Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:6 - ಕನ್ನಡ ಸತ್ಯವೇದವು C.L. Bible (BSI)

6 ನೂನನ ಮಗ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಹೋಗಿರಿ. ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಸರ್ವೇಶ್ವರನ ಮಂಜೂಷದ ಮುಂದೆ ನಡೆಯಲಿ,” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, “ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಹೋಗಿರಿ. ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಯೆಹೋವನ ಮಂಜೂಷದ ಮುಂದೆ ನಡೆಯಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ - ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಹೋಗಿರಿ; ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಯೆಹೋವನ ಮಂಜೂಷದ ಮುಂದೆ ನಡೆಯಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ನೂನನ ಮಗನಾದ ಯೆಹೋಶುವನು ಯಾಜಕರನ್ನು ಒಟ್ಟಿಗೆ ಕರೆದು, ಅವರಿಗೆ, “ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಹೋಗಿರಿ. ಏಳು ಮಂದಿ ಯಾಜಕರು ತುತ್ತೂರಿಗಳನ್ನು ತೆಗೆದುಕೊಂಡು ಪೆಟ್ಟಿಗೆಯ ಮುಂದೆ ನಡೆಯಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದ್ದರಿಂದ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಎತ್ತಿಕೊಳ್ಳಿರಿ. ಏಳುಮಂದಿ ಯಾಜಕರು ಏಳು ಟಗರು ಕೊಂಬುಗಳ ತುತೂರಿಗಳೊಂದಿಗೆ ಯೆಹೋವ ದೇವರ ಮಂಜೂಷದ ಮುಂದೆ ಹೋಗಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:6
11 ತಿಳಿವುಗಳ ಹೋಲಿಕೆ  

ಇತ್ತ ಸೌಲನು ಯೇಸುಸ್ವಾಮಿಯ ಅನುಯಾಯಿಗಳಿಗೆ ಬೆದರಿಕೆ ಹಾಕುತ್ತಾ ಅವರನ್ನು ಸಂಹರಿಸಬೇಕೆಂದಿದ್ದನು.


ಏಳು ಮಂದಿ ಯಾಜಕರು ಕೊಂಬುಗಳನ್ನು ಊದುತ್ತಾ ಸರ್ವೇಶ್ವರನ ಮಂಜೂಷದ ಮುಂದೆ ನಡೆದರು. ಯುದ್ಧಸನ್ನದ್ಧರು ಅವರ ಮುಂದಿದ್ದರು. ಹಿಂಬದಿಯ ದಂಡು ಮಂಜೂಷದ ಹಿಂದಿತ್ತು. ಕೊಂಬುಗಳು ಮೊಳಗುತ್ತಲೇ ಅವರು ಹೊರಟರು.


ಯೆಹೋಶುವನು ಆಜ್ಞಾಪಿಸಿದಂತೆಯೇ ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಊದುತ್ತಾ ಸರ್ವೇಶ್ವರನ ಮುಂದೆ ನಡೆದರು. ಸರ್ವೇಶ್ವರನ ಒಡಂಬಡಿಕೆಯ ಮಂಜೂಷವು ಅವರ ಹಿಂದೆ ಹೋಯಿತು.


ಯಾಜಕರಿಗೆ, “ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ನದಿದಾಟಿರಿ,” ಎಂದು ಆಜ್ಞಾಪಿಸಿದನು. ಅವರು ಅಂತೆಯೇ ಮಂಜೂಷವನ್ನು ಹೊತ್ತುಕೊಂಡು ಹೋದರು.


“ನಿಮ್ಮ ದೇವರಾದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಯಾಜಕರಾದ ಲೇವಿಯರು ಹೊತ್ತಿರುವುದನ್ನು ನೀವು ಕಂಡಕೂಡಲೆ ನೀವು ಕೂಡ ನಿಮ್ಮ ನಿಮ್ಮ ಸ್ಥಳವನ್ನು ಬಿಟ್ಟು ಅದರ ಹಿಂದೆ ಹೋಗಿ.


ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು.


ಅವರು ದೀರ್ಘವಾಗಿ ಊದುವ ಕೊಂಬಿನ ಧ್ವನಿ ಕೇಳುತ್ತಲೇ ನೀವೆಲ್ಲರು ಗಟ್ಟಿಯಾಗಿ ಕೇಕೆ ಹಾಕಿ ಆರ್ಭಟಿಸಿರಿ. ಆಗ ನಗರದ ಗೋಡೆ ತಾನೇ ತಾನಾಗಿ ಬಿದ್ದುಹೋಗುವುದು. ಆಗ ಪ್ರತಿಯೊಬ್ಬನು ನೆಟ್ಟಗೆ ಒಳನುಗ್ಗಬಹುದು,” ಎಂದು ಹೇಳಿದರು.


ಅಂತೆಯೆ ಜನರಿಗೆ, “ನೀವು ಮುಂದೆ ಹೋಗಿ ನಗರವನ್ನು ಸುತ್ತುವರೆಯಿರಿ. ಯುದ್ಧಸನ್ನದ್ಧರೆಲ್ಲರೂ ಸರ್ವೇಶ್ವರನ ಮಂಜೂಷದ ಮುಂದೆ ಹೋಗಲಿ,” ಎಂದು ಹೇಳಿದನು.


ಇಸ್ರಯೇಲರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರೊಡನೆ ಅವರ ಹಿರಿಯರು, “ಸರ್ವೇಶ್ವರ ಈ ದಿನ ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶಿಲೋವಿನಿಂದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ತರೋಣ; ಅವರು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಯಿಂದ ನಮ್ಮನ್ನು ರಕ್ಷಿಸಲಿ,” ಎಂದು ಸಮಾಲೋಚಿಸಿದರು.


ನೀವು ಜೋರ್ಡನನ್ನು ದಾಟಿ ಜೆರಿಕೋವಿಗೆ ಬಂದಿರಿ. ಆಗ ಜೆರಿಕೋವಿನವರು, ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷ್ಟಿಯರು, ಹಿವ್ವಿಯರು ಹಾಗೂ ಯೆಬೂಸಿಯರು ಇವರೆಲ್ಲರೂ ನಿಮಗೆ ವಿರುದ್ಧ ಯುದ್ಧಕ್ಕೆ ಬಂದರು. ನಾನು ಅವರೆಲ್ಲರನ್ನು ನಿಮ್ಮ ಕೈವಶಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು