Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 5:14 - ಕನ್ನಡ ಸತ್ಯವೇದವು C.L. Bible (BSI)

14 ಆಗ ಆ ವ್ಯಕ್ತಿ, “ನಾನು ಅಂಥವನಲ್ಲ; ನಾನು ಸರ್ವೇಶ್ವರನ ಸೇನಾಪತಿ. ಇದೀಗಲೆ ಬಂದವನು,’ ಎಂದು ಉತ್ತರಿಸಿದನು. ಕೂಡಲೆ ಯೆಹೋಶುವ ಅವನಿಗೆ ಸಾಷ್ಟಾಂಗವೆರಗಿ, “ಒಡೆಯಾ, ತಮ್ಮ ದಾಸನಾದ ನನಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ಮನುಷ್ಯನು “ನಾನು ಅಂಥವನಲ್ಲ; ಯೆಹೋವನ ಸೇನಾಧಿಪತಿ; ಈಗಲೇ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ “ಒಡೆಯಾ, ನಿಮ್ಮ ದಾಸನಾದ ನನಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ?” ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆ ಮನುಷ್ಯನು - ನಾನು ಅಂಥವನಲ್ಲ; ಯೆಹೋವನ ಸೇನಾಪತಿಯು; ಈಗಲೇ ಬಂದಿದ್ದೇನೆ ಎಂದನು. ಆಗ ಯೆಹೋಶುವನು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ - ಸ್ವಾವಿುಯವರು ತಮ್ಮ ಸೇವಕನಿಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆ ಮನುಷ್ಯನು, “ನಾನು ಶತ್ರುವಲ್ಲ, ನಾನು ಯೆಹೋವನ ಸೇನಾಧಿಪತಿ. ನಾನು ಈಗಲೇ ನಿನ್ನಲ್ಲಿಗೆ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ನೆಲದವರೆಗೂ ತಲೆಬಾಗಿ ನಮಸ್ಕರಿಸಿ ಅವನಿಗೆ, “ನಾನು ನಿನ್ನ ಸೇವಕ. ನನ್ನ ಒಡೆಯನು ನನಗೆ ಯಾವುದಾದರೂ ಆಜ್ಞೆಯನ್ನು ವಿಧಿಸಬೇಕಾಗಿದೆಯೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅದಕ್ಕೆ ಆತನು, “ನಾನು ಅಂಥವನಲ್ಲ, ಯೆಹೋವ ದೇವರ ಸೈನ್ಯದ ಅಧಿಪತಿಯಾಗಿ ಈಗ ನಾನು ಬಂದಿದ್ದೇನೆ,” ಎಂದನು. ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ, ಆತನಿಗೆ, “ನನ್ನ ಒಡೆಯಾ, ತಮ್ಮ ಸೇವಕನಿಗೆ ಹೇಳಬೇಕಾಗಿರುವ ಸಂದೇಶವೇನು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 5:14
35 ತಿಳಿವುಗಳ ಹೋಲಿಕೆ  

ನೇಮಿಸಿರುವೆ ಆತನನು ಜನಗಳಿಗೆ ಸಾಕ್ಷಿಯನ್ನಾಗಿ ಜನಾಂಗಗಳಿಗೆ ನಾಯಕನನ್ನಾಗಿ, ಅಧಿಪತಿಯನ್ನಾಗಿ.


ಅಬ್ರಾಮನು ಅಡ್ಡಬಿದ್ದು ಸಾಷ್ಟಾಂಗ ಪ್ರಣಾಮ ಮಾಡಿದನು.


“ನಿನ್ನ ಶತ್ರುಗಳನ್ನು ನಾನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು ಎಂದು ‘ನನ್ನ ಪ್ರಭುವಿಗೆ’ ಸರ್ವೇಶ್ವರ ಹೇಳಿದ್ದಾರೆ.”


“ಆ ಕಾಲದಲ್ಲಿ ನಿನ್ನ ಜನರ ಪಕ್ಷ ವಹಿಸುವ ಮಹಾದೂತನಾದ ಮಿಕಾಯೇಲನು ಕಾಣಿಸಿಕೊಳ್ಳುವನು. ಮೊತ್ತಮೊದಲು, ಮಾನವ ಜನಾಂಗ ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದ ಘೋರ ಸಂಕಟ ಉಂಟಾಗುವುದು. ಆಗ ನಿನ್ನ ಜನರಲ್ಲಿ ಯಾರ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಇರುವುದೋ ಅವರೆಲ್ಲರು ಜೀವೋದ್ಧಾರವನ್ನು ಪಡೆಯುವರು.


ಪರ್ಷಿಯ ರಾಜ್ಯದ ಕಾವಲುದೂತನು ಇಪ್ಪತ್ತೊಂದು ದಿನ ನನ್ನನ್ನು ಎದುರಿಸಿ ನಿಂತನು. ಆದರೆ ಪ್ರಧಾನ ದೂತರಲ್ಲಿ ಒಬ್ಬನಾದ ಮಿಕಾಯೇಲನು ನನ್ನ ಸಹಾಯಕ್ಕೆ ಬಂದನು. ಅಲ್ಲಿನ ಪರ್ಷಿಯ ರಾಜರ ಸಂಗಡ ಹೋರಾಡಲು ಅವನನ್ನು ಬಿಟ್ಟು ಬಂದಿದ್ದೇನೆ.


ಸ್ವರ್ಗದಲ್ಲಿ ಒಂದು ಯುದ್ಧ ಪ್ರಾರಂಭವಾಯಿತು. ಮಿಕಾಯೇಲನು ತನ್ನ ಸಹದೂತರ ಸಹಿತ ಘಟಸರ್ಪದ ವಿರುದ್ಧ ಯುದ್ಧಮಾಡಿದನು. ಘಟಸರ್ಪವೂ ತನ್ನ ದೂತರ ಸಮೇತ ಯುದ್ಧದಲ್ಲಿ ಕಾದಾಡಿತು.


ಆಗ ತೋಮನು, “ನನ್ನ ಪ್ರಭುವೇ, ನನ್ನ ದೇವರೇ,” ಎಂದನು.


‘ನಿನ್ನ ಶತ್ರುಗಳನ್ನು ನಾನು ನಿನ್ನ ಪಾದದಡಿ ಹಾಕುವ ತನಕ ನನ್ನ ಬಲಗಡೆ ಆಸೀನನಾಗಿರು ಎಂದು ನನ್ನ ‘ಪ್ರಭು’ವಿಗೆ ಸರ್ವೇಶ್ವರ ಹೇಳಿರುವರು.’ ಎಂದಿದ್ದಾನಲ್ಲವೆ?


ಆಗ ಒಬ್ಬ ಕುಷ್ಠರೋಗಿ ಯೇಸುವಿನ ಮುಂದೆ ಬಂದು, ತಲೆಬಾಗಿ, “ಸ್ವಾಮೀ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ,” ಎಂದು ಬೇಡಿದನು.


ಸತ್ಯಗ್ರಂಥದಲ್ಲಿ ಲಿಖಿತವಾದುದನ್ನು ಈಗ ನಿನಗೆ ತಿಳಿಸುತ್ತೇನೆ. ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಕಾವಲುದೂತನಾದ ಮಿಕಾಯೇಲನ ಹೊರತು ನನಗೆ ಬೆಂಬಲಿಗರಾಗತಕ್ಕವರು ಇನ್ನಾರೂ ಇಲ್ಲ.


ಆಗ, “ಯಾರನ್ನು ಕಳುಹಿಸಲಿ? ನಮ್ಮ ಪರವಾಗಿ ಹೋಗುವವರು ಯಾರು?” ಎಂಬ ನುಡಿ ಕೇಳಿಸಿತು. ಅದಕ್ಕೆ ನಾನು, “ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿ” ಎಂದೆನು.


ಸಮಸ್ತವನ್ನೂ ಸೃಷ್ಟಿಸಿ ಪರಿಪಾಲಿಸಿಕೊಂಡುಬರುವ ದೇವರು ತಮ್ಮ ಮಹಿಮೆಯಲ್ಲಿ ಪಾಲುಗೊಳ್ಳಲು ಮಕ್ಕಳನೇಕರನ್ನು ಕರೆತರುವಂತೆ ಉದ್ಧಾರ ಪ್ರವರ್ತಕರಾದ ಯೇಸುವನ್ನು ಹಿಂಸೆಬಾಧೆಗಳ ಮೂಲಕ ಪರಿಪೂರ್ಣವಾಗಿಸಿದ್ದು ಯುಕ್ತವೇ ಸರಿ.


ನಿಶ್ಚಯವಾಗಿಯೂ ನನ್ನ ಪ್ರಭು ಯೇಸುಕ್ರಿಸ್ತರನ್ನು ಅರಿತುಕೊಳ್ಳುವುದೇ ಉತ್ಕೃಷ್ಟವಾದುದೆಂದು ಮನದಟ್ಟಾಗಿರುವುದರಿಂದ ಸಮಸ್ತವನ್ನೂ ವ್ಯರ್ಥವೆಂದೇ ಎಣಿಸುತ್ತೇನೆ. ಅವರನ್ನು ಲಭ್ಯವಾಗಿಸಿಕೊಳ್ಳುವ ಸಲುವಾಗಿ ಎಲ್ಲವನ್ನೂ ತೊರೆದುಬಿಟ್ಟಿದ್ದೇನೆ, ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.


ನೀನೆದ್ದು ಪಟ್ಟಣಕ್ಕೆ ಹೋಗು, ಏನು ಮಾಡಬೇಕೆಂದು ನಿನಗೆ ಅಲ್ಲಿ ತಿಳಿಸಲಾಗುವುದು,” ಎಂದು ಆ ವಾಣಿ ಹೇಳಿತು.


ನನ್ನ ಪ್ರಭುವಿನ ತಾಯಿ ನೀನು; ನನ್ನ ಬಳಿಗೆ ಬಂದುದು ಅದೆಂಥ ಭಾಗ್ಯ!


ನುಡಿದಿಹನು ಇಂತೆಂದು ಪ್ರಭು ನನ್ನೊಡೆಯನಿಗೆ I “ಆಸೀನನಾಗಿರು ನೀನು ನನ್ನ ಬಲಗಡೆಗೆ I ಹಗೆಗಳನು ನಿನಗೆ ಕಾಲ್ಮಣೆಯಾಗಿಸುವವರೆಗೆ” II


ಸರ್ವೇಶ್ವರನ ಸನ್ನಿಧಿಯಿಂದ ಅಗ್ನಿ ಹೊರಟು ಬಲಿಪೀಠದ ಮೇಲಿದ್ದ ದಹನಬಲಿದ್ರವ್ಯವನ್ನೂ, ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರು ಅದನ್ನು ಕಂಡು ಜಯ ಜಯಕಾರ ಮಾಡಿದರು; ಅಡ್ಡಬಿದ್ದು ನಮಸ್ಕರಿಸಿದರು.


ಆದರೆ ಮೋಶೆ ಸರ್ವೇಶ್ವರನಿಗೆ, “ಸ್ವಾಮಿ, ನಾನು ವಾಕ್ಚಾತುರ್ಯ ಇಲ್ಲದವನು; ಮೊದಲಿನಿಂದಲೂ ಹಾಗು ತಾವು ನಿಮ್ಮ ದಾಸನ ಸಂಗಡ ಮಾತಾಡಿದ ಮೇಲೆಯೂ ಹಾಗೆಯೇ ಇದ್ದೇನೆ. ನನ್ನ ಮಾತು ತೊದಲು, ನನ್ನ ನಾಲಿಗೆ ಮಂದ,” ಎಂದನು.


ಅಬ್ರಹಾಮನು ಅಡ್ಡಬಿದ್ದು ಸಾಷ್ಟಾಂಗ ಪ್ರಣಾಮ ಮಾಡಿದನು. ಆದರೆ, "ನೂರು ವರ್ಷದವನಿಗೆ ಮಗ ಹುಟ್ಟುವುದುಂಟೆ? ತೊಂಬತ್ತು ವರ್ಷದವಳಾದ ಸಾರಳು ಹೆತ್ತಾಳೆ?” ಎಂದು ಅಬ್ರಹಾಮನು ಮನಸ್ಸಿನಲ್ಲೇ ನೆನೆದು ನಕ್ಕು ದೇವರಿಗೆ,


ಯೇಸುಸ್ವಾಮಿ ಒಂದು ಪಟ್ಟಣದಲ್ಲಿ ಇದ್ದಾಗ, ಮೈಯೆಲ್ಲಾ ಕುಷ್ಠ ಹಿಡಿದಿದ್ದ ರೋಗಿ ಒಬ್ಬನು ಅಲ್ಲಿಗೆ ಬಂದು ಅವರಿಗೆ ಅಡ್ಡಬಿದ್ದು, “ಸ್ವಾಮೀ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ,” ಎಂದು ಬೇಡಿಕೊಂಡನು.


ಮೋಶೆ ಮತ್ತು ಆರೋನರು ಅಡ್ಡಬಿದ್ದು, “ದೇವರೇ, ಸರ್ವ ದೇಹಾತ್ಮಗಳಿಗೆ ದೇವರಾಗಿರುವವರೇ, ಒಬ್ಬನೇ ಒಬ್ಬನು ಪಾಪ ಮಾಡಿರುವಲ್ಲಿ ನೀವು ಸಮುದಾಯದ ಎಲ್ಲರ ಮೇಲೆ ಕೋಪಗೊಳ್ಳಬಹುದೆ?” ಎಂದು ಭಿನ್ನವಿಸಿದರು.


ಅದಕ್ಕೆ ಮೋಶೆ, “ಸ್ವಾಮೀ, ಈ ಕಾರ್ಯಕ್ಕೆ ತಾವು ಬೇರೊಬ್ಬನನ್ನು ನೇಮಿಸಬೇಕು,” ಎನ್ನಲು, ಸರ್ವೇಶ್ವರ ಅವನ ಮೇಲೆ ಸಿಟ್ಟುಗೊಂಡರು.


ಯಾರಿವನು ಮಹಿಮಾವಂತ ರಾಜಾಧಿರಾಜನು? I ಇವನೇ ಸೇನಾಧೀಶ್ವರನು, ಮಹಿಮಾರಾಜನು II


ಅಷ್ಟರಲ್ಲೇ ಸರ್ವೇಶ್ವರ ಬಿಳಾಮನ ಕಣ್ಣುಗಳನ್ನು ತೆರೆದರು. ಅವರ ದೂತನು ಬಿಚ್ಚುಕತ್ತಿಯನ್ನು ಹಿಡಿದು ದಾರಿಯಲ್ಲೆ ನಿಂತಿರುವುದನ್ನು ಕಂಡನು. ಕೂಡಲೆ ಅಡ್ಡಬಿದ್ದು ನಮಸ್ಕರಿಸಿದನು.


ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ನೀನು ಇಸ್ರಯೇಲರಿಗೆ


ಸರ್ವೇಶ್ವರಾ, ಸರ್ವೆಶ್ವರಾ, ಇದೂ ಸಾಲದೆಂದೆಣಿಸಿ, ನಿಮ್ಮ ದಾಸನ ಬಹು ಮುಂದಿನ ಸಂತಾನದ ವಿಷಯದಲ್ಲೂ ತಾವು ವಾಗ್ದಾನ ಮಾಡಿರುವಿರಿ. ಸರ್ವೇಶ್ವರಾ, ಸರ್ವೇಶ್ವರಾ, ತಾವು ಹೀಗೆ ವರ್ತಿಸುವುದು ನರಮಾನವರಿಗೆ ಎಂಥಾ ಭಾಗ್ಯ!


ಸರ್ವೇಶ್ವರಾ, ಸರ್ವೇಶ್ವರಾ, ನಿಮ್ಮ ದಾಸ ದಾವೀದನನ್ನು ಚೆನ್ನಾಗಿ ಬಲ್ಲಿರಿ; ನಾನು ಇನ್ನೇನು ಹೇಳಲಿ?


ನಾನೆದ್ದು ಬಯಲು ಪ್ರದೇಶಕ್ಕೆ ಹೊರಟುಬಂದಾಗ, ಕೆಬಾರ್ ನದಿಯ ಹತ್ತಿರ ನನಗೆ ಮಹಿಮಾದ್ಭುತ ದರ್ಶನವು ಆದಂತೆ, ಇಗೋ ಅಲ್ಲಿಯೂ ಸರ್ವೇಶ್ವರನ ಮಹಿಮೆ ಪ್ರತ್ಯಕ್ಷವಾಯಿತು. ಅದನ್ನು ನೋಡಿ ಅಡ್ಡಬಿದ್ದೆ.


ಅದು ಮಾತ್ರವಲ್ಲ, ಆ ನಕ್ಷತ್ರಗಣದ ಅಧಿಪತಿಯನ್ನೇ ಎದುರಿಸುವಷ್ಟು ಉಬ್ಬಿಹೋಗಿ ಅನುದಿನದ ಬಲಿಯರ್ಪಣೆ ಆತನಿಗೆ ಸಲ್ಲದಂತೆ ಮಾಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು