ಯೆಹೋಶುವ 7:24 - ಕನ್ನಡ ಸತ್ಯವೇದವು C.L. Bible (BSI)24 ಜೆರಹನ ಮಗನಾದ ಆಕಾನನನ್ನು ಹಿಡಿದು ಬೆಳ್ಳಿ, ನಿಲುವಂಗಿ, ಬಂಗಾರದ ಗಟ್ಟಿಯನ್ನು, ಅವನ ಗಂಡುಹೆಣ್ಣು ಮಕ್ಕಳನ್ನು, ದನ, ಕರು, ಕತ್ತೆ, ಆಡುಕುರಿಗಳನ್ನು ಮತ್ತು ಗುಡಾರವನ್ನು ಆಕೋರ್ ಎಂಬ ಕಣಿವೆಗೆ ಒಯ್ಯಲಾಯಿತು. ಯೆಹೋಶುವನೂ ಇಸ್ರಯೇಲರೆಲ್ಲರೂ ಅಲ್ಲಿಗೆ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯೆಹೋಶುವನೂ ಮತ್ತು ಎಲ್ಲಾ ಇಸ್ರಾಯೇಲ್ಯರೂ, ಜೆರಹನ ಮಗನಾದ ಆಕಾನನನ್ನು ಹಿಡಿದು ಬೆಳ್ಳಿ, ನಿಲುವಂಗಿ, ಬಂಗಾರದ ಗಟ್ಟಿ, ಅವನ ಗಂಡುಹೆಣ್ಣು ಮಕ್ಕಳನ್ನು, ದನ ಕರು, ಕತ್ತೆ, ಆಡುಕುರಿಗಳನ್ನು ಮತ್ತು ಗುಡಾರದ ಸಹಿತವಾಗಿ ಹಿಡಿದು ಆಕೋರಿನ ತಗ್ಗಿಗೆ ಒಯ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಮತ್ತು ಯೆಹೋಶುವನೂ ಎಲ್ಲಾ ಇಸ್ರಾಯೇಲ್ಯರೂ ಜೆರಹನ ಮಗನಾದ ಆಕಾನನನ್ನು ಆ ಬೆಳ್ಳಿ, ನಿಲುವಂಗಿ, ಬಂಗಾರದ ಗಟ್ಟಿ, ಅವನ ಗಂಡು ಹೆಣ್ಣು ಮಕ್ಕಳು, ದನಕರುಗಳು, ಕತ್ತೆಗಳು, ಆಡುಕುರಿಗಳು, ಗುಡಾರವು ಈ ಎಲ್ಲವುಗಳ ಸಹಿತವಾಗಿ ಹಿಡಿದು ಆಕೋರಿನ ತಗ್ಗಿಗೆ ಒಯ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆಗ ಯೆಹೋಶುವನು ಮತ್ತು ಎಲ್ಲಾ ಇಸ್ರೇಲರು ಸೇರಿ ಜೆರಹನ ಮಗನಾದ ಆಕಾನನನ್ನು, ಬೆಳ್ಳಿಯನ್ನು, ನಿಲುವಂಗಿಯನ್ನು, ಬಂಗಾರವನ್ನು, ಆಕಾನನ ಮಕ್ಕಳನ್ನು, ಅವನ ದನಕರುಗಳನ್ನು, ಕತ್ತೆಗಳನ್ನು, ಅವನ ಕುರಿಗಳನ್ನು, ಅವನ ಗುಡಾರವನ್ನು ಮತ್ತು ಅವನ ಎಲ್ಲ ಸ್ವತ್ತನ್ನು “ಆಕೋರ್” ಕಣಿವೆಗೆ ತೆಗೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಗ ಯೆಹೋಶುವನೂ ಅವನೊಂದಿಗೆ ಇಸ್ರಾಯೇಲರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಪುತ್ರಪುತ್ರಿಯರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ಕಣಿವೆಗೆ ತಂದರು. ಅಧ್ಯಾಯವನ್ನು ನೋಡಿ |