Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:1 - ಕನ್ನಡ ಸತ್ಯವೇದವು C.L. Bible (BSI)

1 ಜೆರಿಕೋದ ಜನರು ಇಸ್ರಯೇಲರಿಗೆ ಹೆದರಿ ತಮ್ಮ ನಗರದ ಬಾಗಿಲುಗಳನ್ನು ಭದ್ರವಾಗಿ ಮುಚ್ಚಿದ್ದರು. ಯಾರೂ ಹೊರಗೆ ಬರುತ್ತಿರಲಿಲ್ಲ, ಒಳಗೆ ಹೋಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆರಿಕೋವಿನವರು ಇಸ್ರಾಯೇಲ್ಯರಿಗೆ ಹೆದರಿ ತಮ್ಮ ಪಟ್ಟಣದ ಬಾಗಿಲುಗಳನ್ನು ಭದ್ರವಾಗಿ ಮುಚ್ಚಿಕೊಂಡರು. ಯಾರೂ ಒಳಗೆ ಹೋಗಲಿಲ್ಲ; ಹೊರಗೆ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 (ಯೆರಿಕೋವಿನವರು ಇಸ್ರಾಯೇಲ್ಯರಿಗೆ ಹೆದರಿ ತಮ್ಮ ಪಟ್ಟಣದ ಬಾಗಲುಗಳನ್ನು ಭದ್ರವಾಗಿ ಮುಚ್ಚಿಕೊಂಡರು. ಯಾರೂ ಒಳಗೆ ಹೋಗಲಿಲ್ಲ; ಹೊರಗೆ ಬರಲಿಲ್ಲ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಜೆರಿಕೊ ಪಟ್ಟಣದ ಬಾಗಿಲನ್ನು ಮುಚ್ಚಲಾಗಿತ್ತು. ಇಸ್ರೇಲರು ಸಮೀಪದಲ್ಲೇ ಇದ್ದುದರಿಂದ ಪಟ್ಟಣದ ಜನರು ಹೆದರಿಕೊಂಡಿದ್ದರು. ಒಬ್ಬರಾದರೂ ಪಟ್ಟಣದಲ್ಲಿ ಪ್ರವೇಶ ಮಾಡಲಿಲ್ಲ; ಒಬ್ಬರಾದರೂ ಪಟ್ಟಣದಿಂದ ಹೊರ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಯೆರಿಕೋವಿನ ಜನರು ಇಸ್ರಾಯೇಲರ ನಿಮಿತ್ತವಾಗಿ, ಒಬ್ಬರೂ ಹೊರಗೆ ಬಾರದ ಹಾಗೆಯೂ ಒಳಗೆ ಹೋಗದ ಹಾಗೆಯೂ ಯೆರಿಕೋ ಪಟ್ಟಣದ ಬಾಗಿಲುಗಳನ್ನು ಭದ್ರವಾಗಿ ಮುಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:1
12 ತಿಳಿವುಗಳ ಹೋಲಿಕೆ  

ಇದಲ್ಲದೆ, ಅವರು ಯೆಹೋಶುವನಿಗೆ, “ಸರ್ವೇಶ್ವರಸ್ವಾಮಿ ನಿಜವಾಗಿ ಈ ನಾಡನ್ನೆಲ್ಲಾ ನಮಗೆ ಕೊಟ್ಟಿದ್ದಾರೆ. ಅದರ ನಿವಾಸಿಗಳೆಲ್ಲ ನಮ್ಮನ್ನು ಕಂಡು ನಡುಗುತ್ತ ಇದ್ದಾರೆ,” ಎಂದು ತಿಳಿಸಿದರು.


ಪ್ರಭುವೇ ಮನೆಮಠವನು ಕಟ್ಟದ ಹೊರತು I ಅದನು ಕಟ್ಟುವವರ ಪ್ರಯಾಸ ವ್ಯರ್ಥ II ಪ್ರಭುವೇ ಪಟ್ಟಣವನು ಕಟ್ಟಿದ ಹೊರತು I ಕಾವಲುಗಾರನು ಅದನು ಕಾಯುವುದು ವ್ಯರ್ಥ II


ಅರಸನ ಆಳುಗಳು ಜೋರ್ಡನ್ ದಾರಿ ಹಿಡಿದು ಹೋಗಿ ನದಿದಾಟುವ ಸ್ಥಳದವರೆಗೂ ಹುಡುಕಿದರು. ಹುಡುಕುವವರು ಹೊರಟಕೂಡಲೆ ಊರಬಾಗಿಲನ್ನು ಮುಚ್ಚಲಾಯಿತು.


ಕೆಲವು ವರ್ಷಗಳಾದನಂತರ, ಇವನು ಪ್ರತಿ ವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆಹೋದನು; ಅದು ಮಾತ್ರವಲ್ಲ, ಈಜಿಪ್ಟಿನ ಅರಸನಾದ ಸೋ ಎಂಬವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದ್ದನು. ಈ ಕಾರಣ ಅಸ್ಸೀರಿಯದ ಅರಸನು ಇವನನ್ನು ದ್ರೋಹಿಯೆಂದು ತಿಳಿದು, ಬಂಧಿಸಿ ಸೆರೆಯಲ್ಲಿಟ್ಟನು.


ಆಗ ಸರ್ವೇಶ್ವರನ ಸೇನಾಪತಿ, “ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು. ಏಕೆಂದರೆ ನೀನು ನಿಂತಿರುವ ಸ್ಥಳ ಪವಿತ್ರವಾದುದು,” ಎಂದು ಹೇಳಿದನು. ಯೆಹೋಶುವ ಅಂತೆಯೇ ಮಾಡಿದನು.


ಆಗ ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ನೋಡು, ನಾನು ಜೆರಿಕೋವನ್ನು, ಅದರ ಅರಸನನ್ನು ಹಾಗು ಅದರ ಯುದ್ಧವೀರರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ.


ನೂನನ ಮಗನಾದ ಯೆಹೋಶುವನು ಕಾನಾನ್ ನಾಡನ್ನೂ ಜೆರಿಕೋ ನಗರವನ್ನೂ ನೋಡುವುದಕ್ಕೋಸ್ಕರ ಶಿಟ್ಟೀಮಿನಿಂದ ಇಬ್ಬರು ಗೂಢಚಾರರನ್ನು ಕಳುಹಿಸಿದನು. ಅವರು ಹೊರಟುಹೋಗಿ ರಾಹಾಬಳೆಂಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು.


ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ನಗರಗಳು ಯಾವುವೆಂದರೆ: ಜೆರಿಕೊ, ಬೇತ್ ಹೊಗ್ಲಾ, ಏಮೆಕ್ಕೆಚ್ಚೀಚ್, ಬೇತ್ ಅರಾಬಾ,


ಆವರು ಈ ವರ್ತಮಾನವನ್ನು ದಾವೀದನಿಗೆ ಹೇಳಿಕಳುಹಿಸಿದರು. ಬಹಳವಾಗಿ ಅಪಮಾನ ಹೊಂದಿದ ಅವರಿಗೆ ದಾವೀದನು ಆಳುಗಳ ಮುಖಾಂತರ, “ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಜೆರಿಕೋವಿನಲ್ಲಿದ್ದು ಅನಂತರ ಬನ್ನಿ,” ಎಂದು ಹೇಳಿಸಿದನು.


ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲೇ ಇರು; ಸರ್ವೇಶ್ವರ ನನಗೆ ಜೆರಿಕೋವಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾರೆ,” ಎಂದು ಹೇಳಿದನು. ಆದರೆ ಎಲೀಷನು, “ಸರ್ವೇಶ್ವರನಾಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟಿರುವುದಿಲ್ಲ,” ಎಂದು ಉತ್ತರಕೊಟ್ಟು ಅವನ ಜೊತೆಯಲ್ಲೇ ಜೆರಿಕೋವಿಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು