Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 5:5 - ಕನ್ನಡ ಸತ್ಯವೇದವು C.L. Bible (BSI)

5 ಅಲ್ಲಿಂದ ಬಂದ ಗಂಡಸರೆಲ್ಲರಿಗೆ ಸುನ್ನತಿ ಆಗಿತ್ತು. ಈಜಿಪ್ಟನ್ನು ಬಿಟ್ಟ ಅನಂತರ ಅರಣ್ಯ ಪ್ರಯಾಣದಲ್ಲಿ ಹುಟ್ಟಿದ ಗಂಡುಮಕ್ಕಳಿಗೆ ಸುನ್ನತಿಯಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಲ್ಲಿಂದ ಬಂದಿದ್ದ ಗಂಡಸರಿಗೆಲ್ಲಾ ಸುನ್ನತಿಯಾಗಿತ್ತು. ಐಗುಪ್ತವನ್ನು ಬಿಟ್ಟ ನಂತರ ಅರಣ್ಯ ಪ್ರಯಾಣದಲ್ಲಿ ಹುಟ್ಟಿದ ಗಂಡುಮಕ್ಕಳಿಗೆ ಸುನ್ನತಿಯಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅಲ್ಲಿಂದ ಬಂದ ಜನರಿಗೆಲ್ಲಾ ಸುನ್ನತಿಯಾಗಿತ್ತು. ಐಗುಪ್ತವನ್ನು ಬಿಟ್ಟನಂತರ ಅರಣ್ಯ ಪ್ರಯಾಣದಲ್ಲಿ ಹುಟ್ಟಿದವರಿಗೆ ಸುನ್ನತಿಯಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಈಜಿಪ್ಟಿನಿಂದ ಹೊರಟ ಗಂಡಸರೆಲ್ಲರಿಗೂ ಸುನ್ನತಿ ಆಗಿತ್ತು. ಆದರೆ ಈಜಿಪ್ಟಿನಿಂದ ಹೊರಟಾಗ ಮರುಭೂಮಿಯೊಳಗೆ ಮಾರ್ಗದಲ್ಲಿ ಹುಟ್ಟಿದ ಗಂಡುಮಕ್ಕಳಿಗೆ ಸುನ್ನತಿ ಆಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 5:5
9 ತಿಳಿವುಗಳ ಹೋಲಿಕೆ  

ಸುನ್ನತಿ ಮಾಡಿಸಿಕೊಳ್ಳುವುದೋ, ಮಾಡಿಸಿಕೊಳ್ಳದಿರುವುದೋ ಮಹತ್ತಾದುದಲ್ಲ. ಹೊಸ ಸೃಷ್ಟಿಯಾಗುವುದೇ ಮಹತ್ತರವಾದುದು.


ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ, ದೇವರ ಆಜ್ಞೆಗಳಿಗೆ ವಿಧೇಯನಾಗಿರುವುದೇ ಮುಖ್ಯ.


ಸುನ್ನತಿ ಮಾಡಿಸಿಕೊಳ್ಳದ ಮತ್ತೊಬ್ಬನು ಧರ್ಮಶಾಸ್ತ್ರದ ವಿಧಿಗಳನ್ನು ಪಾಲಿಸಿಕೊಂಡು ಬಂದವನಾಗಿದ್ದರೆ, ದೇವರು ಅವನನ್ನು ಸುನ್ನತಿ ಮಾಡಿಸಿಕೊಂಡವನಂತೆ ಪರಿಗಣಿಸುವುದಿಲ್ಲವೆ?


‘ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ’ ಎಂಬ ವಾಕ್ಯದ ಅರ್ಥ ನಿಮಗೆ ತಿಳಿದಿದ್ದರೆ, ನಿರ್ದೋಷಿಗಳನ್ನು ನೀವು ಖಂಡಿಸುತ್ತಿರಲಿಲ್ಲ.


ಹೀಗೆ ಯೆಹೋಶುವನು ಸುನ್ನತಿ ಮಾಡುವುದಕ್ಕೆ ಕಾರಣ ಏನೆಂದರೆ - ಈಜಿಪ್ಟಿನಿಂದ ಹೊರಟುಬಂದ ಗಂಡಸರಲ್ಲಿ ಯುದ್ಧವೀರರೆಲ್ಲರು ಆ ದೇಶವನ್ನು ಬಿಟ್ಟು, ಅನಂತರ ಅರಣ್ಯದಲ್ಲಿ ಸತ್ತುಹೋದರು.


ಈಜಿಪ್ಟಿನಿಂದ ಬಂದ ಇಸ್ರಯೇಲರು ಸರ್ವೇಶ್ವರನ ಮಾತನ್ನು ಕೇಳದೆಹೋದುದರಿಂದ ಅವರು, ತಮ್ಮ ಯೋಧರೆಲ್ಲರು ಸಂಹಾರವಾಗುವ ತನಕ ನಾಲ್ವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಸರ್ವೇಶ್ವರ, ತಾವು ಅವರ ಪೂರ್ವಿಕರಿಗೆ ವಾಗ್ದಾನಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು