ಯೆಹೋಶುವ 7:11 - ಕನ್ನಡ ಸತ್ಯವೇದವು C.L. Bible (BSI)11 ಇಸ್ರಯೇಲರು ನನ್ನ ಕಟ್ಟಳೆಯನ್ನು ಮೀರಿ ಪಾಪಿಷ್ಠರಾಗಿದ್ದಾರೆ. ಮೀಸಲಾದ ವಸ್ತುಗಳನ್ನು ತೆಗೆದುಕೊಂಡು ಕಳ್ಳರಾಗಿದ್ದಾರೆ. ಅವುಗಳನ್ನು ತಮ್ಮ ಸಲಕರಣೆಗಳಲ್ಲಿ ಬಚ್ಚಿಟ್ಟುಕೊಂಡು ವಂಚಕರಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇಸ್ರಾಯೇಲ್ಯರು ನನ್ನ ನಿಬಂಧನೆಯನ್ನು ಮೀರಿ ಪಾಪಿಷ್ಠರಾಗಿದ್ದಾರೆ. ಕೊಳ್ಳೆಯಲ್ಲಿ ಮೀಸಲಾದ ವಸ್ತುಗಳನ್ನು ಕದ್ದು ತಮ್ಮ ಸಾಮಾನುಗಳಲ್ಲಿ ಅಡಗಿಸಿಟ್ಟು ವಂಚಕರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇಸ್ರಾಯೇಲ್ಯರು ನನ್ನ ನಿಬಂಧನೆಯನ್ನು ಮೀರಿ ಪಾಪಿಷ್ಠರಾಗಿದ್ದಾರೆ. ಮೀಸಲಾದ ವಸ್ತುಗಳನ್ನು ತೆಗೆದುಕೊಂಡು ಕಳ್ಳರಾಗಿ ತಮ್ಮ ಸಾಮಾನುಗಳಲ್ಲಿ ಅಡಗಿಸಿಟ್ಟು ವಂಚಕರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಇಸ್ರೇಲರು ಪಾಪಮಾಡಿದ್ದಾರೆ. ನಾನು ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ. ನಾನು ನಾಶಪಡಿಸಲು ಹೇಳಿದ ವಸ್ತುಗಳಲ್ಲಿ ಕೆಲವನ್ನು ಅವರು ತೆಗೆದುಕೊಂಡಿದ್ದಾರೆ; ಅವರು ನನ್ನಿಂದ ಕದ್ದಿದ್ದಾರೆ; ಸುಳ್ಳು ಹೇಳಿದ್ದಾರೆ. ಅವರು ಆ ವಸ್ತುಗಳನ್ನು ತಮಗಾಗಿ ತೆಗೆದುಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇಸ್ರಾಯೇಲರು ಪಾಪಮಾಡಿದ್ದಾರೆ. ನಾನು ತಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಮೀರಿದರು. ಅವರು ಅರ್ಪಿತವಾದದ್ದರಲ್ಲಿ ಕೆಲವೊಂದನ್ನು ಕಳವು ಮಾಡಿ ತೆಗೆದುಕೊಂಡು, ವಂಚನೆಮಾಡಿ ಅದನ್ನು ತಮ್ಮ ಸಲಕರಣೆಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ. ಅಧ್ಯಾಯವನ್ನು ನೋಡಿ |
“ಯಾರಾದರು ಸರ್ವೇಶ್ವರನಿಗೆ ಸಲ್ಲಿಸಬೇಕಾದ ಪವಿತ್ರವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ, ಅಂಥವರು ಆ ಅಪರಾಧಕ್ಕೆ ಪರಿಹಾರ ಮಾಡಬೇಕು; ದೇವರ ಸೇವೆಗೆ ನೇಮಕವಾದ ನಾಣ್ಯದ ಮೇರೆಗೆ ಎರಡು ಅಥವಾ ಹೆಚ್ಚು ನಾಣ್ಯ ಬೆಲೆ ಬಾಳುವುದೆಂದು ತೋರುವ ಕಳಂಕರಹಿತವಾದ ಒಂದು ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಸರ್ವೇಶ್ವರನಿಗೆ ಸಮರ್ಪಿಸಬೇಕು.