Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:5 - ಕನ್ನಡ ಸತ್ಯವೇದವು C.L. Bible (BSI)

5 ಆಯಿ ಊರಿನವರು ಅವರನ್ನು ಊರ ಬಾಗಿಲಿನಿಂದ ಕಲ್ಲುಗಣಿಯವರೆಗೂ ಹಿಂದಟ್ಟಿ ಇಳಿನೆಲದಲ್ಲಿ ಅವರನ್ನು ಸೋಲಿಸಿ ಸುಮಾರು ಮೂವತ್ತಾರು ಮಂದಿಯನ್ನು ಕೊಂದುಹಾಕಿದರು. ಇದರಿಂದ ಇಸ್ರಯೇಲರ ಧೈರ್ಯ ಕರಗಿ ನೀರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಯಿ ಊರಿನವರು ಅವರನ್ನು ಊರ ಬಾಗಿಲಿನಿಂದ ಕಲ್ಲುಗಣಿಗಳವರೆಗೂ ಹಿಂದಟ್ಟಿ ಇಳಿನೆಲದಲ್ಲಿ ಅವರನ್ನು ಸೋಲಿಸಿ ಸುಮಾರು ಮೂವತ್ತಾರು ಮಂದಿಯನ್ನು ಕೊಂದುಹಾಕಿದರು. ಇದರಿಂದ ಇಸ್ರಾಯೇಲರ ಧೈರ್ಯ ಕುಂದಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಯಿ ಎಂಬ ಊರಿನವರು ಅವರನ್ನು ಊರುಬಾಗಲಿನಿಂದ ಕಲ್ಲುಗಣಿಯವರೆಗೂ ಹಿಂದಟ್ಟಿ ಇಳಿ ನೆಲದಲ್ಲಿ ಅವರನ್ನು ಸೋಲಿಸಿ ಸುಮಾರು ಮೂವತ್ತಾರು ಮಂದಿಯನ್ನು ಹತಮಾಡಿದರು. ಇದರಿಂದ ಇಸ್ರಾಯೇಲ್ಯರ ಧೈರ್ಯವು ಕರಗಿ ನೀರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಯಿ ಎಂಬ ಪಟ್ಟಣದವರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಕೊಂದುಹಾಕಿದರು. ಪಟ್ಟಣದ ಬಾಗಿಲಿನಿಂದ ಪ್ರಾರಂಭಿಸಿ ಶೆಬಾರಿಮಿನವರೆಗೂ ಅವರನ್ನು ಹಿಂದಟ್ಟಿ, ಅವರನ್ನು ಹೊಡೆದರು. ಆದ್ದರಿಂದ ಜನರ ಹೃದಯವು ಕರಗಿ ನೀರಿನಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:5
10 ತಿಳಿವುಗಳ ಹೋಲಿಕೆ  

ಇದನ್ನೆಲ್ಲಾ ಕೇಳಿ ನಮ್ಮ ಎದೆ ಒಡೆದುಹೋಗಿದೆ. ನಿಮ್ಮನ್ನು ಎದುರಿಸುವ ಧೈರ್ಯ ಯಾರಿಗೂ ಇಲ್ಲ. ನಿಮ್ಮ ದೇವರಾದ ಸರ್ವೇಶ್ವರರೊಬ್ಬರೇ ಪರಲೋಕದಲ್ಲೂ ಭೂಲೋಕದಲ್ಲೂ ದೇವರು.


“ಸರ್ವೇಶ್ವರ ಈ ನಾಡನ್ನು ನಿಮಗೆ ಕೊಟ್ಟಿದ್ದಾರೆಂದು ನಾನು ಬಲ್ಲೆ; ನಿಮ್ಮ ವಿಷಯದಲ್ಲಿ ನಮಗೆ ಮಹಾಭೀತಿ ಉಂಟಾಗಿದೆ. ನಾಡಿನ ನಿವಾಸಿಗಳೆಲ್ಲರೂ ಕಂಗೆಟ್ಟು ಹೋಗಿದ್ದಾರೆ.


“ನಿಮ್ಮಲ್ಲಿ ಯಾರ್ಯಾರು ಶತ್ರುದೇಶಗಳಲ್ಲಿ ಅಳಿದುಳಿದಿರುವಿರೋ ಅವರ ಅಂತರಾಳದಲ್ಲಿ ಭಯಭೀತಿಯನ್ನು ಹುಟ್ಟಿಸುವೆನು. ಗಾಳಿಗೆ ತೂರಾಡುವ ತರಗೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು.ಆ ಸಪ್ಪಳ ಕೇಳಿ, ಖಡ್ಗಕ್ಕೆ ಹೆದರಿ ಓಡಿಹೋಗುವವರಂತೆ ಫೇರಿಕೀಳುವರು. ಯಾರೂ ಬೆನ್ನಟ್ಟಿಬಾರದಿದ್ದರೂ ಅವರು ಎದ್ದುಬಿದ್ದು ಓಡುವರು.


ನಿನೆವೆ ಬರಿದಾಗಿದೆ; ಬಟ್ಟಬರಿದಾಗಿ ಪಾಳುಬಿದ್ದಿದೆ; ಎದೆಕರಗಿದೆ, ಮೊಣಕಾಲುಗಳು ಅದರುತ್ತಿವೆ. ಎಲ್ಲರ ಸೊಂಟಗಳು ಮುರಿದಂತಾಗಿವೆ, ಅವರ ಮುಖಗಳು ಬಾಡಿಹೋಗಿವೆ.


‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳುವರು. ಆಗ ನೀನು ಅವರಿಗೆ - ‘ದುರ್ವಾರ್ತೆಯ ನಿಮಿತ್ತ ನರಳುತ್ತಿದ್ದೇನೆ; ಇಗೋ, ವಿಪತ್ತು ಬಂದಿತು; ಎಲ್ಲರ ಹೃದಯವು ಕರಗಿ ನೀರಾಗುವುದು, ಎಲ್ಲರ ಕೈ ಜೋಲುಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಅದರುವುದು; ಇಗೋ, ಬಂದಿತು, ಬಂದಾಯಿತು! ಇದು ಸರ್ವೇಶ್ವರನಾದ ದೇವರ ನುಡಿ,’ ಎಂದು ಉತ್ತರಕೊಡು.”


ಈ ಕಾರಣ ಜೋಲುಬೀಳುವುವು ಎಲ್ಲರ ಕೈಗಳು; ಕರಗಿ ನೀರಾಗುವುವು ಎಲ್ಲರ ಹೃದಯಗಳು.


ಕ್ಷಯಿಸುತ್ತಿರುವೆ ನಾ ಚೆಲ್ಲಿದ ನೀರಿನಂತೆ I ಎಲುಬುಗಳು ಅಲುಗಿವೆ, ಎದೆ ಕರಗಿದೆ ಮೇಣದಂತೆ II


ಜೋರ್ಡನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲ ಅರಸರು ಮತ್ತು ಸಮುದ್ರದ ಬಳಿಯಿದ್ದ ಸರ್ವ ಕಾನಾನ್ ರಾಜರು ಸರ್ವೇಶ್ವರ ಸ್ವಾಮಿ ಇಸ್ರಯೇಲರ ಕಣ್ಮುಂದೆಯೇ ಜೋರ್ಡನನ್ನು ಬತ್ತಿಸಿ ಆ ನದಿ ದಾಟಿಸಿದರೆಂದು ಕೇಳಿದರು. ಆಗ ಅವರ ಎದೆ ಒಡೆದುಕೋಯಿತು. ಇಸ್ರಯೇಲರ ಮುಂದೆ ಅವರಿಗೆ ಧೈರ್ಯವಿಲ್ಲದೆ ಹೋಯಿತು.


ಆಗ ಬೆಟ್ಟದಲ್ಲಿದ್ದ ಅಮೋರಿಯರು ನಿಮಗೆ ವಿರುದ್ಧ ಹೊರಟು ಜೇನುನೊಣಗಳಂತೆ ನಿಮ್ಮನ್ನು ಮುತ್ತಿ ಸೇಯೀರಿನಲ್ಲಿ ಹೊರ್ಮದವರೆಗೂ ಬೆನ್ನಟ್ಟಿ ಸಂಹರಿಸಿದರು.


ಅವರಾಗಲಿ ಬೇಗನೆ ಕಾಣದೆ ಹೋಗುವ ತೊರೆಯಂತೆ I ನಸುಕಿ ನಾಶವಾಗಲಿ ಪಾದದಡಿ ಸಿಲುಕಿದ ಗರಿಕೆಕಣದಂತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು