ಯೆಹೋಶುವ 5:15 - ಕನ್ನಡ ಸತ್ಯವೇದವು C.L. Bible (BSI)15 ಆಗ ಸರ್ವೇಶ್ವರನ ಸೇನಾಪತಿ, “ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು. ಏಕೆಂದರೆ ನೀನು ನಿಂತಿರುವ ಸ್ಥಳ ಪವಿತ್ರವಾದುದು,” ಎಂದು ಹೇಳಿದನು. ಯೆಹೋಶುವ ಅಂತೆಯೇ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೆಹೋವನ ಸೇನಾಧಿಪತಿಯು “ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು, ಏಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು” ಎಂದು ಹೇಳಿದನು. ಯೆಹೋಶುವನು ಹಾಗೆಯೇ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯೆಹೋವನ ಸೇನಾಪತಿಯು - ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು ಎಂದು ಯೆಹೋಶುವನಿಗೆ ಹೇಳಿದನು. ಅವನು ಹಾಗೆಯೇ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೆಹೋವನ ಸೇನಾಧಿಪತಿಯು, “ನಿನ್ನ ಪಾದರಕ್ಷೆಗಳನ್ನು ಬಿಚ್ಚಿಬಿಡು. ಈಗ ನೀನು ನಿಂತುಕೊಂಡಿರುವ ಸ್ಥಳವು ಪವಿತ್ರವಾದದ್ದು” ಎಂದು ಹೇಳಿದನು. ಯೆಹೋಶುವನು ಅವನು ಹೇಳಿದಂತೆಯೇ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅದಕ್ಕೆ ಯೆಹೋವ ದೇವರ ಸೈನ್ಯದ ಅಧಿಪತಿಯು ಯೆಹೋಶುವನಿಗೆ, “ನಿನ್ನ ಕೆರಗಳನ್ನು ನಿನ್ನ ಕಾಲುಗಳಿಂದ ತೆಗೆದಿಡು. ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು,” ಎಂದನು. ಹಾಗೆಯೇ ಯೆಹೋಶುವನು ಮಾಡಿದನು. ಅಧ್ಯಾಯವನ್ನು ನೋಡಿ |