Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:3 - ಕನ್ನಡ ಸತ್ಯವೇದವು C.L. Bible (BSI)

3 ಬಂದ ಬಳಿಕ ಯೆಹೋಶುವನಿಗೆ, “ಎಲ್ಲಾ ಜನರು ಹೋಗುವುದು ಅವಶ್ಯವಿಲ್ಲ, ಎರಡು ಅಥವಾ ಮೂರು ಸಾವಿರ ಮಂದಿ ಹೋದರೆ ಸಾಕು. ಅವರೇ ಆ ನಗರವನ್ನು ಜಯಿಸಬಹುದು. ಎಲ್ಲರನ್ನು ಕಳುಹಿಸಿ ಸುಮ್ಮನೆ ದಣಿಸುವುದೇಕೆ? ಅಲ್ಲಿ ಸ್ವಲ್ಪಮಂದಿ ಮಾತ್ರ ಇದ್ದಾರೆ,” ಎಂದು ವರದಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹಿಂದಿರುಗಿ ಬಂದು ಯೆಹೋಶುವನಿಗೆ “ಎಲ್ಲಾ ಜನರು ಹೋಗುವುದು ಅವಶ್ಯವಿಲ್ಲ; ಎರಡು ಅಥವಾ ಮೂರು ಸಾವಿರ ಮಂದಿ ಹೋದರೆ ಸಾಕು. ಅವರೇ ಪಟ್ಟಣವನ್ನು ಜಯಿಸಬಹುದು. ಎಲ್ಲರನ್ನೂ ಕಳುಹಿಸಿ ಸುಮ್ಮನೆ ದಣಿಸುವುದೇತಕೆ? ಅವರು ಕಡಿಮೆ ಜನರಿದ್ದಾರೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹಿಂದಿರುಗಿ ಬಂದು ಯೆಹೋಶುವನಿಗೆ - ಎಲ್ಲಾ ಜನರು ಹೋಗುವದು ಅವಶ್ಯವಿಲ್ಲ; ಎರಡು ಅಥವಾ ಮೂರು ಸಾವಿರ ಮಂದಿ ಹೋದರೆ ಸಾಕು. ಅವರು ಪಟ್ಟಣವನ್ನು ಜಯಿಸಬಹುದು. ಎಲ್ಲರನ್ನೂ ಕಳುಹಿಸಿ ಸುಮ್ಮನೆ ದಣಿಸುವದೇಕೆ? ಅವರು ಸ್ವಲ್ಪ ಮಂದಿ ಮಾತ್ರ ಇರುತ್ತಾರೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ತರುವಾಯ ಆ ಜನರು ಯೆಹೋಶುವನಲ್ಲಿಗೆ ಬಂದು, “ಆಯಿ ಒಂದು ದುರ್ಬಲ ಪ್ರದೇಶವಾಗಿದೆ, ಆ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ನಮ್ಮ ಎಲ್ಲ ಜನರು ಬೇಕಾಗುವುದಿಲ್ಲ. ಅಲ್ಲಿ ಯುದ್ಧ ಮಾಡಲು ಎರಡು ಅಥವಾ ಮೂರುಸಾವಿರ ಜನರನ್ನು ಕಳುಹಿಸಿದರೆ ಸಾಕು, ಇಡೀ ಸೈನ್ಯವನ್ನು ಉಪಯೋಗಿಸುವ ಅವಶ್ಯಕತೆ ಇಲ್ಲ. ಅಲ್ಲಿ ನಮ್ಮ ವಿರುದ್ಧ ಹೋರಾಡಬಲ್ಲ ಕೆಲವೇ ಜನರು ಇದ್ದಾರೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋಶುವನ ಬಳಿಗೆ ತಿರುಗಿಬಂದು ಅವನಿಗೆ, “ಜನರೆಲ್ಲರೂ ಹೋಗುವ ಅವಶ್ಯಕತೆ ಇಲ್ಲ, ಆಯಿ ಎಂಬ ಪಟ್ಟಣವನ್ನು ಹೊಡೆಯುವುದಕ್ಕೆ ಎರಡು ಅಥವಾ ಮೂರು ಸಾವಿರ ಜನರು ಹೋದರೆ ಸಾಕು. ಸೈನ್ಯವನ್ನು ಕಳುಹಿಸಿ ದಣಿಸಬೇಡ. ಏಕೆಂದರೆ ಸ್ವಲ್ಪ ಜನರು ಮಾತ್ರ ಅಲ್ಲಿ ಇದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:3
9 ತಿಳಿವುಗಳ ಹೋಲಿಕೆ  

ಸಹೋದರರೇ, ನೀವು ದೇವರಿಂದ ಕರೆಹೊಂದಿದವರು; ದೇವರಿಂದ ಆಯ್ಕೆಯಾದವರು. ಈ ವರದಲ್ಲಿ ದೃಢವಾಗಿರಲು ಮತ್ತಷ್ಟು ಪ್ರಯತ್ನಿಸಿರಿ. ಹೀಗೆ ಮಾಡಿದರೆ, ನೀವೆಂದಿಗೂ ವಿಶ್ವಾಸಭ್ರಷ್ಟರಾಗಲಾರಿರಿ.


ಈ ಕಾರಣ, ನೀವು ಪೂರ್ಣಾಸಕ್ತಿಯಿಂದ ನಿಮ್ಮ ವಿಶ್ವಾಸಕ್ಕೆ ಸದ್ಗುಣವನ್ನು, ಸದ್ಗುಣಕ್ಕೆ ಸುಜ್ಞಾನವನ್ನು ಸೇರಿಸಿರಿ.


ಆದ್ದರಿಂದ ಈ ವಿಶ್ರಾಂತಿಯನ್ನು ಪಡೆಯಲು ನಾವು ಪ್ರಯತ್ನಪಡೋಣ. ನಮ್ಮಲ್ಲಿ ಯಾರೂ ಆ ಜನರಂತೆ ಅವಿಧೇಯತೆಯಿಂದ ವರ್ತಿಸಿ ವಿಶ್ವಾಸಭ್ರಷ್ಟರಾಗದೆ ಇರೋಣ.


ಆಗ ಯೇಸು ಜನರಿಗೆ, “ಇಕ್ಕಟ್ಟಾದ ಬಾಗಿಲಿನಿಂದಲೇ ಒಳಹೋಗಲು ಸರ್ವಪ್ರಯತ್ನ ಮಾಡಿ. ಏಕೆಂದರೆ, ಅನೇಕರು ಒಳಕ್ಕೆ ಹೋಗಲು ಖಂಡಿತವಾಗಿ ಪ್ರಯತ್ನಿಸುವರು; ಆದರೆ ಅದು ಅವರಿಂದಾಗದು.


ಮೈಗಳ್ಳನನ್ನು ಕೊಲ್ಲುವುದು ಅವನ ಇಚ್ಛೆಯೆ; ಬಗ್ಗದು ಅವನ ಕೈ ದುಡಿಮೆಗೆ.


ಸೋಮಾರಿಗೆ ಹಸಿದಿದ್ದರೂ ಊಟವಿಲ್ಲ; ಶ್ರಮಜೀವಿಗಳಿಗಾದರೋ ಬಲಿಷ್ಠರನ್ನಾಗಿಸುವ ಮೃಷ್ಟಾನ್ನ.


ಯೆಹೋಶುವನು ಕೆಲವು ಜನರನ್ನು ಕರೆದು, “ನೀವು ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ ‘ಆಯಿ’ ಎಂಬ ಪ್ರಾಂತ್ಯಕ್ಕೆ ಹೋಗಿ ಬೇಹುನೋಡಿ ಬನ್ನಿ,” ಎಂದು ಹೇಳಿ ಅವರನ್ನು ಜೆರಿಕೋವಿನಿಂದ ಕಳಿಸಿದನು. ಅವರು ಹೋಗಿ ಆಯಿ ಎಂಬ ಊರನ್ನು ಸಂಚರಿಸಿ ಬೇಹು ನೋಡಿ ಹಿಂದಿರುಗಿ ಬಂದರು.


ಅದರಂತೆಯೇ ಸುಮಾರು ಮೂರುಸಾವಿರ ಮಂದಿ ಹೋದರು. ಆದರೆ ಅವರು ಆಯಿ ಎಂಬ ಊರಿನವರನ್ನು ಎದುರಿಸಲಾಗದೆ ಓಡಿಬರಬೇಕಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು