Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 4:6 - ಕನ್ನಡ ಸತ್ಯವೇದವು C.L. Bible (BSI)

6 ಅವು ನಿಮ್ಮ ಮಧ್ಯೆ ಸ್ಮಾರಕ ಆಗಿರುವುವು. ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು, ‘ಈ ಕಲ್ಲುಗಳು ಏನನ್ನು ಸೂಚಿಸುತ್ತವೆ?’ ಎಂದು ಕೇಳುವಾಗ ನೀವು ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವು ನಿಮ್ಮ ಮಧ್ಯದಲ್ಲಿ ಗುರುತಾಗಿರುವವು. ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ‘ಈ ಕಲ್ಲುಗಳು ಏನು ಸೂಚಿಸುತ್ತವೆ?’ ಎಂದು ನಿಮ್ಮನ್ನು ಕೇಳುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವು ನಿಮ್ಮ ಮಧ್ಯದಲ್ಲಿ ಗುರುತಾಗಿರುವವು. ಮುಂದಣ ಕಾಲದಲ್ಲಿ ನಿಮ್ಮ ಮಕ್ಕಳು - ಈ ಕಲ್ಲುಗಳು ಏನು ಸೂಚಿಸುತ್ತವೆಂದು ನಿಮ್ಮನ್ನು ಕೇಳುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಈ ಕಲ್ಲುಗಳು ನಿಮ್ಮ ಮಧ್ಯದಲ್ಲಿ ಗುರುತಾಗಿರುವವು. ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು, ‘ಈ ಕಲ್ಲುಗಳು ಏನು ಸೂಚಿಸುತ್ತವೆ?’ ಎಂದು ಕೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಏಕೆಂದರೆ ಇದು ನಿಮ್ಮ ಮಧ್ಯದಲ್ಲಿ ಗುರುತಾಗಿರಬೇಕು. ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು, ‘ಈ ಕಲ್ಲುಗಳೇನು?’ ಎಂದು ಕೇಳುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 4:6
19 ತಿಳಿವುಗಳ ಹೋಲಿಕೆ  

ಇನ್ನು ಮುಂದೆ ನಿಮ್ಮ ಮಕ್ಕಳು, ಇದರ ಅರ್ಥವೇನೆಂದು ವಿಚಾರಿಸುವಾಗ ನೀವು ಅವರಿಗೆ, ‘ನಾವು ಗುಲಾಮತನದಲ್ಲಿದ್ದಾಗ ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ಈಜಿಪ್ಟಿನಿಂದ ನಮ್ಮನ್ನು ಬಿಡುಗಡೆ ಮಾಡಿದರು.


ಆತ ಇಸ್ರಯೇಲರಿಗೆ, “ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ಈ ಕಲ್ಲುಗಳನ್ನು ಏಕೆ ನೆಟ್ಟಿದ್ದಾರೆಂದು ಕೇಳಿದರೆ ನೀವು ಅವರಿಗೆ,


ಕೇಳಿದೆವು ಕಿವಿಯಾರೆ ದೇವಾ, ನೀ ಎಸಗಿದ ಘನಕಾರ್ಯಗಳನು I ವಿವರಿಸಿಹರು ನಮ್ಮ ಪೂರ್ವಜರು ನಿನ್ನಾ ಮಹತ್ಕಾರ್ಯಗಳನು II


ಆದರೆ ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿ, ಸಮರ್ಪಣಬಲಿ, ಶಾಂತಿಸಮಾಧಾನದ ಬಲಿ ಮುಂತಾದುವುಗಳನ್ನು ಅರ್ಪಿಸಿ ಆರಾಧಿಸುವುದಕ್ಕೆ ನಿಮಗೆ ಹಕ್ಕು ಉಂಟೆಂಬುದಕ್ಕೆ ಇದು ಗುರುತಾಗಿರಲಿ. ನಮಗೂ ನಿಮಗೂ ನಮ್ಮ ಸಂತಾನಕ್ಕೂ ನಿಮ್ಮ ಸಂತಾನಕ್ಕೂ ಇದು ಸಾಕ್ಷಿಯಾಗಿರಲಿ.’ ಇದರಿಂದ ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಸರ್ವೇಶ್ವರನಲ್ಲಿ ನಿಮಗೆ ಪಾಲಿಲ್ಲ’ ಎಂದು ಹೇಳುವುದಕ್ಕೆ ಆಸ್ಪದವಿರದು.


ನೀವು ಮನೆಯಲ್ಲಿರುವಾಗಲೂ ಪ್ರಯಾಣದಲ್ಲಿರುವಾಗಲೂ ಮಲಗುವಾಗಲೂ ಏಳುವಾಗಲೂ ಇವುಗಳ ವಿಷಯದಲ್ಲಿ ಮಾತಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಮನದಟ್ಟಾಗಿಸಬೇಕು.


ಬೆಳೆಯುವುದು ಮುಳ್ಳಿಗೆ ಬದಲಾಗಿ ದೇವದಾರು, ದತ್ತೂರಿಗೆ ಪ್ರತಿಯಾಗಿ ಸುಗಂಧದ ಮರವು. ಉಳಿದಿರುತ್ತದೆ ಆ ವನವು ಶಾಶ್ವತ ಗುರುತಾಗಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆಗಾಗಿ.”


ಜೀವಂತನು, ಜೀವಂತನು ಮಾತ್ರವೇ ನಿನ್ನ ಸ್ತುತಿಮಾಡುವಂತೆ ನಾನಿಂದು ನಿನ್ನನ್ನು ಜೀವಂತನಾಗಿ ಸ್ತುತಿಮಾಡುತ್ತಿರುವೆ ನಿನ್ನ ಸತ್ಯಸಂಧತೆಯನ್ನು ಮಕ್ಕಳಿಗೆ ಬೋಧಿಸುವನು ತಂದೆ.


ದೇವಾ, ನರೆಯ ಮುದುಕನಾಗಿರುವಾಗ ನನ್ನ ಕೈ ಬಿಡಬೇಡಯ್ಯಾ I ನಿನ್ನ ಪರಾಕ್ರಮವನು ಮುಂದಿನ ಪೀಳಿಗೆಗೆ ಸಾರುವ ತನಕ ಬೇಡವಯ್ಯಾ I ನಿನ್ನ ಪ್ರತಾಪವನು ತಲತಲಾಂತರದವರೆಗೆ ಪ್ರಕಟಿಸುವೆನಯ್ಯಾ II


ಈ ವಾಗ್ದಾನವನ್ನು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಗೂ ದೂರ ಇರುವ ಎಲ್ಲರಿಗೂ ಮತ್ತು ಸರ್ವೇಶ್ವರನಾದ ದೇವರು ತಮ್ಮತ್ತ ಆಹ್ವಾನಿಸುವ ಪ್ರತಿಯೊಬ್ಬನಿಗೂ ಮಾಡಲಾಗಿದೆ,” ಎಂದನು.


ನಾನು ನೇಮಿಸಿದ ಸಬ್ಬತ್ ದಿನಗಳನ್ನು ನನ್ನ ದಿನಗಳೆಂದು ಆಚರಿಸಿರಿ; ನಾನು ನಿಮ್ಮ ದೇವರಾದ ಸರ್ವೇಶ್ವರ ಎಂದು ನೀವು ತಿಳಿದುಕೊಳ್ಳುವಂತೆ ಅವು ನಿಮಗೂ ನನಗೂ ಗುರುತಾಗಿರುವುವು’ ಎಂದು ಹೇಳಿದೆ.


ಇದಲ್ಲದೆ, ತಮ್ಮನ್ನು ದೇವಜನರನ್ನಾಗಿ ಮಾಡಿರುವ ಸರ್ವೇಶ್ವರ ನಾನೇ ಎಂದು ಅವರು ತಿಳಿದುಕೊಳ್ಳುವಂತೆ ನನಗೂ ಅವರಿಗೂ ಸಂಕೇತವಾದ ಸಬ್ಬತ್ ದಿನಗಳನ್ನು ಅವರಿಗೆ ನೇಮಿಸಿದೆ.


ಆ ಧೂಪಾರತಿಗಳು ಸರ್ವೇಶ್ವರನ ಸನ್ನಿಧಿಗೆ ತರಲಾದವುಗಳು. ಈ ಕಾರಣ ಪವಿತ್ರವಾದುವು. ಆದುದರಿಂದ ಅವುಗಳನ್ನು ತಗಡುಗಳಾಗಿ ತಟ್ಟಿ ಬಲಿಪೀಠಕ್ಕೆ ಮುಚ್ಚಳವನ್ನಾಗಿ ಮಾಡಿಸು. ಹೀಗೆ ಅವು ಇಸ್ರಯೇಲರಿಗೆ ನೆನಪು ಹುಟ್ಟಿಸುವ ಗುರುತುಗಳಾಗುವುವು,” ಎಂದು ಹೇಳಿದರು.


ಇದಕ್ಕೆ ಈ ಆಚರಣೆಯು ನಮ್ಮ ಕೈಗೆ ಕಟ್ಟಿದ ಕಂಕಣದಂತೆ, ಹಣೆಗೆ ಕಟ್ಟಿದ ಜ್ಞಾಪಕ ಪಟ್ಟಿಯಂತೆ ಇರುತ್ತದೆ.


ಆ ದಿನವು ನಿಮಗೆ ಸ್ಮರಣೀಯ ದಿನವಾಗಿರುವುದು. ಅಂದು ನೀವು ಸರ್ವೇಶ್ವರನ ಗೌರವಾರ್ಥ ಹಬ್ಬವನ್ನು ಕೊಂಡಾಡಬೇಕು. ಅದನ್ನು ಶಾಶ್ವತ ನಿಯಮವೆಂದು ತಲತಲಾಂತರಕ್ಕೂ ಆಚರಿಸಬೇಕು.


“ನೀವು ನಮ್ಮ ದೇವರಾದ ಸರ್ವೇಶ್ವರನ ಮಂಜೂಷದ ಮುಂದಾಗಿ ಜೋರ್ಡನಿನ ಮಧ್ಯಕ್ಕೆ ಹೋಗಿ ಇಸ್ರಯೇಲ್ ಕುಲಗಳ ಸಂಖ್ಯೆಗೆ ಸರಿಯಾಗಿ ಪ್ರತಿಯೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಬನ್ನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು