Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 5:2 - ಕನ್ನಡ ಸತ್ಯವೇದವು C.L. Bible (BSI)

2 ಆಗ ಸರ್ವೇಶ್ವರ ಯೆಹೋಶುವನಿಗೆ, “ನೀನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಇಸ್ರಯೇಲರಿಗೆ ಸುನ್ನತಿ ಮಾಡು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ಸಮಯದಲ್ಲಿ ಯೆಹೋವನು ಯೆಹೋಶುವನಿಗೆ “ನೀನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಪುನಃ ಇಸ್ರಾಯೇಲ್ಯರಿಗೆ ಸುನ್ನತಿ ಮಾಡು” ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆ ಸಮಯದಲ್ಲಿ ಯೆಹೋವನು ಯೆಹೋಶುವನಿಗೆ - ನೀನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಇಸ್ರಾಯೇಲ್ಯರಲ್ಲಿ ತಿರಿಗಿ ಸುನ್ನತಿಮಾಡು ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ಸಮಯದಲ್ಲಿ ಯೆಹೋವನು ಯೆಹೋಶುವನಿಗೆ, “ಕಲ್ಲುಗಳಿಂದ ಚೂರಿಗಳನ್ನು ಮಾಡಿಸಿ ಇಸ್ರೇಲಿನ ಗಂಡಸರಿಗೆ ಇನ್ನೊಮ್ಮೆ ಸುನ್ನತಿಯನ್ನು ಮಾಡಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆ ಕಾಲದಲ್ಲಿ ಯೆಹೋವ ದೇವರು ಯೆಹೋಶುವನಿಗೆ, “ನೀನು ಗಟ್ಟಿಯಾದ ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಪುನಃ ಇಸ್ರಾಯೇಲರಿಗೆ ಸುನ್ನತಿ ಮಾಡು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 5:2
8 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮತ್ತು ನಿಮ್ಮ ಸಂತತಿಯವರ ಅಂತರಂಗಕ್ಕೇ ಸುನ್ನತಿ ಮಾಡುವರು. ಆಗ ನೀವು ಅವರನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಬಾಳುವಿರಿ.


ಆದುದರಿಂದ ಅವರ ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿಮಾಡಿಕೊಳ್ಳಿ.


ಆಗ ಚಿಪ್ಪೋರಳು ಕಲ್ಲಿನ ಚೂರಿಯಿಂದ ತನ್ನ ಮಗನಿಗೆ ಸುನ್ನತಿ ಮಾಡಿ ಮೋಶೆಗೆ, “ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗ,” ಎಂದು ಹೇಳಿ


ಕ್ರಿಸ್ತಯೇಸುವಿನಲ್ಲಿಯೇ ನೀವು ಸುನ್ನತಿಯನ್ನು ಪಡೆದಿದ್ದೀರಿ. ಇದು ಶಾರೀರಿಕ ಸುನ್ನತಿಯಲ್ಲ, ಪಾಪಮಯ ಸ್ವಭಾವವನ್ನು ಕಿತ್ತೊಗೆಯುವ ಸುನ್ನತಿ. ಸ್ವಯಂ ಕ್ರಿಸ್ತಯೇಸುವೆ ಯೋಜಿಸಿದ ಸುನ್ನತಿ.


ತಾನು ಸುನ್ನತಿಮಾಡಿಸಿಕೊಳ್ಳುವ ಮೊದಲೇ ಅಬ್ರಹಾಮನು ಇಟ್ಟ ವಿಶ್ವಾಸದಿಂದಾಗಿ ದೇವರು ಆತನನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡರು. ಅನಂತರವೇ ಆತನು ಸುನ್ನತಿಯನ್ನು ಗುರುತಾಗಿಯೂ ಮುದ್ರೆಯನ್ನಾಗಿಯೂ ಪಡೆದನು. ಹೀಗೆ, ಸುನ್ನತಿ ಮಾಡಿಸಿಕೊಳ್ಳದಿದ್ದರೂ ವಿಶ್ವಾಸಿಸುವ ಎಲ್ಲರಿಗೆ ದೇವರೊಡನೆ ಸತ್ಸಂಬಂಧ ದೊರಕುವಂತೆ ಅಬ್ರಹಾಮನು ಮೂಲಪಿತನಾದನು.


ಯಾರು ಅಂತರಂಗದಲ್ಲಿ ಯೆಹೂದ್ಯನಾಗಿರುತ್ತಾನೋ ಅವನೇ ನಿಜವಾದ ಯೆಹೂದ್ಯನು. ಅಂಥವನಿಗೆ ಅಂತರ್ಯದಲ್ಲಿ ಸುನ್ನತಿಯಾಗಿರುತ್ತದೆ. ಇದು ಲಿಖಿತ ಧರ್ಮಶಾಸ್ತ್ರದಿಂದ ಆದದ್ದಲ್ಲ, ದೇವರಾತ್ಮ ಅವರಿಂದ ಆದ ಕಾರ್ಯ; ಇಂಥವನು ಮೆಚ್ಚುಗೆಯನ್ನು ಪಡೆಯುವುದು ಮನುಷ್ಯನಿಂದಲ್ಲ, ದೇವರಿಂದ.


ಅಂತೆಯೇ ಅವನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಸುನ್ನತಿ ಗುಡ್ಡದಲ್ಲಿ ಇಸ್ರಯೇಲರಿಗೆ ಸುನ್ನತಿ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು