9 ಕಾನಾನ್ಯರು ಮತ್ತು ನಾಡಿನ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತುವರೆದು ಲೋಕದಲ್ಲಿ ನಮ್ಮ ಹೆಸರೇ ಉಳಿಯದಂತೆ ಮಾಡುವರು. ಆಗ ನಿಮ್ಮ ಮಹತ್ತಾದ ಹೆಸರನ್ನು ಉಳಿಸಿಕೊಳ್ಳಲು ಏನು ಮಾಡುವಿರಿ?” ಎಂದನು.
9 ನಾನು ಏನು ತಾನೇ ಹೇಳಲಿ? ಕಾನಾನ್ಯರೂ ಮತ್ತು ದೇಶದ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತುವರೆದು ಲೋಕದಲ್ಲಿ ನಮ್ಮ ಹೆಸರು ಉಳಿಯದಂತೆ ಮಾಡುವರು. ಆಗ ನಿನ್ನ ಮಹತ್ತಾದ ಹೆಸರನ್ನು ಉಳಿಸಿಕೊಳ್ಳಲು ಏನು ಮಾಡುವಿ?” ಎಂದನು.
9 ಕಾನಾನ್ಯರೂ ದೇಶದ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತಿಕೊಂಡು ಭೂಲೋಕದಲ್ಲಿ ನಮ್ಮ ಹೆಸರುಳಿಯದಂತೆ ಮಾಡುವರು. ನಿನ್ನ ಮಹಾನಾಮಕ್ಕೋಸ್ಕರ ಏನು ಮಾಡುವಿ ಅಂದನು.
9 ಈ ವಿಷಯವು ಕಾನಾನ್ಯರಿಗೂ ದೇಶದ ಉಳಿದ ಎಲ್ಲಾ ಜನರಿಗೂ ತಿಳಿಯುವುದು. ಆಗ ಅವರು ನಮ್ಮ ಮೇಲೆ ಧಾಳಿಮಾಡಿ ನಮ್ಮೆಲ್ಲರನ್ನು ಕೊಂದು ಹಾಕುತ್ತಾರೆ. ಆಗ ನೀನು ನಿನ್ನ ಕೀರ್ತಿಯನ್ನು ಉಳಿಸಿಕೊಳ್ಳಲು ಏನು ಮಾಡುವೆ?” ಎಂದು ಪ್ರಲಾಪಿಸಿದನು.
ಈಜಿಪ್ಟಿನವರು ತಮ್ಮ ವಿಷಯದಲ್ಲಿ, ‘ಸರ್ವೇಶ್ವರನು ಕೇಡುಮಾಡಬೇಕೆಂಬ ಉದ್ದೇಶದಿಂದಲೇ ಇಸ್ರಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದದ್ದು; ಅವರನ್ನು ಬೆಟ್ಟಗುಡ್ಡಗಳಲ್ಲಿ ಸಾಯಿಸಿ ಇಳೆಯಲ್ಲಿ ಉಳಿಯದಂತೆ ನಿರ್ಮೂಲ ಮಾಡಬೇಕೆಂದೇ ಅವರನ್ನು ಕರೆದುಕೊಂಡು ಹೋದದ್ದು ಎಂದು ಆಡಿಕೊಳ್ಳುವುದಕ್ಕೆ ಎಡೆಮಾಡಿಕೊಳ್ಳಬೇಕೆ? ತಾವು ಕೋಪಾಗ್ನಿಯನ್ನು ಬಿಟ್ಟು ತಮ್ಮ ಪ್ರಜೆಗೆ ಕೇಡುಮಾಡಬೇಕೆಂಬ ಮನಸ್ಸನ್ನು ಮಾರ್ಪಡಿಸಿಕೊಳ್ಳಿ.
ಸರ್ವೇಶ್ವರಸ್ವಾಮಿಯ ಪರಿಚಾರಕರಾದ ಯಾಜಕರು ದೇವಾಲಯದ ದ್ವಾರಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಶೋಕತಪ್ತರಾಗಿ ಹೀಗೆಂದು ಪ್ರಾರ್ಥಿಸಲಿ: “ಕರುಣೆ ತೋರು, ಹೇ ಸರ್ವೇಶ್ವರಾ, ನಿನ್ನ ಪ್ರಜೆಗೆ ನಿಂದೆಯಾಗದಿರಲಿ ನಿನ್ನ ಸ್ವಂತ ಜನತೆಗೆ ಗುರಿಯಾಗದಿರಲಿ ಅವರು ಅನ್ಯರ ತಾತ್ಸಾರಕೆ ‘ನಿಮ್ಮ ದೇವನೆಲ್ಲಿ?’ ಎಂಬ ಪರಕೀಯರ ಹೀಯಾಳಿಕೆಗೆ”
ಆದರೂ, ‘ನಿಮ್ಮನ್ನು ಈಜಿಪ್ಟಿನಿಂದ ಪಾರುಮಾಡುವೆನು,’ ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ ಅವರ ಸುತ್ತಮುತ್ತಲಿನ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆ.
ನೀವು ಯಾವ ದೇಶದಿಂದ ನಮ್ಮನ್ನು ಬರಮಾಡಿದಿರೋ ಆ ದೇಶದವರು, ‘ಸರ್ವೇಶ್ವರ ಇಸ್ರಯೇಲರಿಗೆ ವಾಗ್ದಾನಮಾಡಿದ ನಾಡಿಗೆ ಅವರನ್ನು ಸೇರಿಸಲಾರದೆ ಹಗೆಮಾಡಿ, ಮರುಭೂಮಿಯಲ್ಲಿ ಕೊಲ್ಲುವುದಕ್ಕೇ ಕರೆದುಕೊಂಡು ಹೋದರು’ ಎಂದು ಹೇಳುವುದಕ್ಕೆ ಆಸ್ಪದವಾದೀತು.
ಅದಕ್ಕೆ ಮೋಶೆ: “ನೀವು ಹಾಗೆ ಮಾಡುವುದಾದರೆ ಈಜಿಪ್ಟಿನವರು ಈ ಸಮಾಚಾರವನ್ನು ಕೇಳುವರು. ಅವರ ಕೈಯಿಂದ ನೀವು ಈ ಜನರನ್ನು ಭುಜಪರಾಕ್ರಮದಿಂದ ಬಿಡಿಸಿದ ಸಂಗತಿಯನ್ನು ಈ ಕಾನಾನ್ ನಾಡಿನ ನಿವಾಸಿಗಳಿಗೆ ತಿಳಿಸುವರು.
ಇದನ್ನು ನನ್ನ ಶತ್ರುಗಳು ನೋಡುವರು. “ನಿನ್ನ ದೇವರಾದ ಸರ್ವೇಶ್ವರನೆಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.