ್ಲಾ ಜನರಿಗೆ, “ಇಗೋ, ನೋಡಿ ಈ ಕಲ್ಲು! ಇದು ನಿಮ್ಮ ವಿಷಯದಲ್ಲಿ ಸಾಕ್ಷಿ ಹೇಳುವುದು. ಸರ್ವೇಶ್ವರ ನಮಗೆ ಹೇಳಿದ ಎಲ್ಲ ಮಾತುಗಳನ್ನು ಇದು ಕೇಳಿದೆ.


ನಾನು ಸ್ಮಾರಕಸ್ತಂಭವಾಗಿ ನೆಟ್ಟಿರುವ ಈ ಕಲ್ಲು ದೇವರ ಮನೆಯಾಗುವುದು; ಅದು ಮಾತ್ರವಲ್ಲ, ನೀವು ನನಗೆ ಕೊಡುವ ಎಲ್ಲ ಆಸ್ತಿಪಾಸ್ತಿಯಲ್ಲಿ ಹತ್ತರಲ್ಲಿ ಒಂದು ಪಾಲನ್ನು ನಿಮಗೆ ಸಮರ್ಪಿಸುತ್ತೇನೆಂದು ಮಾತುಕೊಡುತ್ತೇನೆ.”


ಆಗ ಯೆಹೋಶುವನು ತಾನು ಇಸ್ರಯೇಲರಿಂದ ಕುಲಕ್ಕೆ ಒಬ್ಬನಂತೆ ಆರಿಸಿಕೊಂಡ ಹನ್ನೆರಡು ಮಂದಿಯನ್ನು ಕರೆದು ಅವರಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು