ಯೆಹೋಶುವ 6:19 - ಕನ್ನಡ ಸತ್ಯವೇದವು C.L. Bible (BSI)19 ಎಲ್ಲ ಬೆಳ್ಳಿ ಬಂಗಾರ ಹಾಗೂ ತಾಮ್ರ ಕಬ್ಬಿಣ ಪಾತ್ರೆಗಳು ಸರ್ವೇಶ್ವರಸ್ವಾಮಿಗೆ ಮೀಸಲಾಗಿದ್ದು ಅವರ ಭಂಡಾರಕ್ಕೆ ಸೇರತಕ್ಕವುಗಳು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಎಲ್ಲಾ ಬೆಳ್ಳಿ ಬಂಗಾರವೂ, ತಾಮ್ರ ಕಬ್ಬಿಣಗಳ ಪಾತ್ರೆಗಳೂ ಯೆಹೋವನಿಗೆ ಮೀಸಲಾಗಿದ್ದು ಆತನ ಭಂಡಾರಕ್ಕೆ ಸೇರತಕ್ಕವುಗಳು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಎಲ್ಲಾ ಬೆಳ್ಳಿಬಂಗಾರವೂ ತಾಮ್ರ ಕಬ್ಬಿಣಗಳ ಪಾತ್ರೆಗಳೂ ಯೆಹೋವನ ಮೀಸಲಾಗಿದ್ದು ಆತನ ಭಂಡಾರಕ್ಕೆ ಸೇರತಕ್ಕವುಗಳು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಬೆಳ್ಳಿ, ಬಂಗಾರ, ಕಂಚು ಮತ್ತು ಕಬ್ಬಿಣಗಳಿಂದ ಮಾಡಿದ ಎಲ್ಲಾ ವಸ್ತುಗಳು ಯೆಹೋವನ ಸ್ವತ್ತಾಗಿವೆ. ಆದ್ದರಿಂದ ಅವುಗಳನ್ನು ಆತನ ಭಂಡಾರಕ್ಕೆ ಸೇರಿಸಬೇಕು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಎಲ್ಲಾ ಬೆಳ್ಳಿಬಂಗಾರ, ಕಂಚು, ಕಬ್ಬಿಣ ಪಾತ್ರೆಗಳು ಯೆಹೋವ ದೇವರಿಗೆ ಅರ್ಪಿತವಾಗಿರಬೇಕು. ಅವು ಯೆಹೋವ ದೇವರ ಭಂಡಾರಕ್ಕೆ ಸೇರಿರಬೇಕು,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |
ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನ್ ನಗರಿಯೇ, ಎದ್ದು ಒಕ್ಕಣೆಮಾಡು. ಇದಕ್ಕಾಗಿ ನಿನ್ನ ಕೊಂಬನ್ನು ಕಬ್ಬಿಣವಾಗಿಸುವೆನು. ನಿನ್ನ ಗೊರಸನ್ನು ಕಂಚನ್ನಾಗಿ ಮಾಡುವೆನು. ಅನೇಕ ರಾಷ್ಟ್ರಗಳನ್ನು ನೀನು ತುಳಿದು ಧ್ವಂಸಮಾಡುವೆ. ಅವುಗಳನ್ನು ಕೊಳ್ಳೆಹೊಡೆದು ತಂದ ಸ್ವತ್ತನ್ನು ಸರ್ವೇಶ್ವರಸ್ವಾಮಿಗೆ ಮೀಸಲಾಗಿಡುವೆ. ಅವುಗಳಿಂದ ಬಂದ ಆಸ್ತಿಯನ್ನು ಲೋಕದೊಡೆಯನಿಗೆ ಪ್ರತ್ಯೇಕಿಸಿಡುವೆ.”