Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:4 - ಕನ್ನಡ ಸತ್ಯವೇದವು C.L. Bible (BSI)

4 ಏಳುಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿವಸ ನೀವು ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ಕೊಂಬುಗಳನ್ನು ಊದಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿನ ನೀವು ಪಟ್ಟಣವನ್ನು ಏಳು ಸಾರಿ ಸುತ್ತಬೇಕು; ಯಾಜಕರು ಕೊಂಬುಗಳನ್ನು ಊದಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿವಸ ನೀವು ಪಟ್ಟಣವನ್ನು ಏಳುಸಾರಿ ಸುತ್ತಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಏಳು ಮಂದಿ ಯಾಜಕರಿಗೆ ಟಗರಿನ ಕೊಂಬಿನಿಂದ ಮಾಡಿದ ತುತ್ತೂರಿಗಳನ್ನು ಹಿಡಿದುಕೊಂಡು ಪವಿತ್ರ ಪೆಟ್ಟಿಗೆಯ ಮುಂದೆ ಹೋಗಲು ಹೇಳು. ಏಳನೆಯ ದಿನದಲ್ಲಿ ನಗರದ ಸುತ್ತಲೂ ನೀವು ಏಳುಸಲ ಸುತ್ತಬೇಕು. ಏಳನೆಯ ದಿನದಲ್ಲಿ ಸುತ್ತುವಾಗ ತುತ್ತೂರಿಯನ್ನು ಊದಬೇಕೆಂದು ಯಾಜಕರಿಗೆ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಳುಮಂದಿ ಯಾಜಕರು ಹೊತ್ತುಕೊಂಡಿದ್ದ ಮಂಜೂಷದ ಮುಂದೆ ಟಗರುಗಳ ಏಳು ಕೊಂಬುಗಳ ತುತೂರಿಗಳನ್ನು ಹಿಡಿದುಕೊಂಡು ಹೋಗಬೇಕು. ಆದರೆ ಅವರು ಏಳನೆಯ ದಿವಸ ಪಟ್ಟಣವನ್ನು ಏಳು ಸಾರಿ ಸುತ್ತಿ ಬರಬೇಕು. ಯಾಜಕರು ತುತೂರಿಗಳನ್ನು ಊದಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:4
33 ತಿಳಿವುಗಳ ಹೋಲಿಕೆ  

ಅನಂತರ ದೇವಾಲಯದೊಳಗಿಂದ ಬಂದ ಮಹಾಶಬ್ದವನ್ನು ಕೇಳಿದೆ. ಅದು ಆ ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿ ತುಂಬಿರುವ ದೇವರ ರೋಷವನ್ನು ಭೂಮಿಯ ಮೇಲೆ ಸುರಿಯಿರಿ,” ಎಂದು ಆಜ್ಞಾಪಿಸಿತು.


ಈ ಸಾರಿ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಜೆರುಸಲೇಮಿನವರೇ, ಸುಮ್ಮನೆ ನಿಂತುಕೊಂಡು ಸರ್ವೇಶ್ವರ ನಿಮಗಾಗಿ ನಡೆಸುವ ರಕ್ಷಣಾಕಾರ್ಯವನ್ನು ನೋಡಿರಿ; ಹೆದರಬೇಡಿ, ಕಳವಳಗೊಳ್ಳಬೇಡಿ. ನಾಳೆ ಅವರೆದುರಿಗೆ ಹೊರಡಿರಿ; ಸರ್ವೇಶ್ವರ ನಿಮ್ಮೊಂದಿಗೆ ಇರುವರು!” ಎಂದು ಹೇಳಿದನು.


ಬಳಿಕ ನಾನು, ದೇವರ ಸಾನ್ನಿಧ್ಯದಲ್ಲಿ ನಿಂತಿದ್ದ ಏಳು ದೇವದೂತರನ್ನು ಕಂಡೆ. ಅವರಿಗೆ ಏಳು ತುತೂರಿಗಳನ್ನು ಕೊಡಲಾಗಿತ್ತು.


ಆಮೇಲೆ ಜನರ ಸಮ್ಮತಿಯಿಂದ ಸರ್ವೇಶ್ವರನಿಗಾಗಿ ಗಾಯನಮಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡನು. ಅವರಿಗೆ, “ಪರಿಶುದ್ಧತ್ವವೆಂಬ ಭೂಷಣದೊಡನೆ ಯೋಧರ ಮುಂದೆ ಹೋಗುತ್ತಾ, “ಸರ್ವೇಶ್ವರನಿಗೆ ಕೃತಜ್ಞತಾ ಸ್ತುತಿಮಾಡಿರಿ, ಅವರ ಅಚಲಪ್ರೀತಿ ಶಾಶ್ವತ’ ಎಂದು ಭಜಿಸಿರಿ,” ಎಂಬುದಾಗಿ ಆಜ್ಞಾಪಿಸಿದನು.


ಅವನು ತನ್ನ ಸೇವಕನಿಗೆ, “ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು,” ಎಂದು ಆಜ್ಞಾಪಿಸಿದನು. ಸೇವಕನು ಹೋಗಿ, ನೋಡಿಬಂದು ಏನೂ ತೋರುವುದಿಲ್ಲವೆಂದು ಹೇಳಿದನು. ಹೀಗೆ ಅವನನ್ನು ಏಳುಸಾರಿ ಕಳುಹಿಸಿದನು.


ತನ್ನ ಬಲಗೈಯ ಬೆರಳನ್ನು ಅದರಲ್ಲಿ ಅದ್ದಿ ಸರ್ವೇಶ್ವರನ ಸನ್ನಿಧಿಯಲ್ಲಿ ಏಳು ಸಾರಿ ಬೆರಳಿನಿಂದ ಚಿಮುಕಿಸಬೇಕು.


ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಈ ಏಳು ಮಂದಿ ದೇವದೂತರಿಗೆ ಏಳು ಚಿನ್ನದ ಪಾತ್ರೆಗಳನ್ನು ಕೊಟ್ಟಿತು. ಆ ಪಾತ್ರೆಗಳಲ್ಲಿ ಯುಗಯುಗಾಂತರಕ್ಕೂ ಜೀವಿಸುವ ದೇವರ ರೋಷವು ತುಂಬಿತುಳುಕುತ್ತಿತ್ತು.


ಸ್ವರ್ಗದಲ್ಲಿ ಮತ್ತೊಂದು ಚಿಹ್ನೆಯನ್ನು ಕಂಡೆ. ಅದು ಅತ್ಯಾಶ್ಚರ್ಯಕರವಾಗಿ ಇತ್ತು. ಏಳು ದೇವದೂತರ ಕೈಯಲ್ಲಿ ಏಳು ವಿಪತ್ತುಗಳು ಇದ್ದವು. ಇವು ಅಂತಿಮವಾಗಿ ಬಂದೆರಗುವ ವಿಪತ್ತುಗಳು. ಏಕೆಂದರೆ, ಅವುಗಳೊಡನೆ ದೇವರ ಕೋಪಾಗ್ನಿ ಪೂರ್ತಿಯಾಗಿ ಬಂದೆರಗುವುದು.


ಅವನು ಗಟ್ಟಿಯಾದ ಸ್ವರದಿಂದ ಕೂಗಿದನು. ಅದು ಸಿಂಹದ ಗರ್ಜನೆಯಂತಿತ್ತು. ಅವನು ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಮಾರ್ದನಿಸಿದವು.


ಏಳು ತುತೂರಿಗಳನ್ನು ಹಿಡಿದಿದ್ದ ಏಳುಮಂದಿ ದೇವದೂತರು ತಮ್ಮ ತಮ್ಮ ತುತೂರಿಗಳನ್ನು ಊದಲು ಸಿದ್ಧರಾದರು.


ಸಿಂಹಾಸನವೂ ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಸಭಾಪ್ರಮುಖರಿದ್ದ ಸ್ಥಳಕ್ಕೂ ನಡುವೆ ಒಂದು ಕುರಿಮರಿ ನಿಂತಿರುವುದನ್ನು ಕಂಡೆ. ಅದು ಈಗಾಗಲೇ ಬಲಿಗೋಸ್ಕರ ವಧೆಯಾಗಿದ್ದಂತೆ ಕಾಣುತ್ತಿತ್ತು. ಆ ಕುರಿಮರಿಗೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಇಡೀ ಜಗತ್ತಿಗೆ ಕಳುಹಿಸಲಾದ ದೇವರ ಸಪ್ತ ಆತ್ಮಗಳೇ ಅವು.


ನಾನು ಈ ದೃಶ್ಯವನ್ನು ಸಹ ಕಂಡೆ : ಸಿಂಹಾಸನದಲ್ಲಿ ಆಸೀನರಾಗಿರುವವರ ಬಲಗೈಯಲ್ಲಿ ಒಂದು ಸುರುಳಿ ಇತ್ತು. ಅದರ ಒಳಭಾಗದಲ್ಲೂ ಹೊರಭಾಗದಲ್ಲೂ ಬರೆಯಲಾಗಿತ್ತು. ಅದನ್ನು ಏಳು ಮುದ್ರೆಗಳಿಂದ ಮುದ್ರಿಸಲಾಗಿತ್ತು.


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ರಹಸ್ಯವಿಷ್ಟೆ: ಆ ಏಳು ನಕ್ಷತ್ರಗಳು ಏಳು ಸಭೆಗಳ ದೂತರನ್ನು ಸೂಚಿಸುತ್ತವೆ. ಆ ಏಳು ಚಿನ್ನದ ದೀಪಸ್ತಂಭಗಳು ಏಳು ಸಭೆಗಳನ್ನು ಸೂಚಿಸುತ್ತವೆ,” ಎಂದರು.


ಏಷ್ಯಾಸೀಮೆಯಲ್ಲಿರುವ ಏಳು ಸಭೆಗಳಿಗೆ ಯೊವಾನ್ನನೆಂಬ ನಾನು ಬರೆಯುವುದೇನೆಂದರೆ: ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,’ ಭವಿಷ್ಯತ್‍ಕಾಲದಲ್ಲಿ ‘ಬರುವಾತನೂ’ ಆದ ದೇವರಿಂದ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ಇದಲ್ಲದೆ, ದೇವರ ಸಿಂಹಾಸನದ ಸಾನ್ನಿಧ್ಯದಲ್ಲಿ ಇರುವ ಸಪ್ತ ಆತ್ಮಗಳಿಂದಲು ಮತ್ತು


ಎಲೀಷನು ಅವನಿಗೆ, “ಹೋಗಿ ಜೋರ್ಡನ್ ನದಿಯಲ್ಲಿ ಏಳು ಸಾರಿ ಸ್ನಾನಮಾಡು; ಆಗ ನಿನ್ನ ದೇಹ ಮೊದಲಿದ್ದಂತಾಗುವುದು; ನೀನು ಶುದ್ಧನಾಗುವೆ,” ಎಂದು ಹೇಳಿಕಳುಹಿಸಿದನು.


ಆಗ ಬಿಳಾಮನು, “ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿಸಿ ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸು,” ಎಂದು ಬಾಲಾಕನಿಗೆ ಹೇಳಿದನು.


ದೂತನು ನನಗೆ ಹೀಗೆಂದು ಹೇಳಿದನು: “ಜೆರುಬ್ಬಾಬೆಲನಿಗೆ ಈ ಸಂದೇಶವನ್ನು ಕೊಡು - ನಿನಗೆ ಜಯ ದೊರಕುವುದು. ನಿನ್ನ ಶಕ್ತಿಸಾಮರ್ಥ್ಯದಿಂದಲ್ಲ, ಸೇನಾಬಲದಿಂದಲೂ ಅಲ್ಲ; ನನ್ನ ಆತ್ಮಶಕ್ತಿಯಿಂದ, ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


“ಏನನ್ನು ನೋಡುತ್ತಿರುವೆ?” ಎಂದು ಅವನು ನನ್ನನ್ನು ಕೇಳಿದಾಗ ನಾನು, “ಇಗೋ, ಏಳು ದೀಪಗಳುಳ್ಳ ಸುವರ್ಣಮಯ ದೀಪಸ್ತಂಭವೊಂದನ್ನು ನೋಡುತ್ತಿದ್ದೇನೆ. ಅದರ ಮೇಲ್ಗಡೆ ಎಣ್ಣೆಯ ಪಾತ್ರೆ ಇದೆ. ಅದರ ಮೇಲೆ ದೀಪಗಳಿಗೆ ಏಳು ನಾಳಗಳಿವೆ.


ಆ ದಿನ ಬಂದಾಗ, ಮಹಾ ತುತೂರಿಯೊಂದನ್ನು ಊದಲಾಗುವುದು. ಗಡೀಪಾರಾಗಿ ಚದುರಿಹೋಗಿರುವ ಇಸ್ರಯೇಲರನ್ನು ಅಸ್ಸೀರಿಯದಿಂದಲೂ ಈಜಿಪ್ಟಿನಿಂದಲೂ ಕರೆಯಲಾಗುವುದು. ಅವರೆಲ್ಲರೂ ಜೆರುಸಲೇಮಿಗೆ ಬಂದು ಪವಿತ್ರಪರ್ವತದ ಮೇಲೆ ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳುವರು, ಆರಾಧನೆಮಾಡುವರು.


ಆದುದರಿಂದ ನೀವು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸ ಯೋಬನ ಬಳಿಗೆ ಬನ್ನಿರಿ; ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ. ನನ್ನ ದಾಸ ಯೋಬ ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು; ನಾನು ಅವನ ವಿಜ್ಞಾಪನೆಯನ್ನು ಆಲಿಸಿ ನಿಮ್ಮ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ವಿಧಿಸುವುದಿಲ್ಲ. ನನ್ನ ದಾಸ ಯೋಬನು ನನ್ನ ವಿಷಯದಲ್ಲಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ,” ಎಂದರು.


ಆಮೇಲೆ ಲೇವಿಯರಲ್ಲಿ ಕೆಹಾತ್ಯರೂ ಕೋರಹಿಯರೂ ಎದ್ದು, ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ಮಹಾಸ್ವರದಿಂದ ಕೀರ್ತಿಸಿದರು.


ಇಗೋ, ದೇವರೇ ನಾಯಕರಾಗಿ ನಮ್ಮೊಂದಿಗಿರುತ್ತಾರೆ; ನಿಮಗೆ ವಿರುದ್ಧ ಯುದ್ಧ ಕಹಳೆಗಳನ್ನು ಮೊಳಗಿಸುವ ಯಾಜಕರೂ ನಮ್ಮೊಂದಿಗೆ ಇರುತ್ತಾರೆ. ಇಸ್ರಯೇಲರೇ, ನಿಮ್ಮ ಪೂರ್ವಜರ ದೇವರಾದ ಸರ್ವೇಶ್ವರನೊಡನೆ ಯುದ್ಧಮಾಡಬೇಡಿ; ನೀವು ಜಯಿಸಲಾರಿರಿ,” ಎಂದು ಕೂಗಿ ಹೇಳಿದನು.


ಆ ರಕ್ತದಲ್ಲಿ ಬೆರಳನ್ನು ಅದ್ದಿ ಮಹಾಪವಿತ್ರ ಸ್ಥಾನದ ಮುಂದಿನ ತೆರೆಯ ಎದುರಿಗೆ, ಸರ್ವೇಶ್ವರನ ಸನ್ನಿಧಿಯಲ್ಲಿ ಏಳು ಸಾರಿ ಚಿಮುಕಿಸಬೇಕು.


ಆ ಏಳನೆಯ ದಿನವು ಪರಿಶುದ್ಧವಾಗಿರಲಿ ಎಂದು ಆಶೀರ್ವದಿಸಿದರು. ತಮ್ಮ ಸೃಷ್ಟಿಕಾರ್ಯವನ್ನೆಲ್ಲ ಮುಗಿಸಿ ಆ ದಿನದಂದು ವಿಶ್ರಮಿಸಿಕೊಂಡ ಕಾರಣ ಹಾಗೆ ಮಾಡಿದರು.


ನಿನ್ನ ಯೋಧರೆಲ್ಲ ಆರು ದಿವಸಗಳವರೆಗೆ ದಿನಕ್ಕೆ ಒಂದು ಸಾರಿ ನಗರವನ್ನು ಸುತ್ತಲಿ.


ಅವರು ದೀರ್ಘವಾಗಿ ಊದುವ ಕೊಂಬಿನ ಧ್ವನಿ ಕೇಳುತ್ತಲೇ ನೀವೆಲ್ಲರು ಗಟ್ಟಿಯಾಗಿ ಕೇಕೆ ಹಾಕಿ ಆರ್ಭಟಿಸಿರಿ. ಆಗ ನಗರದ ಗೋಡೆ ತಾನೇ ತಾನಾಗಿ ಬಿದ್ದುಹೋಗುವುದು. ಆಗ ಪ್ರತಿಯೊಬ್ಬನು ನೆಟ್ಟಗೆ ಒಳನುಗ್ಗಬಹುದು,” ಎಂದು ಹೇಳಿದರು.


ಏಳು ಮಂದಿ ಯಾಜಕರು ಕೊಂಬುಗಳನ್ನು ಊದುತ್ತಾ ಸರ್ವೇಶ್ವರನ ಮಂಜೂಷದ ಮುಂದೆ ನಡೆದರು. ಯುದ್ಧಸನ್ನದ್ಧರು ಅವರ ಮುಂದಿದ್ದರು. ಹಿಂಬದಿಯ ದಂಡು ಮಂಜೂಷದ ಹಿಂದಿತ್ತು. ಕೊಂಬುಗಳು ಮೊಳಗುತ್ತಲೇ ಅವರು ಹೊರಟರು.


ಅವನು ಅಂತೆಯೇ ಜೋರ್ಡನಿಗೆ ಹೋಗಿ, ಏಳು ಸಾರಿ ಅದರಲ್ಲಿ ಮುಳುಗಿ ಎದ್ದನು. ಕೂಡಲೆ ದೈವಪುರುಷನ ಮಾತಿಗನುಸಾರ ಅವನ ದೇಹ ಒಂದು ಮಗುವಿನ ದೇಹದಂತೆ ಶುದ್ಧವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು