Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:10 - ಕನ್ನಡ ಸತ್ಯವೇದವು C.L. Bible (BSI)

10 ಯೆಹೋಶುವನು ಜನರಿಗೆ, “ನೀವು ಈಗ ಆರ್ಭಟಿಸಬಾರದು. ನಿಮ್ಮ ಧ್ವನಿ ಕೇಳಿಸದಿರಲಿ, ನಿಮ್ಮ ಬಾಯಿಂದ ಒಂದು ಮಾತೂ ಬರಕೂಡದು. ಆರ್ಭಟಿಸಿರೆಂದು ನಾನು ಹೇಳುವಾಗ ಮಾತ್ರ ನೀವು ಆರ್ಭಟಿಸಬೇಕು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋಶುವನು ಜನರಿಗೆ “ನೀವು ಈಗ ಆರ್ಭಟಿಸಬಾರದು; ನಿಮ್ಮ ಧ್ವನಿಯು ಕೇಳಿಸದಿರಲಿ, ನಿಮ್ಮ ಬಾಯಿಂದ ಒಂದು ಮಾತಾದರೂ ಹೊರಡದಿರಲಿ. ಆರ್ಭಟಿಸಿರೆಂದು ನಾನು ಹೇಳುವ ದಿನದಲ್ಲಿ ಮಾತ್ರ ಆರ್ಭಟಿಸಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋಶುವನು ಜನರಿಗೆ - ನೀವು ಈಗ ಆರ್ಭಟಿಸಬಾರದು; ನಿಮ್ಮ ಧ್ವನಿಯು ಕೇಳಿಸದಿರಲಿ, ನಿಮ್ಮ ಬಾಯಿಂದ ಒಂದು ಮಾತಾದರೂ ಹೊರಡದಿರಲಿ; ಆರ್ಭಟಿಸಿರೆಂದು ನಾನು ಹೇಳುವ ದಿವಸದಲ್ಲಿ ಮಾತ್ರ ಆರ್ಭಟಿಸಿರಿ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋಶುವನು ಜನರಿಗೆ, “ಆರ್ಭಟಿಸಬೇಡಿರಿ, ನಾನು ಹೇಳುವ ದಿನದವರೆಗೆ ಒಂದು ಶಬ್ದವನ್ನೂ ಉಚ್ಚರಿಸಬೇಡಿರಿ. ಆಮೇಲೆ ನೀವು ಆರ್ಭಟಿಸಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೋಶುವನು ಜನರಿಗೆ, “ನೀವು ಈಗ ಆರ್ಭಟಿಸಬಾರದು. ನಿಮ್ಮ ಶಬ್ದವು ಕೇಳಿಸಲೂಬಾರದು. ನಿಮ್ಮ ಬಾಯಿಂದ ಯಾವ ಮಾತು ಹೊರಡಲೂಬಾರದು, ನಾನು ಆರ್ಭಟಿಸಿರೆಂದು ಹೇಳುವ ದಿನದಲ್ಲಿ ಮಾತ್ರ ಆರ್ಭಟಿಸಬೇಕು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:10
8 ತಿಳಿವುಗಳ ಹೋಲಿಕೆ  

ನನ್ನ ಪಿತ ವಾಗ್ದಾನ ಮಾಡಿದ ವ್ಯಕ್ತಿಯನ್ನು ನಾನೇ ನಿಮಗೆ ಕಳುಹಿಸಿಕೊಡುವೆನು. ಸ್ವರ್ಗದಿಂದ ಬರುವ ಶಕ್ತಿಯಿಂದ ನೀವು ಭೂಷಿತರಾಗುವ ತನಕ ಈ ಪಟ್ಟಣದಲ್ಲೇ ಕಾದಿರಿ,” ಎಂದು ಹೇಳಿದರು.


ವಾದಿಸುವವನಲ್ಲ, ದನಿಯೆತ್ತಿ ಕೂಗುವವನಲ್ಲ, ಹಾದಿ ಬೀದಿಯಲ್ಲಿವನ ಕಂಠ ಮೊರೆಯುವುದಿಲ್ಲ.


ಆತ ಕೂಗಾಡುವಂಥವನಲ್ಲ, ಕಿರಿಚಾಡುವಂಥವನಲ್ಲ, ಹಾದಿಬೀದಿಗಳಲ್ಲಿ ಅವನ ಧ್ವನಿ ಕೇಳಿಸುವುದೇ ಇಲ್ಲ.


ಯೇಸು ಪ್ರತ್ಯುತ್ತರವಾಗಿ, “ಸಮಯ ಸಂದರ್ಭಗಳು ನನ್ನ ಪಿತನ ಸ್ವಾಧೀನದಲ್ಲಿವೆ. ಅವುಗಳನ್ನು ತಿಳಿಯುವುದು ನಿಮ್ಮ ಕೆಲಸವಲ್ಲ.


ಎಂದೇ, ಒಡೆಯರಾದ ಸರ್ವೇಶ್ವರ ಹೀಗೆನ್ನುತ್ತಾರೆ : ‘ಇಗೋ, ನಾನು ಸಿಯೋನಿನಲ್ಲಿ ಅಸ್ತಿವಾರದ ಕಲ್ಲೊಂದನ್ನು ಇಡುತ್ತೇನೆ. ಅದು ಸ್ಥಿರವಾದ, ಪರೀಕ್ಷಿತವಾದ, ಮೌಲ್ಯವಾದ ಮೂಲೆಗಲ್ಲು. ಇದರಲ್ಲಿ ವಿಶ್ವಾಸವಿಡುವವನು ತಾಳ್ಮೆಯಿಂದ ಬಾಳುವನು.


ಯುದ್ಧಸನ್ನದ್ಧರಾದವರು ಕೊಂಬುಗಳನ್ನು ಊದುತ್ತಿದ್ದ ಯಾಜಕರ ಮುಂದೇ ಇದ್ದರು. ಹಿಂಬದಿಯ ದಂಡು ಮಂಜೂಷದ ಹಿಂದಿತ್ತು. ಕೊಂಬುಗಳು ಮೊಳಗುತ್ತಲೇ ಅವರು ಹೊರಟರು.


ಸರ್ವೇಶ್ವರನ ಮಂಜೂಷವನ್ನು ಒಂದು ಸಾರಿ ನಗರ ಪ್ರದಕ್ಷಿಣೆ ಮಾಡಿಸಿದ ಮೇಲೆ, ಅವರು ಪಾಳೆಯಕ್ಕೆ ಹಿಂದಿರುಗಿ ಬಂದು ರಾತ್ರಿಯನ್ನು ಕಳೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು