Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:22 - ಕನ್ನಡ ಸತ್ಯವೇದವು C.L. Bible (BSI)

22 ಯೆಹೋಶುವನು ಆ ನಾಡಿನಲ್ಲಿ ಬೇಹುಗಾರಿಕೆ ನಡೆಸಿದ್ದ ಇಬ್ಬರು ವ್ಯಕ್ತಿಗಳನ್ನು ಕರೆದು, “ನೀವು ಆ ವೇಶ್ಯೆಯ ಮನೆಗೆ ಹೋಗಿ, ಅವಳಿಗೆ ಪ್ರಮಾಣ ಮಾಡಿದಂತೆ ಅವಳನ್ನೂ ಅವಳಿಗಿರುವುದೆಲ್ಲವನ್ನು ಹೊರಗೆ ತೆಗೆದುಕೊಂಡು ಬನ್ನಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೋಶುವನು ದೇಶವನ್ನು ಸಂಚರಿಸಿ ನೋಡಿದ್ದ ಇಬ್ಬರು ಗೂಢಚಾರರಿಗೆ “ನೀವು ಆ ವೇಶ್ಯೆಯ ಮನೆಗೆ ಹೋಗಿ ಅವಳಿಗೆ ಪ್ರಮಾಣಮಾಡಿದಂತೆ ಅವಳನ್ನೂ ಅವಳಿಗಿರುವುದೆಲ್ಲವನ್ನೂ ಹೊರಗೆ ತೆಗೆದುಕೊಂಡು ಬನ್ನಿರಿ” ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೆಹೋಶುವನು ದೇಶವನ್ನು ಸಂಚರಿಸಿ ನೋಡಿದ್ದ ಇಬ್ಬರು ಮನುಷ್ಯರಿಗೆ - ನೀವು ಆ ಸೂಳೆಯ ಮನೆಗೆ ಹೋಗಿ ಅವಳಿಗೆ ಪ್ರಮಾಣ ಮಾಡಿದಂತೆ ಅವಳನ್ನೂ ಅವಳಿಗಿರುವದೆಲ್ಲವನ್ನೂ ಹೊರಗೆ ತೆಗೆದುಕೊಂಡು ಬನ್ನಿರಿ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೆಹೋಶುವನು ಆ ಇಬ್ಬರು ಗೂಢಚಾರರಿಗೆ, “ನೀವು ಪ್ರಮಾಣ ಮಾಡಿರುವುದರಿಂದ ಆ ವೇಶ್ಯೆಯ ಮನೆಗೆ ಹೋಗಿ ಅವಳನ್ನು ಹೊರಗೆ ಕರೆದುಕೊಂಡು ಬನ್ನಿ. ಅವಳ ಸಂಗಡ ಇರುವ ಎಲ್ಲಾ ಜನರನ್ನೂ ಕರೆದುಕೊಂಡು ಬನ್ನಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆ ನಾಡನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಇಬ್ಬರು ಮನುಷ್ಯರಿಗೆ ಯೆಹೋಶುವನು, “ನೀವು ಆ ವೇಶ್ಯೆಯ ಮನೆಗೆ ಹೋಗಿ, ಅವಳನ್ನೂ ಅವಳಿಗೆ ಇರುವ ಸಮಸ್ತವನ್ನೂ ನೀವು ಅವಳಿಗೆ ಆಣೆ ಇಟ್ಟ ಹಾಗೆ ಅಲ್ಲಿಂದ ಹೊರಗೆ ತೆಗೆದುಕೊಂಡು ಬನ್ನಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:22
13 ತಿಳಿವುಗಳ ಹೋಲಿಕೆ  

ವಿಶ್ವಾಸವಿದ್ದುದರಿಂದಲೇ ರಹಾಬಳೆಂಬ ಜಾರಿಣಿ ಇಸ್ರಯೇಲ್ ಗೂಢಚಾರರಿಗೆ ಸೌಹಾರ್ದತೆಯಿಂದ ಆಶ್ರಯ ನೀಡಿ, ಅವಿಶ್ವಾಸಿಗಳೊಡನೆ ನಾಶವಾಗದೆ ಉಳಿದಳು.


ಇದೂ ಇದರಲ್ಲಿರುವುದೆಲ್ಲವೂ ಸರ್ವೇಶ್ವರನಿಗೆ ಮೀಸಲಾಗಿ ಆಹುತಿಯಾಗತಕ್ಕದೆಂದು ತಿಳಿಯಿರಿ. ವೇಶ್ಯೆಯಾದ ರಾಹಾಬಳು ಮತ್ತು ಅವಳ ಸಂಗಡ ಮನೆಯಲ್ಲಿರುವವರೆಲ್ಲರು ಉಳಿಯಲಿ. ಏಕೆಂದರೆ ನಾವು ಕಳಿಸಿದ ಗೂಢಚಾರರನ್ನು ಅವಳು ಬಚ್ಚಿಟ್ಟಿದ್ದಳು.


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ಇವನು ಯಾವನಿಂದ ಅರಸನಾಗಿ ನೇಮಕಗೊಂಡನೋ, ಯಾವನಿಗೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿದನೋ, ಯಾವನ ಒಪ್ಪಂದವನ್ನು ಮೀರಿದನೋ, ಆ ಅರಸನ ಬಳಿಯಲ್ಲೆ, ಅಂದರೆ ಬಾಬಿಲೋನೆಂಬ ಅವನ ವಾಸಸ್ಥಾನದಲ್ಲೆ, ಇವನು ಸಾಯುವುದು ಖಂಡಿತ.


ಮತ್ತು ರಾಜವಂಶದವನೊಬ್ಬನನ್ನು ಆರಿಸಿ ಅವನೊಂದಿಗೆ ಒಪ್ಪಂದಮಾಡಿ ಅವನಿಂದ ಆಣೆಯಿಡಿಸಿದ.


ಭ್ರಷ್ಟರನು ಧಿಕ್ಕರಿಸುವನು, ಭಕ್ತರನು ಗೌರವಿಸುವನು I ನಷ್ಟವಾದರೂ ಕೊಟ್ಟ ಮಾತನು ತಪ್ಪನವನು II


ದಾವೀದನು ತಾನು ಸೌಲನ ಮಗ ಯೋನಾತಾನನಿಗೆ ಸರ್ವೇಶ್ವರನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನೆದು, ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು.


(ಗಿಬ್ಯೋನ್ಯರು ಇಸ್ರಯೇಲ್ ಕುಲಗಳಿಗೆ ಸೇರಿದವರಲ್ಲ; ಅವರು ಅಳಿಯದೆ ಉಳಿದ ಅಮೋರಿಯರಷ್ಟೇ). ಇಸ್ರಯೇಲರು ತಾವು ಇವರನ್ನು ಕೊಲ್ಲುವುದಿಲ್ಲವೆಂದು ಪ್ರಮಾಣಮಾಡಿ ಇದ್ದರು. ಆದರೂ ಸೌಲನು ಇಸ್ರಯೇಲ್ ಮತ್ತು ಯೆಹೂದ ಕುಲಗಳ ಮೇಲೆ ತನಗಿದ್ದ ಅಭಿಮಾನದ ನಿಮಿತ್ತ ಇವರನ್ನೂ ನಿರ್ನಾಮಗೊಳಿಸಬೇಕೆಂದಿದ್ದನು.


ಯೆಹೋಶುವ ಅವರೊಡನೆ, “ನಿಮ್ಮ ಜೀವವನ್ನು ಕಾಪಾಡುತ್ತೇವೆ” ಎಂದು ಶಾಂತಿಸಂಧಾನ ಮಾಡಿಕೊಂಡನು. ಸಭೆಯ ನಾಯಕರೂ ಅಂತೆಯೇ ಪ್ರಮಾಣ ಮಾಡಿದರು.


ಅಂತೆಯೇ ಅವರು ಹೋಗಿ ರಾಹಾಬಳನ್ನೂ ಅವಳ ತಂದೆತಾಯಿಗಳನ್ನೂ ಸಹೋದರರನ್ನೂ ಅವಳಿಗಿದ್ದುದೆಲ್ಲವನ್ನೂ ಅವಳ ಎಲ್ಲಾ ಸಂಬಂಧಿಕರನ್ನೂ ಇಸ್ರಯೇಲರ ಪಾಳೆಯದ ಹೊರಗಡೆ ಸುಭದ್ರವಾಗಿರಿಸಿದರು.


ಹೀಗೆ ಅವರು ಆ ಪಟ್ಟಣವನ್ನು ಕತ್ತಿಗೆ ತುತ್ತಾಗಿಸಿದರು. ಆದರೆ ಆ ವ್ಯಕ್ತಿಯನ್ನು ಮತ್ತು ಅವನ ಕುಟುಂಬದವರನ್ನು ಕಳುಹಿಸಿಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು