Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:27 - ಕನ್ನಡ ಸತ್ಯವೇದವು C.L. Bible (BSI)

27 ಸರ್ವೇಶ್ವರಸ್ವಾಮಿ ಯೆಹೋಶುವನ ಸಂಗಡ ಇದ್ದುದರಿಂದ ಅವನ ಕೀರ್ತಿ ನಾಡಿನಲ್ಲೆಲ್ಲಾ ಹರಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೆಹೋವನು ಯೆಹೋಶುವನ ಸಂಗಡ ಇದ್ದುದರಿಂದ ಅವನ ಕೀರ್ತಿ ದೇಶದಲ್ಲೆಲ್ಲಾ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯೆಹೋವನು ಯೆಹೋಶುವನ ಸಂಗಡ ಇದ್ದದರಿಂದ ಅವನು ದೇಶದಲ್ಲೆಲ್ಲಾ ಕೀರ್ತಿಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೆಹೋವನು ಯೆಹೋಶುವನ ಸಂಗಡ ಇದ್ದನು. ಯೆಹೋಶುವನು ದೇಶದಲ್ಲೆಲ್ಲಾ ಸುಪ್ರಸಿದ್ಧನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೆಹೋವ ದೇವರು ಯೆಹೋಶುವನ ಸಂಗಡ ಇದ್ದರು. ಅವನ ಕೀರ್ತಿ ದೇಶದಲ್ಲೆಲ್ಲಾ ಹರಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:27
22 ತಿಳಿವುಗಳ ಹೋಲಿಕೆ  

ಜೆರಿಕೋದವರನ್ನು ಮತ್ತು ಆಯಿ ಜನರನ್ನು ಯೆಹೋಶುವನು ಸಂಹರಿಸಿದ ಸುದ್ದಿ ಗಿಬ್ಯೋನಿನ ನಿವಾಸಿಗಳಿಗೆ ಮುಟ್ಟಿತು.


ನಿನ್ನ ಜೀವಮಾನವಿಡೀ ಯಾರೊಬ್ಬನು ನಿನ್ನನ್ನು ಎದುರಿಸಿ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು. ನಿನ್ನನ್ನು ಕೈಬಿಡುವುದಿಲ್ಲ, ನಿನ್ನನ್ನು ತೊರೆದುಬಿಡುವುದಿಲ್ಲ.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.”


ಅವರು, “ನಿಮ್ಮ ಸೇವಕರಾದ ನಾವು ನಿಮ್ಮ ದೇವರಾದ ಸರ್ವೇಶ್ವರನ ನಾಮ ಮಹತ್ತನ್ನು ಕೇಳಿ ಬಹುದೂರ ದೇಶದಿಂದ ಬಂದಿದ್ದೇವೆ. ಆ ನಿಮ್ಮ ದೇವರು ಈಜಿಪ್ಟಿನಲ್ಲಿ ನಡೆಸಿದ ಮಹತ್ಕಾರ್ಯಗಳ ಸುದ್ದಿಯನ್ನು ನಮ್ಮ ಹಿರಿಯರೂ ದೇಶನಿವಾಸಿಗಳೂ ಕೇಳಿದ್ದಾರೆ.


ಜೋರ್ಡನ್ ಹೊಳೆಯ ಆಚೆ ಬೆಟ್ಟದ ಪ್ರದೇಶ, ಕಣಿವೆ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ, ಹಿತ್ತಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿದರು.


ಆದರೂ ಸರ್ವೇಶ್ವರ, ಜೋಸೆಫನ ಸಂಗಡ ಇದ್ದರು. ಅವನಿಗೆ ಅಪಾರ ಪ್ರೀತಿ ತೋರಿಸಿ, ಅವನಿಗೆ ಸೆರೆಯಜಮಾನನ ದಯೆ ದೊರಕುವಂತೆ ಮಾಡಿದರು.


ಪ್ರಭು ನಿನ್ನೊಂದಿಗಿರಲಿ, ದೇವರ ಅನುಗ್ರಹ ನಿಮ್ಮೆಲ್ಲರಲ್ಲೂ ಇರಲಿ!


ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು.


ಯೇಸುಸ್ವಾಮಿಯ ಸಮಾಚಾರ ಆಗ ಗಲಿಲೇಯ ಪ್ರಾಂತ್ಯಕ್ಕೆ ಸಾಮಂತರಾಜನಾಗಿದ್ದ ಹೆರೋದನ ಕಿವಿಗೆ ಬಿದ್ದಿತು.


ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.


ನೀನು ಹೋದಕಡೆಯೆಲ್ಲಾ ನಿನ್ನ ಸಂಗಡ ಇದ್ದೆ. ನಿನ್ನ ಶತ್ರುಗಳನ್ನೆಲ್ಲ ನಿನ್ನ ಕಣ್ಮುಂದೆಯೆ ಸದೆಬಡಿದೆ. ಜಗದ ಮಹಾತ್ಮರ ಹೆಸರಿನಂತೆ ನಿನ್ನ ಹೆಸರನ್ನು ಪ್ರಸಿದ್ಧಗೊಳಿಸುವೆನು.


ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು.


ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವ ಎಡೆಗಳಲ್ಲೆಲ್ಲ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನ್ನ ಸಂಗಡ ಇರುತ್ತೇನೆ,” ಎಂದು ಹೇಳಿದರು.


ನೀವು ಶೂರರಾಗಿ ಧೈರ್ಯದಿಂದಿರಿ; ಅವರಿಗೆ ಅಂಜಬೇಡಿ, ಕಳವಳಪಡಬೇಡಿ. ನಿಮ್ಮ ದೇವರಾದ ಸರ್ವೇಶ್ವರನೇ ನಿಮ್ಮ ಸಂಗಡ ಇರುತ್ತಾರೆ; ಅವರು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ,” ಎಂದು ಹೇಳಿದನು.


ಸರ್ವೇಶ್ವರ ಯೆಹೂದಕುಲದವರ ಸಂಗಡ ಇದ್ದುದರಿಂದ ಅವರು ಪರ್ವತ ಪ್ರದೇಶಗಳನ್ನೆಲ್ಲಾ ಸ್ವತಂತ್ರಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣ ರಥಗಳಿದ್ದುದರಿಂದ ಅವರನ್ನು ಹೊರಗಟ್ಟಲು ಆಗಲಿಲ್ಲ.


ಸರ್ವೇಶ್ವರ ಅವನೊಂದಿಗೆ ಇದ್ದುದರಿಂದ ಅವನು ಎಲ್ಲ ಕಾರ್ಯಗಳಲ್ಲಿ ವಿವೇಕದಿಂದ ವರ್ತಿಸಿ ಜಯಶಾಲಿಯಾಗುತ್ತಿದ್ದನು.


ದಾವೀದನ ಹೆಸರು ಎಲ್ಲಾ ಕಡೆಗಳಲ್ಲಿ ಪ್ರಖ್ಯಾತಿಗೆ ಬಂದಿತು; ಎಲ್ಲಾ ದೇಶಗಳವರೂ ದಾವೀದನಿಗೆ ಭಯಪಡುವಂತೆ ಸರ್ವೇಶ್ವರ ಮಾಡಿದರು.


ಆದುದರಿಂದ ಸಕಲ ಸಂಸ್ಥಾನಾಧಿಕಾರಿಗಳೂ ಉಪರಾಜರೂ ದೇಶಾಧಿಪತಿಗಳೂ ಮತ್ತು ಇತರ ರಾಜಸೇವಕರೂ ಅವನಿಗೆ ಭಯಪಟ್ಟು ಯೆಹೂದ್ಯರಿಗೆ ನೆರವಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು