ಯೆಹೋಶುವ 7:25 - ಕನ್ನಡ ಸತ್ಯವೇದವು C.L. Bible (BSI)25 ಯೆಹೋಶುವನು ಆಕಾನನಿಗೆ, “ನೀನು ನಮ್ಮನ್ನು ಆಪತ್ತಿಗೆ ಗುರಿಮಾಡಿದ್ದೇಕೆ? ಈ ದಿನ ಸರ್ವೇಶ್ವರ ನಿನ್ನ ಮೇಲೆ ಆಪತ್ತು ಬರಮಾಡುವರು,” ಎಂದ ಕೂಡಲೆ ಇಸ್ರಯೇಲರೆಲ್ಲರೂ ಅವನನ್ನು ಕಲ್ಲೆಸೆದು ಕೊಂದರು. ಕಲ್ಲೆಸೆದದ್ದು ಮಾತ್ರವಲ್ಲ, ಅವನಿಗೆ ಇದ್ದುದೆಲ್ಲವನ್ನೂ ಬೆಂಕಿಯಿಂದ ಸುಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆಗ ಯೆಹೋಶುವನು ಆಕಾನನಿಗೆ “ನೀನು ನಮ್ಮನ್ನು ಆಪತ್ತಿಗೆ ಗುರಿಮಾಡಿದ್ದೇಕೆ? ಈ ಹೊತ್ತು ಯೆಹೋವನು ನಿನ್ನ ಮೇಲೆ ಆಪತ್ತನ್ನು ಬರಮಾಡುವನು” ಎಂದು ಹೇಳಿದ ಕೂಡಲೆ ಇಸ್ರಾಯೇಲ್ಯರೆಲ್ಲರೂ ಅವನನ್ನು ಕಲ್ಲೆಸೆದು ಕೊಂದರು. ಅವನಿಗಿದ್ದದ್ದೆಲ್ಲವನ್ನು ಬೆಂಕಿಯಿಂದ ಸುಟ್ಟುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅಲ್ಲಿ ಯೆಹೋಶುವನು ಅವನಿಗೆ - ನೀನು ನಮ್ಮನ್ನು ಆಪತ್ತಿಗೆ ಗುರಿಮಾಡಿದ್ದೇಕೆ? ಈ ಹೊತ್ತು ಯೆಹೋವನು ನಿನ್ನ ಮೇಲೆ ಆಪತ್ತನ್ನು ಬರಮಾಡುವನು ಎಂದು ಹೇಳಿದ ಕೂಡಲೆ ಇಸ್ರಾಯೇಲ್ಯರೆಲ್ಲರೂ ಅವನನ್ನು ಕಲ್ಲೆಸೆದು ಕೊಂದರು. ಅವನಿಗಿದ್ದದ್ದೆಲ್ಲವನ್ನೂ ಕಲ್ಲೆಸೆದು ಬೆಂಕಿಯಿಂದ ಸುಟ್ಟುಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆಗ ಯೆಹೋಶುವನು ಅವನಿಗೆ, “ನೀನು ನಮಗೆ ಕೇಡನ್ನು ಬರಮಾಡಿರುವೆ! ಆದ್ದರಿಂದ ಯೆಹೋವನು ನಿನಗೂ ಕೇಡನ್ನು ಮಾಡಲಿ!” ಎಂದನು. ಆಗ ಜನರೆಲ್ಲರೂ ಕಲ್ಲುಗಳನ್ನು ತೂರಿ ಆಕಾನನನ್ನೂ ಅವನ ಕುಟುಂಬದವರನ್ನೂ ಕೊಂದರು ಮತ್ತು ಅವನ ಎಲ್ಲ ಸ್ವತ್ತನ್ನು ಸುಟ್ಟುಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆಗ ಯೆಹೋಶುವನು ಅವನಿಗೆ, “ನೀನು ನಮ್ಮನ್ನು ಸಂಕಷ್ಟಪಡಿಸಿದ್ದೇನು? ಇಂದು ಯೆಹೋವ ದೇವರು ನಿನ್ನನ್ನು ಸಂಕಷ್ಟಪಡಿಸುವರು,” ಎಂದನು. ಆಗ ಇಸ್ರಾಯೇಲರೆಲ್ಲರೂ ಅವನ ಮೇಲೆ ಕಲ್ಲೆಸೆದರು. ಕಲ್ಲೆಸೆದ ತರುವಾಯ ಉಳಿದವರನ್ನು ಬೆಂಕಿಯಿಂದ ಸುಟ್ಟುಬಿಟ್ಟು, ಅಧ್ಯಾಯವನ್ನು ನೋಡಿ |