Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:1 - ಕನ್ನಡ ಸತ್ಯವೇದವು C.L. Bible (BSI)

1 ಆಕಾನನು ಯೆಹೂದ್ಯ ಕುಲದವನು, ಜೆರಹನ ಗೋತ್ರದವನು, ಕರ್ಮೀಯ ಮಗನೂ ಜಬ್ದೀಯ ಕುಟುಂಬದವನೂ ಆಗಿದ್ದನು. ಸರ್ವೇಶ್ವರಸ್ವಾಮಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಈತ ಕೆಲವನ್ನು ಕದ್ದುಕೊಂಡನು. ಈ ಕಾರಣ ಇಸ್ರಯೇಲರೆಲ್ಲರು ದ್ರೋಹಿಗಳಾದರು. ಸರ್ವೇಶ್ವರನ ಕೋಪ ಅವರ ಮೇಲೆ ಉರಿಯಹತ್ತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೂದ ಕುಲದವನೂ ಜೆರಹನ ಗೋತ್ರದವನೂ, ಜಬ್ದೀಯ ಕುಟುಂಬದವನೂ, ಕರ್ಮೀಯ ಮಗನೂ ಆದ ಆಕಾನನು ಯೆಹೋವನಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡದ್ದರಿಂದ ಇಸ್ರಾಯೇಲ್ಯರೆಲ್ಲರು ದ್ರೋಹಿಗಳಾದರು. ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೂದಕುಲದವನೂ ಜೆರಹನ ಗೋತ್ರದವನೂ ಜಬ್ದೀಯ ಕುಟುಂಬದವನೂ ಕರ್ಮೀಯ ಮಗನೂ ಆದ ಆಕಾನನು ಯೆಹೋವನಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡದರಿಂದ ಇಸ್ರಾಯೇಲ್ಯರೆಲ್ಲರೂ ದ್ರೋಹಿಗಳಾದರು. ಯೆಹೋವನ ಕೋಪವು ಅವರ ಮೇಲೆ ಉರಿಯಹತ್ತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲರು ಯೆಹೋವನ ಆಜ್ಞೆಗೆ ವಿಧೇಯರಾಗಲಿಲ್ಲ. ಯೆಹೂದ ಕುಲದವನೂ ಕರ್ಮೀಯ ಮಗನೂ ಜಬ್ದೀಯ ಮೊಮ್ಮಗನೂ ಜೆರಹನ ಗೋತ್ರದವನೂ ಆದ ಆಕಾನ ಎಂಬವನು ನಾಶಮಾಡಬೇಕಾದ ವಸ್ತುಗಳಲ್ಲಿ ಕೆಲವನ್ನು ಇಟ್ಟುಕೊಂಡಿದ್ದನು. ಅದಕ್ಕಾಗಿ ಯೆಹೋವನು ಇಸ್ರೇಲಿನವರ ಮೇಲೆ ತುಂಬಾ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದರೆ ಇಸ್ರಾಯೇಲರು ಅರ್ಪಿತವಾದ ವಸ್ತುಗಳ ವಿಷಯದಲ್ಲಿ ಅಪನಂಬಿಕೆಯಿಂದ ನಡೆದುಕೊಂಡರು. ಯೆಹೂದ ಗೋತ್ರದ ಜೆರಹನ ಮೊಮ್ಮಗನೂ, ಜಿಮ್ರಿಯ ಮಗನೂ ಆದ ಕರ್ಮೀಯ ಮಗನಾದ ಆಕಾನನು ಅರ್ಪಿತವಾದ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡನು. ಇದರಿಂದ ಇಸ್ರಾಯೇಲರ ಮೇಲೆ ಯೆಹೋವ ದೇವರ ಕೋಪವು ಉರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:1
19 ತಿಳಿವುಗಳ ಹೋಲಿಕೆ  

ಜೆರಹನ ಮಗ ಆಕಾನನು ಸರ್ವೇಶ್ವರನ ಸೊತ್ತನ್ನು ಕದ್ದುಕೊಂಡು ದ್ರೋಹಿಯಾದ. ಆಗ ಸರ್ವೇಶ್ವರನ ಕೋಪ ಇಸ್ರಯೇಲರ ಸರ್ವಸಭೆಯ ಮೇಲೆ ಎರಗಿತು. ಅವನ ಪಾಪದ ನಿಮಿತ್ತ ಅವನೊಡನೆ ಅನೇಕರು ಸಾಯಬೇಕಾಯಿತಲ್ಲವೆ?” ಎಂದು ಹೇಳಿದರು.


ಯುದ್ಧಾಯುಧಗಳಿಗಿಂತ ಜ್ಞಾನವೇ ಉತ್ತಮ; ಆದರೆ ಒಬ್ಬನೇ ಒಬ್ಬ ಪಾಪಿ ಸಾಕು ಪುಣ್ಯಕೋಟೆಯನ್ನು ಹಾಳುಮಾಡಲು!


ಜನಗಣತಿ ಮಾಡಿದ್ದು ದೇವರಿಗೆ ಕೆಟ್ಟದ್ದು ಎಂದು ಕಂಡಿತು. ಆದ್ದರಿಂದ ಅವರು ಇಸ್ರಯೇಲರನ್ನು ಶಿಕ್ಷಿಸಿದರು.


ಇಂತಿರುವಲ್ಲಿ ನೀವು ಮತ್ತೆ ಸರ್ವೇಶ್ವರನನ್ನು ಬಿಟ್ಟುಬಿಡುತ್ತೀರೋ? ನೀವು ಇಂದು ಸರ್ವೇಶ್ವರನಿಗೆ ವಿರುದ್ಧ ತಿರುಗಿಬಿದ್ದರೆ ನಾಳೆಯೇ ಅವರ ಕೋಪಾಗ್ನಿ ಇಸ್ರಯೇಲ್ ಸರ್ವಸಭೆಯ ಮೇಲೆ ಉರಿಯತೊಡಗುವುದು.


“ಸರ್ವೇಶ್ವರನ ಸರ್ವಸಭೆ ಹೇಳುವ ಮಾತಿದು: ನೀವು ಇಸ್ರಯೇಲ್ ದೇವರಿಗೆ ವಿರುದ್ಧ ಇಂಥ ದ್ರೋಹ ಮಾಡಿದ್ದೇಕೆ? ನೀವು ನಿಮಗಾಗಿಯೇ ಒಂದು ಬಲಿಪೀಠವನ್ನು ಕಟ್ಟಿಕೊಂಡಿದ್ದೀರಿ. ಇದರಿಂದ ನೀವು ಸರ್ವೇಶ್ವರನಿಗೆ ವಿಮುಖವಾದಂತಾಯಿತು; ನೀವು ಇಂದು ಸರ್ವೇಶ್ವರನಿಗೆ ವಿರುದ್ಧ ತಿರುಗಿಬಿದ್ದಂತಾಯಿತು.


ಆಗ ನಾವಿಕರು: “ನಮಗೆ ಸಂಭವಿಸಿರುವ ಈ ದುರಂತಕ್ಕೆ ಕಾರಣ ಯಾರಿರಬಹುದು? ಬನ್ನಿ, ಚೀಟುಹಾಕಿ ನೋಡೋಣ” ಎಂದು ತಮ್ಮ ತಮ್ಮಲ್ಲೇ ಮಾತನಾಡಿಕೊಂಡರು. ಹಾಗೆ ಮಾಡಿದಾಗ ಚೀಟು ಯೋನನ ಹೆಸರಿಗೆ ಬಂತು.


“ನನ್ನ ದೇವರೇ, ನಾನು ಮನಗುಂದಿದವನು ಆಗಿದ್ದೇನೆ; ನಿಮ್ಮ ಕಡೆಗೆ ಮುಖವನ್ನು ಎತ್ತುವುದಕ್ಕೆ ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ; ನಮ್ಮ ಅಪರಾಧ ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ!


ಅಂದಿನಿಂದ ಅವರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನ ಆಲಯವನ್ನು ನಿರಾಕರಿಸಿ, ಅಶೇರ ಸ್ತಂಭಗಳನ್ನೂ ವಿಗ್ರಹಗಳನ್ನೂ ಪೂಜಿಸ ತೊಡಗಿದರು. ಅವರ ಈ ಅಪರಾಧದಿಂದ ಜುದೇಯದ ಮೇಲೂ ಜೆರುಸಲೇಮಿನ ಮೇಲೂ ದೈವಕೋಪ ಎರಗಿತು.


ಸರ್ವೇಶ್ವರಸ್ವಾಮಿ ಮತ್ತೆ ಇಸ್ರಯೇಲರ ಮೇಲೆ ಕೋಪಗೊಂಡರು. ಇಸ್ರಯೇಲ್ ಹಾಗು ಯೆಹೂದ್ಯಕುಲಗಳವರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದರು.


ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಾವೋ ಲಜ್ಜೆಗೆಟ್ಟವರು. ಹೌದು, ಯೆಹೂದ್ಯರು ಹಾಗು ಜೆರುಸಲೇಮಿನ ನಿವಾಸಿಗಳು ಈಗಾಗಲೆ ನಿಮಗೆ ವಿರುದ್ಧ ಮಾಡಿದ ದ್ರೋಹದ ನಿಮಿತ್ತ ನಿಮ್ಮಿಂದ ದೇಶವಿದೇಶಗಳಿಗೆ ತಳ್ಳಲ್ಪಟ್ಟಿದ್ದಾರೆ. ದೂರದ ದೇಶಗಳಿಗೂ ಹತ್ತಿರದ ನಾಡುಗಳಿಗೂ ಚದರಿಹೋಗಿರುವ ಎಲ್ಲ ಇಸ್ರಯೇಲರು ನಾಚಿಕೆಗೆ ಈಡಾಗಿದ್ದಾರೆ.


ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಹಾಗು ಈತಾಮಾರ್ ಎಂಬುವರಿಗೆ, “ನೀವು ಸಂತಾಪ ಸೂಚಿಸಲು ಕೂದಲನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವು ಕೂಡ ಸಾಯುವಿರಿ; ಅದು ಮಾತ್ರವಲ್ಲ, ಇಡೀ ಜನಸಮೂಹದ ಮೇಲೆ ಸರ್ವೇಶ್ವರ ಸಿಟ್ಟುಗೊಳ್ಳುವರು. ಸರ್ವೇಶ್ವರನಿಂದ ಹೊರಟ ಆ ಬೆಂಕಿಯ ನಿಮಿತ್ತ ನಿಮ್ಮ ಸೋದರರಾದ ಇಸ್ರಯೇಲ್ ಸಮಾಜದವರೇ ದುಃಖಿಸಲಿ.


ಗುಡ್ಡವನ್ನು ಮುಟ್ಟಿದಾಗ, ಗೇಹಜಿಯು ಅವುಗಳನ್ನು ತೆಗೆದುಕೊಂಡು, ಮನೆಯಲ್ಲಿ ಅಡಗಿಸಿಬಿಟ್ಟು, ಆಳುಗಳನ್ನು ಕಳುಹಿಸಿಬಿಟ್ಟನು.


ಯಕೋಬನ ಇತರ ಮಕ್ಕಳು ಹತರಾದವರ ಬಳಿಗೆ ಬಂದು, ‘ತಂಗಿಯನ್ನು ಅವಮಾನ ಪಡಿಸಿದವರು ಇವರೇ ಅಲ್ಲವೆ’, ಎಂದುಕೊಂಡು ಆ ಊರನ್ನೇ ಸೂರೆಮಾಡಿಬಿಟ್ಟರು.


ನಿನ್ನ ನೀಚತನದಿಂದ ನಿನ್ನಂಥವನಿಗೇ ನಷ್ಟ ನಿನ್ನ ಸಜ್ಜನಿಕೆಯಿಂದ ನರಜನ್ಮದವನಿಗೇ ಲಾಭ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು