ಯೆಹೋಶುವ 5:6 - ಕನ್ನಡ ಸತ್ಯವೇದವು C.L. Bible (BSI)6 ಈಜಿಪ್ಟಿನಿಂದ ಬಂದ ಇಸ್ರಯೇಲರು ಸರ್ವೇಶ್ವರನ ಮಾತನ್ನು ಕೇಳದೆಹೋದುದರಿಂದ ಅವರು, ತಮ್ಮ ಯೋಧರೆಲ್ಲರು ಸಂಹಾರವಾಗುವ ತನಕ ನಾಲ್ವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಸರ್ವೇಶ್ವರ, ತಾವು ಅವರ ಪೂರ್ವಿಕರಿಗೆ ವಾಗ್ದಾನಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಐಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋಗಿದ್ದರಿಂದ ಅವರು ತಮ್ಮ ಭಟರೆಲ್ಲರು ಸಂಹಾರವಾಗುವ ತನಕ ನಲವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಆ ಜನರ ಪೂರ್ವಿಕರಿಗೆ ವಾಗ್ದಾನ ಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಐಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋದದರಿಂದ ಅವರು ತಮ್ಮ ಭಟರೆಲ್ಲರೂ ಸಂಹಾರವಾಗುವ ತನಕ ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಅವರ ಪಿತೃಗಳಿಗೆ ವಾಗ್ದಾನ ಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಆಣೆಯಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಈಜಿಪ್ಟಿನಿಂದ ಹೊರಟ ಇಸ್ರಾಯೇಲರು ಯೆಹೋವ ದೇವರ ಸ್ವರಕ್ಕೆ ವಿಧೇಯರಾಗದಿದ್ದರಿಂದ ಅವರು, ತಮ್ಮ ಯುದ್ಧವೀರರೆಲ್ಲಾ ನಾಶವಾಗುವ ತನಕ ನಾಲ್ವತ್ತು ವರ್ಷಗಳವರೆಗೆ ಮರುಭೂಮಿಯಲ್ಲಿ ಅಲೆದಾಡುತ್ತಿದ್ದರು. ಏಕೆಂದರೆ ಯೆಹೋವ ದೇವರು ಅವರ ತಂದೆಗಳಿಗೆ ವಾಗ್ದಾನಮಾಡಿದ್ದ, ಹಾಲು ಜೇನು ಹರಿಯುವ ದೇಶವನ್ನು ಅವರು ಕಾಣುವುದಿಲ್ಲ ಎಂದು ಯೆಹೋವ ದೇವರು ಅವರಿಗೆ ಆಣೆಯಿಟ್ಟಿದ್ದರು. ಅಧ್ಯಾಯವನ್ನು ನೋಡಿ |