Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:21 - ಕನ್ನಡ ಸತ್ಯವೇದವು C.L. Bible (BSI)

21 ನಾನು ಕೊಳ್ಳೆಯಲ್ಲಿ ಶಿನಾರ್ ನಾಡಿನ ಒಂದು ಉತ್ತಮವಾದ ನಿಲುವಂಗಿಯನ್ನೂ ಎರಡು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಅರ್ಧ ಕಿಲೋಗ್ರಾಂ ತೂಕದ ಗಟ್ಟಿಯನ್ನೂ ಕಂಡು ಆಶೆಯಿಂದ ಅವನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ಹೂತಿಟ್ಟಿದ್ದೇನೆ; ಬೆಳ್ಳಿಯು ಅಂಗಿಯ ಕೆಳಗಿದೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಾವು ಜೆರಿಕೊ ನಗರವನ್ನು ಮತ್ತು ಅದರಲ್ಲಿದ್ದ ಎಲ್ಲ ವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಕೊಳ್ಳೆ ಹೊಡೆಯುತ್ತಿದ್ದಾಗ, ಬಾಬಿಲೋನಿನ ಒಂದು ಸುಂದರವಾದ ನಿಲುವಂಗಿಯನ್ನೂ ಸುಮಾರು ಐದು ಪೌಂಡಿನಷ್ಟು ಬೆಳ್ಳಿಯನ್ನೂ ಒಂದು ಪೌಂಡಿಗಿಂತಲೂ ಹೆಚ್ಚು ಬಂಗಾರವನ್ನೂ ಕಂಡೆನು. ಈ ವಸ್ತುಗಳನ್ನು ನನಗಾಗಿ ಇಟ್ಟುಕೊಳ್ಳಬೇಕೆಂದು ತುಂಬ ಆಶೆಯಾಯಿತು. ಅದಕ್ಕಾಗಿ ನಾನು ಅವುಗಳನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದಲ್ಲಿ ಹುಗಿದಿಟ್ಟಿದ್ದೇನೆ. ಬೆಳ್ಳಿಯು ನಿಲುವಂಗಿಯ ಕೆಳಗಡೆ ಇದೆ” ಎಂದು ಒಪ್ಪಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಾನು ಕೊಳ್ಳೆಯಲ್ಲಿ ಒಂದು ಶಿನಾರ್ ದೇಶದ ಒಳ್ಳೆಯ ವಸ್ತ್ರವನ್ನೂ ಎರಡು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಅರ್ಧ ಕಿಲೋಗ್ರಾಂ ತೂಕದ ಒಂದು ಬಂಗಾರದ ಗಟ್ಟಿಯನ್ನು ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ, ಬೆಳ್ಳಿಯೂ ಅದರ ಕೆಳಗೆ ಇದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:21
35 ತಿಳಿವುಗಳ ಹೋಲಿಕೆ  

ದುರಿಚ್ಛೆ ಗರ್ಭಧರಿಸಿ ಪಾಪಕ್ಕೆ ಜನ್ಮವೀಯುತ್ತದೆ; ಪಾಪವು ಪೂರ್ತಿಯಾಗಿ ಬೆಳೆದು ಮರಣವನ್ನು ಹಡೆಯುತ್ತದೆ.


ಅನಂತರ ಜನರನ್ನುದ್ದೇಶಿಸಿ, “ಎಚ್ಚರಿಕೆ, ಯಾವ ವಿಧವಾದ ಲೋಭಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಏಕೆಂದರೆ, ಒಬ್ಬನಿಗೆ ಎಷ್ಟೇ ಸಿರಿಸಂಪತ್ತಿರಲಿ, ಅವನ ನಿಜವಾದ ಜೀವನ ಅದನ್ನು ಅವಲಂಬಿಸಿಲ್ಲ,” ಎಂದು ಹೇಳಿದರು.


ವ್ಯರ್ಥವಾದವುಗಳು ನಾಟದಿರಲಿ ಕಣ್ಗೆ I ಚೇತನ ನೀಡು ನಿನ್ನ ಮಾರ್ಗದಲಿ ನನಗೆ II


ಇವರು ಹಾದಿತಪ್ಪಿದವರು, ಸನ್ಮಾರ್ಗವನ್ನು ತ್ಯಜಿಸಿದವರು; ಬೆಯೋರನ ಮಗ ಬಿಳಾಮನ ದಾರಿಯನ್ನು ಹಿಡಿದವರು.


“ಆ ಜನರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಬಯಸಬಾರದು. ಅದನ್ನು ತೆಗೆದುಕೊಂಡರೆ ಅದೇ ನಿಮಗೆ ಉರುಲಾಗುವದು. ಅದು ನಿಮ್ಮ ದೇವರಾದ ಸರ್ವೇಶ್ವರನಿಗೆ ಹೇಯವಾದುದು; ಅವರಿಂದ ಶಾಪಗ್ರಸ್ತವಾದುದು.


ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ.


ಆಸ್ತಿ ಗಳಿಸಲು ಲೋಭಿಗೆ ಆತುರ; ತನಗೆ ಕೊರತೆ ಕಾದಿದೆಯೆಂದು ಆತ ಅರಿಯ.


ಒಂದು ದಿನ ಸಂಜೆ ಹೊತ್ತಿನಲ್ಲಿ ದಾವೀದನು ಮಂಚದಿಂದೆದ್ದು ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಆಗ ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.


ಈ ಮನುಷ್ಯಪುತ್ರಿಯರ ಚೆಲುವನ್ನು ಕಂಡು ದೇವಪುತ್ರರು ತಮಗೆ ಇಷ್ಟಬಂದವರನ್ನೆಲ್ಲ ಮದುವೆಯಾದರು.


ಆಗ ಆ ಮಹಿಳೆ, “ಈ ಮರದ ಹಣ್ಣು ಊಟಕ್ಕೆ ಎಷ್ಟು ಚೆನ್ನಾಗಿದೆ, ನೋಟಕ್ಕೆ ಎಷ್ಟು ರಮಣೀಯವಾಗಿದೆ. ಜ್ಞಾನಾರ್ಜನೆಗೆ ಎಷ್ಟು ಆಕರ್ಷಣೀಯವಾಗಿದೆ” ಎಂದು ತಿಳಿದು, ಅದನ್ನು ತೆಗೆದುಕೊಂಡು ತಿಂದಳು; ಸಂಗಡವಿದ್ದ ಗಂಡನಿಗೂ ಕೊಟ್ಟಳು; ಅವನೂ ತಿಂದನು.


ನಿಮ್ಮಲ್ಲಿರುವ ಪ್ರಾಪಂಚಿಕ ಆಶೆ ಆಕಾಂಕ್ಷೆಗಳನ್ನು ತ್ಯಜಿಸಿರಿ. ಹಾದರ, ಅನೈತಿಕತೆ, ಕಾಮಾಭಿಲಾಷೆ, ದುರಾಲೋಚನೆ, ವಿಗ್ರಹಾರಾಧನೆಗೆ ಸಮವಾಗಿರುವ ಲೋಭ - ಇವುಗಳನ್ನು ದಮನಮಾಡಿರಿ.


ವ್ಯಭಿಚಾರಿಗಳಿಗೂ ಅಶ್ಲೀಲ ಕೃತ್ಯಗಳಲ್ಲಿ ಭಾಗವಹಿಸುವವರಿಗೂ ಮತ್ತು ದುರಾಶೆಯುಳ್ಳವರಿಗೂ (ದುರಾಶೆ ವಿಗ್ರಹಾರಾಧನೆಯ ಒಂದು ರೂಪ) ಕ್ರಿಸ್ತಯೇಸುವಿನ ಮತ್ತು ದೇವರ ಸಾಮ್ರಾಜ್ಯದಲ್ಲಿ ಹಕ್ಕುಬಾಧ್ಯತೆ ಇಲ್ಲವೆಂದು ನಿಮಗೆ ಮನದಟ್ಟಾಗಿರಲಿ.


ನೀವು ದೇವಜನರಾಗಿರುವುದರಿಂದ ನಿಮ್ಮಲ್ಲಿ ಲೈಂಗಿಕ ಪಾಪವಾಗಲಿ, ಅಶುದ್ಧ ಕೃತ್ಯಗಳಾಗಲಿ ಮತ್ತು ದುರಾಶೆಯಾಗಲಿ ಇರಬಾರದು. ಇಂಥ ಸುದ್ದಿಗೂ ನೀವು ಅವಕಾಶ ಕೊಡಬಾರದು.


ಮುಚ್ಚುಮರೆಯಾಗಿರುವುದೆಲ್ಲಾ ಬಟ್ಟಬಯಲಾಗುವುದು; ಗುಟ್ಟಾಗಿರುವುದೆಲ್ಲಾ ರಟ್ಟಾಗುವುದು.


ಕೇಡಿನಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನ್ನ ನಿವಾಸವನ್ನು ಎತ್ತರವಾಗಿ ಕಟ್ಟಿಕೊಂಡೆ. ನಿನ್ನ ಕುಟುಂಬಕ್ಕಾಗಿ ಇತರರ ಆಸ್ತಿಯನ್ನು ಅನ್ಯಾಯವಾಗಿ ದೋಚಿಕೊಂಡೆ, ನಿನ್ನಗೆ ಧಿಕ್ಕಾರ!


ತಮ್ಮ ಆಲೋಚನೆಯನ್ನು ಸರ್ವೇಶ್ವರ ಸ್ವಾಮಿಯಿಂದ ಬಚ್ಚಿಡುವುದಕ್ಕಾಗಿ ಒಳಸಂಚುಮಾಡುವವರಿಗೆ ಧಿಕ್ಕಾರ ! ಇವರು, “ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ಗಮನಿಸಿಯಾರು?” ಎಂದುಕೊಂಡು ಕತ್ತಲಲ್ಲೇ ತಮ್ಮ ಕೃತ್ಯಗಳನ್ನು ನಡೆಸುತ್ತಾರೆ.


ನೀವು ನಿಮ್ಮನಿಮ್ಮೊಳಗೆ : “ಮೃತ್ಯುವಿನೊಂದಿಗೆ ಮುಚ್ಚಳಿಕೆ, ಪಾತಾಳದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಮಹಾವಿಪತ್ತು ನಾಡನ್ನು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು. ನಾವು ಅಸತ್ಯವನ್ನು ಆಶ್ರಯಿಸಿಕೊಂಡಿದ್ದೇವೆ. ಮೋಸವನ್ನು ಮರೆಹೊಕ್ಕಿದ್ದೇವೆ” ಎಂದು ಕೊಚ್ಚಿಕೊಳ್ಳುತ್ತಿದ್ದೀರಿ.


ಪಾತ್ರೆಯಲ್ಲಿ ಕೆಂಪಗೆ ಥಳಥಳಿಸುವ, ಗಂಟಲಿನೊಳಗೆ, ಸುಲಭವಾಗಿ, ಇಳಿಯುವ, ದ್ರಾಕ್ಷಾರಸದ ಮೇಲೆ ಕಣ್ಣಿಡಬೇಡ.


ನಿನ್ನ ಹೃದಯವನ್ನು ಕಾಪಾಡು ಜಾಗರೂಕತೆಯಿಂದ; ಏಕೆಂದರೆ ಜೀವಧಾರೆ ಹೊರಡುವುದು ಅದರಿಂದ.


“ಕನ್ಯೆಯನು (ಕಾಮದೃಷ್ಟಿಯಿಂದ) ನೋಡೆನೆಂದು ಮಾಡಿಕೊಂಡಿರುವೆ ನನ್ನ ಕಣ್ಣುಗಳೊಡನೆ ಒಪ್ಪಂದವನು.


ನೆರೆಯವನ ಮನೆಯನ್ನು ಬಯಸಬೇಡ; ಅವನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬೇಡ.


ಬಾಬಿಲೋನಿಯ (ಶಿನಾರ್) ನಾಡಿನಲ್ಲಿರುವ ಯೆರೆಕ್, ಅಕ್ಕದ್ ಬಾಬಿಲೋನ್ ಕಲ್ನೇ ಈ ಎಲ್ಲ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.


ಅವನಿಗೆ ಆಕಾನನು, “ನಾನು ಇಂಥ ಕಾರ್ಯವನ್ನು ಮಾಡಿ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದ್ದು ನಿಜ,


ಆಗ ಯೆಹೋಶುವನು ಆಳುಗಳನ್ನು ಕಳುಹಿಸಲು ಅವರು ಓಡಿಹೋಗಿ ಹುಡುಕಿದರು. ಆ ನಿಲುವಂಗಿಯನ್ನು ಗುಡಾರದಲ್ಲಿ ಹೂತಿಡಲಾಗಿತ್ತು. ಅದರ ಕೆಳಗೆ ಬೆಳ್ಳಿ ಇತ್ತು.


ಆ ಕುಷ್ಠರೋಗಿಗಳು ಪಾಳೆಯದ ಅಂಚಿಗೆ ಬಂದಾಗ ಮೊದಲನೆಯ ಡೇರೆಯನ್ನು ಹೊಕ್ಕು ಉಂಡು, ಕುಡಿದು ಅದರಲ್ಲಿದ್ದ ಬೆಳ್ಳಿ ಬಂಗಾರವನ್ನೂ ಬಟ್ಟೆಗಳನ್ನೂ ತೆಗೆದುಕೊಂಡು ಬಚ್ಚಿಟ್ಟರು. ಇನ್ನೊಂದು ಡೇರೆಯನ್ನು ಹೊಕ್ಕು ಅಲ್ಲಿಂದಲೂ ತೆಗೆದುಕೊಂಡು ಅಡಗಿಸಿ ಇಟ್ಟರು.


ಯಕೋಬನ ಇತರ ಮಕ್ಕಳು ಹತರಾದವರ ಬಳಿಗೆ ಬಂದು, ‘ತಂಗಿಯನ್ನು ಅವಮಾನ ಪಡಿಸಿದವರು ಇವರೇ ಅಲ್ಲವೆ’, ಎಂದುಕೊಂಡು ಆ ಊರನ್ನೇ ಸೂರೆಮಾಡಿಬಿಟ್ಟರು.


ಸೂರೆ ಮಾಡುವವರೆಲ್ಲರ ಪಾಡು ಇದುವೆ; ಕೊಳ್ಳೆಯು, ಕೊಳ್ಳೆಗಾರರ ಪ್ರಾಣವನ್ನೇ ಕೊಳ್ಳೆಮಾಡುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು