ಯೆಹೋಶುವ 8:2 - ಕನ್ನಡ ಸತ್ಯವೇದವು C.L. Bible (BSI)2 ಜೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು. ಆದರೆ ಕೊಳ್ಳೆಯನ್ನೂ ಪಶುಪ್ರಾಣಿಗಳನ್ನೂ ಈ ಸಾರಿ ನೀವೇ ಇಟ್ಟುಕೊಳ್ಳಬಹುದು. ನಿಮ್ಮಲ್ಲಿ ಕೆಲವರು ಆ ಊರಿನ ಹಿಂಬದಿಯಲ್ಲಿ ಹೊಂಚುಹಾಕಿಕೊಂಡಿರಲಿ,” ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು. ಆದರೆ ಕೊಳ್ಳೆಯನ್ನೂ ಪಶುಪ್ರಾಣಿಗಳನ್ನೂ ನಿಮಗೋಸ್ಕರ ತೆಗೆದುಕೊಳ್ಳಬಹುದು. ನಿಮ್ಮಲ್ಲಿ ಕೆಲವರು ಆ ಊರಿನ ಹಿಂಬದಿಯಲ್ಲಿ ಹೊಂಚುಹಾಕಿಕೊಂಡಿರಲಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೋಡು, ಆಯಿ ಎಂಬ ಊರಿನ ರಾಜ, ಪ್ರಜೆ, ನಗರ, ದೇಶ ಇವುಗಳನ್ನೆಲ್ಲಾ ನಿನಗೆ ಕೊಟ್ಟಿದ್ದೇನೆ. ಯೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಜೆರಿಕೊ ಮತ್ತು ಅದರ ಅರಸನಿಗೆ ಮಾಡಿದಂತೆಯೇ ನೀವು ‘ಆಯಿ’ ಮತ್ತು ಅದರ ಅರಸನಿಗೆ ಮಾಡಬೇಕು. ಈ ಸಲ ಮಾತ್ರ ನೀವು ಎಲ್ಲ ಸಂಪತ್ತನ್ನು ತೆಗೆದುಕೊಂಡು ನಿಮಗಾಗಿ ಇಟ್ಟುಕೊಳ್ಳಬೇಕು. ನೀವು ಈ ಸಂಪತ್ತನ್ನು ನಿಮ್ಮ ಜನರೊಂದಿಗೆ ಹಂಚಿಕೊಳ್ಳಿರಿ. ಈಗ, ನಿಮ್ಮ ಕೆಲವು ಯೋಧರಿಗೆ ಪಟ್ಟಣದ ಹಿಂಭಾಗದಲ್ಲಿ ಅಡಗಿಕೊಂಡಿರಲು ತಿಳಿಸು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನೀನು ಯೆರಿಕೋವಿಗೂ ಅದರ ಅರಸನಿಗೂ ಯಾವ ಪ್ರಕಾರ ಮಾಡಿದೆಯೋ ಹಾಗೆಯೇ ಆಯಿ ಎಂಬ ಪಟ್ಟಣಕ್ಕೂ ಅದರ ಅರಸನಿಗೂ ಮಾಡಬೇಕು. ಅದರ ಕೊಳ್ಳೆಯನ್ನೂ, ಪಶುಪ್ರಾಣಿಗಳನ್ನು ಮಾತ್ರವೇ ನಿಮಗೋಸ್ಕರ ಇಟ್ಟುಕೊಳ್ಳಿರಿ. ನೀವು ಆ ಪಟ್ಟಣದ ಹಿಂಭಾಗದಲ್ಲಿ ಹೊಂಚುಹಾಕಲು ಸ್ಥಳಮಾಡಿಕೊಳ್ಳಿರಿ,” ಎಂದರು. ಅಧ್ಯಾಯವನ್ನು ನೋಡಿ |