Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:17 - ಕನ್ನಡ ಸತ್ಯವೇದವು C.L. Bible (BSI)

17 ಇತ್ತ ಆಯಿಯಲ್ಲಿ ಹಾಗೂ ಬೇತೇಲಿನಲ್ಲಿ ಗಂಡಸರು ಇರಲಿಲ್ಲ. ಊರಬಾಗಿಲುಗಳನ್ನು ತೆರೆದಿಟ್ಟು ಎಲ್ಲರೂ ಇಸ್ರಯೇಲರನ್ನು ಹಿಂದಟ್ಟಿ ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಯಿ ಎಂಬ ಊರಿನಲ್ಲಿಯೂ ಬೇತೇಲಿನಲ್ಲಿಯೂ ಒಬ್ಬ ಗಂಡಸಾದರೂ ಉಳಿಯಲಿಲ್ಲ. ಊರಬಾಗಿಲುಗಳನ್ನು ತೆರೆದು ಬಿಟ್ಟು ಎಲ್ಲರೂ ಇಸ್ರಾಯೇಲ್ಯರನ್ನು ಹಿಂದಟ್ಟುವುದಕ್ಕೋಸ್ಕರ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಯಿ ಎಂಬ ಊರಲ್ಲಿಯೂ ಬೇತೇಲಿನಲ್ಲಿಯೂ ಒಬ್ಬ ಗಂಡಸಾದರೂ ಉಳಿಯಲಿಲ್ಲ. ಊರು ಬಾಗಲುಗಳನ್ನು ತೆರೆದುಬಿಟ್ಟು ಎಲ್ಲರೂ ಇಸ್ರಾಯೇಲ್ಯರನ್ನು ಹಿಂದಟ್ಟುವದಕ್ಕೋಸ್ಕರ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಆಯಿ” ಮತ್ತು ಬೇತೇಲಿನ ಎಲ್ಲ ಜನರು ಇಸ್ರೇಲಿನ ಸೈನ್ಯವನ್ನು ಬೆನ್ನಟ್ಟಿದರು. ಪಟ್ಟಣದ ಬಾಗಿಲನ್ನು ತೆರೆದಿಟ್ಟಿದ್ದರು; ಒಬ್ಬನಾದರೂ ಪಟ್ಟಣದ ರಕ್ಷಣೆಗೆ ಉಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಯಿ ಎಂಬ ಪಟ್ಟಣದಲ್ಲಿಯೂ ಬೇತೇಲಿನಲ್ಲಿಯೂ ಇಸ್ರಾಯೇಲಿನ ಹಿಂದೆ ಹೊರಟು ಹೋಗದ ಮನುಷ್ಯನು ಒಬ್ಬನೂ ಇರಲಿಲ್ಲ. ಪಟ್ಟಣವನ್ನು ತೆರೆದಿಟ್ಟು ಹೋಗಿ ಇಸ್ರಾಯೇಲರನ್ನು ಹಿಂದಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:17
9 ತಿಳಿವುಗಳ ಹೋಲಿಕೆ  

ನಿರರ್ಥಕಗೊಳಿಸುತ್ತಾನೆ ವಕ್ರಿಗಳ ತಂತ್ರೋಪಾಯಗಳನು ಸಿಕ್ಕಿಸಿಬಿಡುತ್ತಾನೆ ಅವರವರ ಯೋಜನೆಗಳಲ್ಲೆ ಜ್ಞಾನಿಗಳನು.


ಏಕೆಂದರೆ ಸರ್ವೇಶ್ವರ ಅವರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರಮಾಡಿದ್ದರು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಇಸ್ರಯೇಲರು ಅವರೆಲ್ಲರನ್ನು ಕರುಣೆ ಇಲ್ಲದೆ ಸಂಹರಿಸಿದರು.


ಅಂತೆಯೇ ಯೆಹೋಶುವನು ಯೋಧರೆಲ್ಲರ ಸಹಿತವಾಗಿ ಆಯಿಗೆ ಹೊರಡಲು ಸಿದ್ಧನಾದನು. ಮೂವತ್ತು ಸಾವಿರ ಯುದ್ಧವೀರರನ್ನು ಆರಿಸಿಕೊಂಡನು.


ಆದರೆ ಸರ್ವೇಶ್ವರ ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು, ಹಟಮಾರಿಯನ್ನಾಗಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ನಿಮ್ಮಿಂದ ಅವನು ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಸರ್ವೇಶ್ವರನ ಸಂಕಲ್ಪವಾಗಿತ್ತು. ಅದು ಈಗಾಗಲೇ ನೆರವೇರಿದೆ.


ಆಯಿ ನಗರದವರು ಊರಿನಲ್ಲಿದ್ದ ತಮ್ಮ ಎಲ್ಲ ಜನರನ್ನು ಕರೆದುಕೊಂಡು ಯೆಹೋಶುವನನ್ನು ಹಿಂದಟ್ಟುತ್ತಾ ನಗರದಿಂದ ದೂರದೂರ ಆದರು.


ಆಗ ಸರ್ವೇಶ್ವರ ಯೆಹೋಶುವನಿಗೆ, “ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿಕಡೆಗೆ ಚಾಚು. ಆ ನಗರವನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ,” ಎಂದರು. ಅವನು ಅಂತೆಯೇ ಚಾಚಿದನು.


ಬೆನ್ಯಾಮೀನ್ಯರು ಇಸ್ರಯೇಲರೊಡನೆ ಯುದ್ಧ ಮಾಡುವುದಕ್ಕಾಗಿ ಪಟ್ಟಣವನ್ನು ಬಿಟ್ಟು ದೂರಕ್ಕೆ ಬಂದರು. ಅವರು ಮುಂಚಿನಂತೆ ಜನರನ್ನು ವಧಿಸುವುದಕ್ಕೆ ಪ್ರಾರಂಭಿಸಿ ಬೇತೇಲಿಗೂ ಬೈಲಿನಲ್ಲಿರುವ ಗಿಬೆಯಕ್ಕೂ ಹೋಗುವ ರಾಜಮಾರ್ಗಗಳಲ್ಲಿ ಸುಮಾರು ಮೂವತ್ತು ಮಂದಿಯನ್ನು ಹತಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು