Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:18 - ಕನ್ನಡ ಸತ್ಯವೇದವು C.L. Bible (BSI)

18 ಆಗ ಸರ್ವೇಶ್ವರ ಯೆಹೋಶುವನಿಗೆ, “ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿಕಡೆಗೆ ಚಾಚು. ಆ ನಗರವನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ,” ಎಂದರು. ಅವನು ಅಂತೆಯೇ ಚಾಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋವನು ಯೆಹೋಶುವನಿಗೆ “ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿ ಎಂಬ ಊರಿನ ಕಡೆಗೆ ಚಾಚು; ಆ ಪಟ್ಟಣವನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ” ಎನ್ನಲು ಅವನು ಅದನ್ನು ಚಾಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೋವನು ಯೆಹೋಶುವನಿಗೆ - ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿ ಎಂಬ ಊರಿನ ಕಡೆಗೆ ಚಾಚು; ಆ ಪಟ್ಟಣವನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ ಎನ್ನಲು ಅವನು ಅದನ್ನು ಚಾಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಗ ಯೆಹೋವನು ಯೆಹೋಶುವನಿಗೆ, “ನಿನ್ನ ಕೈಯಲ್ಲಿರುವ ಈಟಿಯನ್ನು ‘ಆಯಿ’ ಕಡೆಗೆ ಚಾಚು, ಆ ಪಟ್ಟಣವನ್ನು ನಾನು ನಿಮಗೆ ಕೊಟ್ಟಿದ್ದೇನೆ” ಎಂದನು. ಯೆಹೋಶುವನು ತನ್ನ ಈಟಿಯನ್ನು “ಆಯಿ”ಯ ಕಡೆಗೆ ಚಾಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಯೆಹೋವ ದೇವರು ಯೆಹೋಶುವನಿಗೆ, “ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿ ಎಂಬ ಪಟ್ಟಣಕ್ಕೆ ಎದುರಾಗಿ ಚಾಚು. ಏಕೆಂದರೆ ಅದನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು,” ಎಂದರು. ಹಾಗೆಯೇ ಅವನು ತನ್ನ ಕೈಯಲ್ಲಿರುವ ಈಟಿಯನ್ನು ಪಟ್ಟಣಕ್ಕೆ ಎದುರಾಗಿ ಚಾಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:18
14 ತಿಳಿವುಗಳ ಹೋಲಿಕೆ  

ಆ ನಗರದವರೆಲ್ಲರು ಹತರಾಗುವವರೆಗೆ ಯೆಹೋಶುವ ಈಟಿ ಹಿಡಿದು ಚಾಚಿದ ಕೈಯನ್ನು ಹಿಂದೆಗೆಯಲಿಲ್ಲ.


ದೇವರಿಗೆ ವಿರುದ್ಧ ಅವನು ಮುಷ್ಠಿ ತೋರಿದನಲ್ಲವೆ? ಸರ್ವಶಕ್ತನನು ಧಿಕ್ಕರಿಸುತಾ ಶೂರನಂತೆ ಮೆರೆದನಲ್ಲವೆ?


ಅದರ ಮೇಲಿನ ಬತ್ತಳಿಕೆ ಜಣಜಣಿಸುತ್ತದೆ ಈಟಿ ಭರ್ಜಿಗಳು ಥಳಥಳಿಸುತ್ತವೆ.


ಅದಕ್ಕೆ ದಾವೀದನು, “ನೀನು ಈಟಿ, ಕತ್ತಿ, ಭರ್ಜಿಗಳೊಡನೆ ನನ್ನ ಬಳಿಗೆ ಬರುತ್ತಿರುವೆ; ನೀನು ಹೀಯಾಳಿಸಿದ ಸೇನಾಧೀಶ್ವರರು ಹಾಗು ಇಸ್ರಯೇಲ್ ಯೋಧರ ದೇವರು ಆದಂಥ ಸರ್ವೇಶ್ವರನ ನಾಮದೊಡನೆ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ.


ಇತ್ತ ಫಿಲಿಷ್ಟಿಯನು ದಾವೀದನ ಕಡೆ ಧಾವಿಸಿ ಬಂದನು. ಗುರಾಣಿ ಹೊರುವವನು ಅವನ ಮುಂದೆ ಇದ್ದನು.


ಅವನ ಪಾದರಕ್ಷೆಗಳು ಹಾಗು ಹೆಗಲ ಮೇಲಿನ ಈಟಿ ಕಂಚಿನದಾಗಿದ್ದವು.


ನಾವು ಮತ್ತು ಅವರು ನಗರಕ್ಕೆ ದೂರವಾದ ಮೇಲೆ ನೀವು ಹೊಂಚಿ ನೋಡುವ ಸ್ಥಳದಿಂದ ಎದ್ದು ನಗರದೊಳಗೆ, ನುಗ್ಗಿ ಅದನ್ನು ಸ್ವಾಧೀನ ಮಾಡಿಕೊಳ್ಳಿ. ನಿಮ್ಮ ದೇವರಾದ ಸರ್ವೇಶ್ವರ ಅದನ್ನು ನಿಮ್ಮ ಕೈಗೆ ಒಪ್ಪಿಸುವರು.


ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಚಾಚಿ ಅದನ್ನು ವಿಭಾಗಿಸು; ಆಗ ಇಸ್ರಯೇಲರು ಸಮುದ್ರದ ಮಧ್ಯೆ ಒಣಗಿದ ನೆಲದ ಮೇಲೆ ನಡೆದುಹೋಗುವರು.


ಸರ್ವೇಶ್ವರ, ಮೋಶೆಯ ಸಂಗಡ ಮಾತಾಡಿ ಹೀಗೆಂದರು: “ನೀನು ಆರೋನನಿಗೆ, ‘ನಿನ್ನ ಕೋಲನ್ನು ಕಾಲುವೆ, ಹೊಳೆ, ಕೆರೆ ಇವುಗಳ ಮೇಲೆ ಚಾಚು. ಆಗ ಈಜಿಪ್ಟ್ ದೇಶದ ಮೇಲೆಲ್ಲಾ ಕಪ್ಪೆಗಳು ಏರಿಬರುವುವು, ಎಂದು ಹೇಳು.”


ಇತ್ತ ಆಯಿಯಲ್ಲಿ ಹಾಗೂ ಬೇತೇಲಿನಲ್ಲಿ ಗಂಡಸರು ಇರಲಿಲ್ಲ. ಊರಬಾಗಿಲುಗಳನ್ನು ತೆರೆದಿಟ್ಟು ಎಲ್ಲರೂ ಇಸ್ರಯೇಲರನ್ನು ಹಿಂದಟ್ಟಿ ಹೋಗಿದ್ದರು.


ಚಾಚಿದ ಕೂಡಲೆ ಹೊಂಚುಗಾರರು ತಾವಿದ್ದ ಸ್ಥಳದಿಂದ ಎದ್ದು ಓಡಿಬಂದು ನಗರದೊಳಕ್ಕೆ ನುಗ್ಗಿ ಒಡನೆ ಬೆಂಕಿ ಹೊತ್ತಿಸಿದರು.


ನಾನು ಬಾಬಿಲೋನಿನ ಅರಸನ ಕೈಗಳನ್ನು ಬಲಪಡಿಸುವೆನು; ಫರೋಹನ ಕೈಗಳಾದರೋ ಜೋಲುಬೀಳುವುವು; ನಾನು ನನ್ನ ಖಡ್ಗವನ್ನು ಬಾಬಿಲೋನಿನ ಅರಸನಿಗೆ ಎತ್ತುವೆನು. ಅವನು ಅದನ್ನು ಈಜಿಪ್ಟ್ ದೇಶದ ಮೇಲೆ ಎತ್ತುವನು. ಆಗ ನಾನೇ ಸರ್ವೇಶ್ವರ ಎಂದು ಎಲ್ಲರಿಗೆ ಗೊತ್ತಾಗುವುದು.


ತರುವಾಯ ಸರ್ವೇಶ್ವರ ಸ್ವಾಮಿ ಮೋಶೆಗೆ ಇಂತೆಂದರು: “ನೀನು ಫರೋಹನ ಬಳಿಗೆ ಹೋಗಿ ಹೀಗೆಂದು ಹೇಳು - ‘ಸರ್ವೇಶ್ವರ ನಿನಗೆ ಮಾಡುವ ಆಜ್ಞೆ ಇದು - ನನ್ನನ್ನು ಆರಾಧಿಸಲು ನನ್ನ ಜನರಿಗೆ ಹೋಗಲು ಅಪ್ಪಣೆ ಕೊಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು