Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:15 - ಕನ್ನಡ ಸತ್ಯವೇದವು C.L. Bible (BSI)

15 ಯಾವನು ಮೀಸಲಾದ ವಸ್ತುವನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುತ್ತಾನೋ ಅವನು ತನ್ನ ಆಸ್ತಿಪಾಸ್ತಿ ಸಹಿತವಾಗಿ ಸುಡಲ್ಪಡಬೇಕು. ಏಕೆಂದರೆ ಅವನು ಸರ್ವೇಶ್ವರನ ಕಟ್ಟಳೆಯನ್ನು ಮೀರಿ ಇಸ್ರಯೇಲರಲ್ಲಿ ಭ್ರಷ್ಟಾಚಾರವನ್ನು ನಡೆಸಿದ್ದಾನೆ,’ ಎಂದು ಹೇಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯಾವನು ಮೀಸಲಾದ ವಸ್ತುಗಳನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುತ್ತಾನೋ ಅವನು ಯೆಹೋವನ ನಿಬಂಧನೆಯನ್ನು ಮೀರಿ ಇಸ್ರಾಯೇಲರಲ್ಲಿ ಬುದ್ಧಿಹೀನಕಾರ್ಯ ನಡಿಸಿದ್ದರಿಂದ ತನ್ನ ಎಲ್ಲಾ ಆಸ್ತಿ ಸಹಿತವಾಗಿ ಸುಡಲ್ಪಡಬೇಕು’” ಎಂದು ಹೇಳು ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯಾವನು ಮೀಸಲಾದ ವಸ್ತುಗಳನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುವನೋ ಅವನು ಯೆಹೋವನ ನಿಬಂಧನೆಯನ್ನು ಮೀರಿ ಇಸ್ರಾಯೇಲ್ಯರಲ್ಲಿ ಬುದ್ಧಿಹೀನಕಾರ್ಯವನ್ನು ನಡಿಸಿದ್ದರಿಂದ ತನ್ನ ಎಲ್ಲಾ ಆಸ್ತಿಸಹಿತವಾಗಿ ಸುಡಲ್ಪಡಬೇಕು ಎಂದು ಹೇಳು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ನಾವು ನಾಶಪಡಿಸಬೇಕಾಗಿದ್ದ ವಸ್ತುಗಳನ್ನು ಇಟ್ಟುಕೊಂಡ ಮನುಷ್ಯನು ಸಿಕ್ಕಿಬೀಳುತ್ತಾನೆ. ಬಳಿಕ ಆ ಮನುಷ್ಯನು ಬೆಂಕಿಯಿಂದ ನಾಶವಾಗುವನು. ಅವನ ಎಲ್ಲಾ ಸ್ವತ್ತು ಅವನೊಂದಿಗೆ ನಾಶವಾಗುವುದು. ಆ ಮನುಷ್ಯನು ಯೆಹೋವನ ಆಜ್ಞೆಯನ್ನು ಮೀರಿದ್ದಾನೆ. ಇಸ್ರೇಲರಿಗೆ ಕೇಡನ್ನು ಬರಮಾಡಿದ್ದಾನೆ’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಶಾಪಕ್ಕೀಡಾದದ್ದನ್ನು ತೆಗೆದುಕೊಂಡವನೆಂದು ಹಿಡಿಯಲಾಗುವನು. ಯೆಹೋವ ದೇವರ ಒಡಂಬಡಿಕೆಯನ್ನು ಮೀರಿ, ಇಸ್ರಾಯೇಲಿನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲಾಗಬೇಕು, ಎಂದು ಅವರಿಗೆ ಹೇಳು,’ ಎಂದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:15
11 ತಿಳಿವುಗಳ ಹೋಲಿಕೆ  

ಇತ್ತ ಯಕೋಬನ ಗಂಡು ಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದರು. ಶೆಕೆಮನು ತಮ್ಮ ತಂಗಿಯನ್ನು ಬಲಾತ್ಕಾರದಿಂದ ಕೂಡಿ, ಮಾಡಬಾರದನ್ನು ಮಾಡಿ, ಇಸ್ರಯೇಲರಿಗೆ ಘನ ಅವಮಾನವನ್ನು ಮಾಡಿದ್ದರಿಂದ ಅವರು ತಳಮಳಗೊಂಡು ಕಡುಕೋಪದಿಂದ ಇದ್ದರು.


ಅವರು ಇಸ್ರಯೇಲರಲ್ಲಿ ನಡೆಸಿದ ಇಂಥ ಕೆಟ್ಟ ಹಾಗು ಹುಚ್ಚುಗೆಲಸ ಎಲ್ಲರಿಗೂ ಗೊತ್ತಾಗಲೆಂದು ನಾನು ಆಕೆಯ ಶವವನ್ನು ತುಂಡುಮಾಡಿ ಇಸ್ರಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದೆನು.


ಇಂಥ ಹುಚ್ಚುತನ ಬೇಡ, ಈ ಅವಮಾನವನ್ನು ಮರೆಮಾಡುವುದು ಹೇಗೆ? ನಿನಗಂತೂ ಇಸ್ರಯೇಲರಲ್ಲಿ ನೀಚನೆಂಬ ಹೆಸರು ತಪ್ಪದು. ಆದುದರಿಂದ ದಯವಿಟ್ಟು ಅರಸನ ಸಂಗಡ ಮಾತಾಡು. ಅವನು ನನ್ನನ್ನು ನಿನಗೆ ಕೊಡದಿರಲಾರನು,” ಎಂದಳು.


ಆಗ ಸೌಲನು, “ನಾನು ಪಾಪಮಾಡಿದೆ, ದಾವೀದನೇ, ನನ್ನ ಪುತ್ರನೇ, ಹಿಂದಿರುಗಿ ಬಾ; ಈ ದಿನ ನನ್ನ ಜೀವ ನಿನ್ನ ದೃಷ್ಟಿಯಲ್ಲಿ ಬಲು ಬೆಲೆಯುಳ್ಳದೆಂದು ಮಾನ್ಯವಾಯಿತು. ಆದುದರಿಂದ ನಾನು ಇನ್ನು ಮುಂದೆ ನಿನಗೆ ಕೇಡು ಮಾಡುವುದಿಲ್ಲ. ಈವರೆಗೆ ನಾನು ಮಾಡಿದ್ದು ಹುಚ್ಚುತನ ಹಾಗೂ ದೊಡ್ಡ ತಪ್ಪು,” ಎಂದು ಹೇಳಿದನು.


ಇಸ್ರಯೇಲರು ನನ್ನ ಕಟ್ಟಳೆಯನ್ನು ಮೀರಿ ಪಾಪಿಷ್ಠರಾಗಿದ್ದಾರೆ. ಮೀಸಲಾದ ವಸ್ತುಗಳನ್ನು ತೆಗೆದುಕೊಂಡು ಕಳ್ಳರಾಗಿದ್ದಾರೆ. ಅವುಗಳನ್ನು ತಮ್ಮ ಸಲಕರಣೆಗಳಲ್ಲಿ ಬಚ್ಚಿಟ್ಟುಕೊಂಡು ವಂಚಕರಾಗಿದ್ದಾರೆ.


ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಯೇಲ್ ಕುಲಗಳನ್ನು ಒಂದೊಂದಾಗಿ ಬರಮಾಡಿದನು. ಯೆಹೂದಕುಲ ಸಿಕ್ಕಿಕೊಂಡಿತು.


ಆ ಊರಿನ ಜನರು ಅದೇ ರಾತ್ರಿ ನಾನು ಇಳಿದುಕೊಂಡಿದ್ದ ಮನೆಯನ್ನು ಸುತ್ತಿಕೊಂಡು ನನ್ನನ್ನು ಕೊಲ್ಲಬೇಕೆಂದಿದ್ದರು; ಮತ್ತು ನನ್ನ ಉಪಪತ್ನಿಯ ಮೇಲೆ ಅತ್ಯಾಚಾರಮಾಡಿದರು. ಆಕೆ ಸತ್ತಳು.


ಇಸ್ರಯೇಲರ ಕುಲಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಈ ಪ್ರಕಾರವೇ ಜನರನ್ನು ಆರಿಸಿಕೊಂಡು ಅವರನ್ನು ಆಹಾರ ತರುವುದಕ್ಕಾಗಿ ಕಳುಹಿಸೋಣ. ಅವರು ಬಂದ ಮೇಲೆ ಬೆನ್ಯಾಮೀನ್ಯರಾದ ಗಿಬೆಯದವರು ಇಸ್ರಯೇಲರಲ್ಲಿ ನಡೆಸಿದ ದುಷ್ಕರ್ಮಕ್ಕಾಗಿ ಅವರನ್ನು ದಂಡಿಸೋಣ,” ಎಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು