Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:26 - ಕನ್ನಡ ಸತ್ಯವೇದವು C.L. Bible (BSI)

26 ಅವನ ಮೇಲೆ ಕಲ್ಲುಗಳ ಒಂದು ದೊಡ್ಡ ಗುಡ್ಡೆಯನ್ನು ಹಾಕಿದರು. ಅದು ಇಂದಿನವರೆಗೂ ಇದೆ. ಬಳಿಕ ಸರ್ವೇಶ್ವರನ ಕೋಪಾಗ್ನಿ ತಣ್ಣಗಾಯಿತು. ಈ ಘಟನೆಯಿಂದಾಗಿ ಆ ಸ್ಥಳಕ್ಕೆ ‘ಆಕೋರಿನ ಕಣಿವೆ’ ಎಂಬ ಹೆಸರು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನ ಮೇಲೆ ಕಲ್ಲುಗಳ ಒಂದು ದೊಡ್ಡ ರಾಶಿಯು ನಿರ್ಮಾಣವಾಯಿತು. ಅದು ಇಂದಿನ ವರೆಗೂ ಇದೆ. ಆಗ ಯೆಹೋವನ ಕೋಪಾಗ್ನಿ ತಣ್ಣಗಾಯಿತು. ಈ ಸಂಗತಿಯ ದೆಸೆಯಿಂದ ಆ ಸ್ಥಳಕ್ಕೆ ಇಂದಿನವರೆಗೂ ಆಕೋರಿನ ತಗ್ಗು ಎಂಬ ಹೆಸರಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನ ಮೇಲೆ ಕಲ್ಲುಗಳ ಒಂದು ದೊಡ್ಡ ಕುಪ್ಪೆಯನ್ನು ಹಾಕಿದರು. ಅದು ಇಂದಿನವರೆಗೂ ಅದೆ. ಆಗ ಯೆಹೋವನ ರೋಷಾಗ್ನಿಯು ಅಡಗಿಹೋಯಿತು. ಈ ಸಂಗತಿಯ ದೆಸೆಯಿಂದ ಆ ಸ್ಥಳಕ್ಕೆ ಇಂದಿನವರೆಗೂ ಆಕೋರಿನ ತಗ್ಗು ಎಂಬ ಹೆಸರಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆಕಾನನನ್ನು ಸುಟ್ಟ ಬಳಿಕ ಅವರು ಅವನ ದೇಹದ ಮೇಲೆ ಕಲ್ಲುಗಳ ಒಂದು ದೊಡ್ಡ ಕುಪ್ಪೆಯನ್ನು ಹಾಕಿದರು. ಆ ಕುಪ್ಪೆಯು ಇಂದಿಗೂ ಅಲ್ಲಿದೆ. ಹೀಗೆ ದೇವರು ಆಕಾನನನ್ನು ಶಿಕ್ಷಿಸಿದನು. ಅದಕ್ಕಾಗಿ ಆ ಕಣಿವೆಗೆ “ಆಕೋರ್ ಕಣಿವೆ” ಎಂಬ ಹೆಸರು ಬಂದಿತು. ಬಳಿಕ ಯೆಹೋವನಿಗೆ ಜನರ ಮೇಲಿದ್ದ ಕೋಪ ಶಮನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವರ ಮೇಲೆ ಕಲ್ಲುಕುಪ್ಪೆ ಕೂಡಿಸಿದರು. ಅದು ಈ ದಿನದವರೆಗೂ ಇದೆ. ಆಗ ಯೆಹೋವ ದೇವರು ತಮ್ಮ ಕೋಪದ ಉರಿಯನ್ನು ಬಿಟ್ಟು ತಿರುಗಿದರು. ಆದ್ದರಿಂದ ಆ ಸ್ಥಳವು ಈವರೆಗೂ ಆಕೋರಿನ ಕಣಿವೆ ಎಂದು ಕರೆಯಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:26
22 ತಿಳಿವುಗಳ ಹೋಲಿಕೆ  

ಅವಳ ದ್ರಾಕ್ಷಾತೋಟಗಳನ್ನು ಅಲ್ಲಿಯೇ ಅವಳಿಗೆ ಹಿಂದಿರುಗಿಕೊಡುವೆನು. ಆಕೋರಿನ ಕಣಿವೆಯನ್ನು ಅವಳ ಆಶಾದ್ವಾರವನ್ನಾಗಿ ಮಾಡುವೆನು. ಅವಳು ತನ್ನ ಯೌವನದ ದಿನಗಳಲ್ಲಿಯೂ ಈಜಿಪ್ಟಿನಿಂದ ಬಿಡುಗಡೆಯಾಗಿ ಬಂದ ಸಮಯದಲ್ಲಿಯೂ ಇದ್ದಂತೆ ಅಲ್ಲಿ ಒಲುಮೆಯಿಂದಿರುವಳು.


ನನ್ನ ಜನರ ಹಿತಕ್ಕಾಗಿ ಶಾರೋನ್‍ಬಯಲು ಮಂದೆಗಳಿಗೆ ಹುಲ್ಲುಗಾವಲಾಗುವುದು; ಆಕೋರಿನ ಕಣಿವೆ ದನಕರುಗಳಿಗೆ ಕೊಟ್ಟಿಗೆಯಾಗುವುದು.


ಆ ಶಾಪಗ್ರಸ್ತ ವಸ್ತುಗಳಲ್ಲಿ ನೀವು ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು.


ನನ್ನನ್ನು ಗುಳಿಯಲ್ಲಿಳಿಸಿ ಕಲ್ಲು ಮುಚ್ಚಿದರು ನನ್ನ ಪ್ರಾಣ ತೆಗೆಯಲು ಪ್ರಯತ್ನಿಸಿದರು.


ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡ ಕಲ್ಲುರಾಶಿಯನ್ನು ಮಾಡಿ ಮುಚ್ಚಿದರು. ಇಸ್ರಯೇಲರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.


ಆಯಿಯ ಅರಸನನ್ನು ಸಂಜೆಯವರೆಗೂ ಮರಕ್ಕೆ ನೇತುಹಾಕಿಸಿದನು. ಸೂರ್ಯನು ಅಸ್ತಮಿಸುತ್ತಲೆ ಅವನ ಶವವನ್ನು ಕೆಳಗಿಳಿಸಿ ಅದನ್ನು ಊರಬಾಗಿಲಿನಲ್ಲಿ ಹಾಕಿಸಿ ಅದರ ಮೇಲೆ ಕಲ್ಲಿನ ದೊಡ್ಡ ರಾಶಿಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ.


ಜೆರಹನ ಮಗನಾದ ಆಕಾನನನ್ನು ಹಿಡಿದು ಬೆಳ್ಳಿ, ನಿಲುವಂಗಿ, ಬಂಗಾರದ ಗಟ್ಟಿಯನ್ನು, ಅವನ ಗಂಡುಹೆಣ್ಣು ಮಕ್ಕಳನ್ನು, ದನ, ಕರು, ಕತ್ತೆ, ಆಡುಕುರಿಗಳನ್ನು ಮತ್ತು ಗುಡಾರವನ್ನು ಆಕೋರ್ ಎಂಬ ಕಣಿವೆಗೆ ಒಯ್ಯಲಾಯಿತು. ಯೆಹೋಶುವನೂ ಇಸ್ರಯೇಲರೆಲ್ಲರೂ ಅಲ್ಲಿಗೆ ಬಂದರು.


ಆಮೇಲೆ ದೂತನು ನನಗೆ, “ಉತ್ತರ ದೇಶಕ್ಕೆ ಹೊರಟ ಕುದುರೆಗಳ ರಥ ಸರ್ವೇಶ್ವರಸ್ವಾಮಿಯ ಕೋಪವನ್ನು ಶಮನಗೊಳಿಸಿದೆ,” ಎಂದು ಕೂಗಿ ಹೇಳಿದನು.


ಆಗ ಸರ್ವೇಶ್ವರ ತಮ್ಮ ದೇಶದ ಮೇಲೆ ಅಭಿಮಾನಗೊಂಡು, ತಮ್ಮ ಜನರಿಗೆ ಕರುಣೆತೋರಿ ಹೀಗೆಂದರು:


ನಿಮ್ಮ ಉಡುಪುಗಳನ್ನು ಅಲ್ಲ, ಹೃದಯಗಳನ್ನು ಸೀಳಿರಿ: ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯ ಕಡೆಗೆ ತಿರುಗಿಕೊಳ್ಳಿ; ಅವರು ದಯಾವಂತರು, ಕರುಣಾಮೂರ್ತಿ, ಸಹನಶೀಲ, ಪ್ರೀತಿಮಯ, ವಿಧಿಸಬೇಕಾಗಿದ್ದ ದಂಡನೆಗಾಗಿ ಮನನೊಂದುಕೊಳ್ಳುವಂಥವರು.


ಜೆರುಸಲೇಮಿನೊಡನೆ ಪ್ರೀತಿಯಿಂದ ಮಾತನಾಡಿ; ಅದರ ಊಳಿಗತನ ಮುಗಿಯಿತೆನ್ನಿ; ತಕ್ಕ ಪ್ರಾಯಶ್ಚಿತ್ತವಾಗಿದೆ ಅದು ಗೈದ ದೋಷಕೆ ಸರ್ವೇಶ್ವರ ಸ್ವಾಮಿಯಿಂದಲೇ ಅದರ ಎಲ್ಲಾ ಪಾಪಕೃತ್ಯಗಳಿಗೆ ಇಮ್ಮಡಿ ಶಿಕ್ಷೆಯಾಗಿದೆ ಎಂದು ಕೂಗಿ ಹೇಳಿ ಆ ನಗರಿಗೆ.”


ಅವುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದನಂತರ ನಾಡಿನ ಮೇಲೆ ದೇವರಿಗಿದ್ದ ಕೋಪ ಶಮನವಾಯಿತು.


ಸೂರ್ಯಾಸ್ತಮಾನದ ಹೊತ್ತಿಗೆ ಜನರು ಯೆಹೋಶುವನ ಅಪ್ಪಣೆಯಂತೆ ಅವುಗಳನ್ನು ಮರಗಳಿಂದ ಕೆಳಗಿಳಿಸಿ ಅವರು ಅಡಗಿಕೊಂಡಿದ್ದ ಗವಿಯಲ್ಲೇ ಹಾಕಿ ಅದರ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿದರು. ಆ ಕಲ್ಲುಗಳು ಇಂದಿನವರೆಗೂ ಅಲ್ಲೇ ಇವೆ.


ಈಜಿಪ್ಟಿನವರು ತಮ್ಮ ವಿಷಯದಲ್ಲಿ, ‘ಸರ್ವೇಶ್ವರನು ಕೇಡುಮಾಡಬೇಕೆಂಬ ಉದ್ದೇಶದಿಂದಲೇ ಇಸ್ರಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದದ್ದು; ಅವರನ್ನು ಬೆಟ್ಟಗುಡ್ಡಗಳಲ್ಲಿ ಸಾಯಿಸಿ ಇಳೆಯಲ್ಲಿ ಉಳಿಯದಂತೆ ನಿರ್ಮೂಲ ಮಾಡಬೇಕೆಂದೇ ಅವರನ್ನು ಕರೆದುಕೊಂಡು ಹೋದದ್ದು ಎಂದು ಆಡಿಕೊಳ್ಳುವುದಕ್ಕೆ ಎಡೆಮಾಡಿಕೊಳ್ಳಬೇಕೆ? ತಾವು ಕೋಪಾಗ್ನಿಯನ್ನು ಬಿಟ್ಟು ತಮ್ಮ ಪ್ರಜೆಗೆ ಕೇಡುಮಾಡಬೇಕೆಂಬ ಮನಸ್ಸನ್ನು ಮಾರ್ಪಡಿಸಿಕೊಳ್ಳಿ.


ಆ ಇಸ್ರಯೇಲ ವ್ಯಕ್ತಿಯ ಹಿಂದೆಯೇ ಹೋಗಿ, ಅವನ ಒಳಕೋಣೆಯನ್ನು ಹೊಕ್ಕು ಅವರಿಬ್ಬರನ್ನು, ಅಂದರೆ ಆ ಇಸ್ರಯೇಲನನ್ನು ಮತ್ತು ಆ ಮಹಿಳೆಯನ್ನು ಒಂದೇ ಬಾರಿಗೆ ಹೊಟ್ಟೆಯಲ್ಲಿ ತಿವಿದುಕೊಂದನು. ಹೀಗೆ ಇಸ್ರಯೇಲರಿಗೆ ಒದಗಿದ್ದ ಜಾಡ್ಯ ನಿಂತುಹೋಯಿತು.


ನೀವು ಹೀಗೆ ನಡೆದು, ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಟ್ಟು, ನಾನು ಈಗ ನಿಮಗೆ ಬೋಧಿಸುವ ಅವರ ಎಲ್ಲ ಆಜ್ಞೆಗಳನ್ನು ಕೈಗೊಂಡು ಅವರ ದೃಷ್ಟಿಗೆ ಸರಿಯಾದದ್ದನ್ನು ಮಾಡಿದರೆ, ಅವರು ರೋಷಾಗ್ನಿಯನ್ನು ತಡೆದು, ನಿಮಗೆ ದಯೆಯನ್ನು ತೋರಿಸಿ, ನಿಮ್ಮನ್ನು ಕರುಣಿಸುವರು; ತಾವು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ಸಂತತಿಯನ್ನು ಅಭಿವೃದ್ಧಿಗೊಳಿಸುವರು.


ಈಗ ನಮ್ಮ ಮೇಲಿರುವ ದೈವಕೋಪಾಗ್ನಿ ತೊಲಗಿಹೋಗುವಂತೆ ಇಸ್ರಯೇಲ್ ದೇವರಾದ ಸರ್ವೇಶ್ವರನೊಡನೆ ಒಡಂಬಡಿಕೆ ಮಾಡಿಕೊಳ್ಳುವುದಕ್ಕೆ ತೀರ್ಮಾನಿಸಿದ್ದೇನೆ.


ಆದುದರಿಂದ ನಮ್ಮ ಮುಂದಾಳುಗಳು ಸರ್ವಸಮೂಹದ ಪರವಾಗಿ ಈ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರೆಲ್ಲರು, ನೇಮಿತ ದಿನದಲ್ಲಿ, ತಮ್ಮ ಊರಿನ ಹಿರಿಯರೊಡನೆ ಹಾಗು ನ್ಯಾಯಾಧಿಪತಿಗಳೊಡನೆ ಇಲ್ಲಿಗೆ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಬಗ್ಗೆ ತಾಳಿರುವ ಉಗ್ರಕೋಪ ಹೀಗೆ ಪರಿಹಾರವಾಗಲಿ,” ಎಂದು ಉತ್ತರಕೊಟ್ಟರು.


ಪುನಶ್ಚೇತನಗೊಳಿಸೆಮ್ಮನು ದೇವ, ಉದ್ಧಾರಕ I ತೊರೆದುಬಿಡು ನಮ್ಮ ಬಗ್ಗೆ ನಿನಗಿರುವ ಸಿಟ್ಟುಸಿಡುಕ II


ಬಾಳ್‍ದೇವತೆಗಳ ಹೆಸರುಗಳನ್ನು ನಿನ್ನ ಬಾಯಿಂದ ತೊಲಗಿಸುವೆನು; ಇನ್ನೆಂದಿಗೂ ಅವುಗಳನ್ನು ನೀನು ಉಚ್ಛರಿಸದಂತೆ ಮಾಡುವೆನು.


ಬಳಿಕ ಅವರು ಯೋನನನ್ನು ಎತ್ತಿ ಸಮುದ್ರಕ್ಕೆ ಎಸೆದರು. ತಕ್ಷಣವೇ, ಭೋರ್ಗರೆಯುತ್ತಿದ್ದ ಸಮುದ್ರ ಶಾಂತವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು