Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:22 - ಕನ್ನಡ ಸತ್ಯವೇದವು C.L. Bible (BSI)

22 ನಗರಕ್ಕೆ ನುಗ್ಗಿದವರೂ ಹೊರಗೆ ಬಂದು ಆ ಜನರ ಮೇಲೆ ಎರಗಿದರು. ಹೀಗೆ ಆ ಕಡೆಯಿಂದಲೂ ಈ ಕಡೆಯಿಂದಲೂ ಇಸ್ರಯೇಲರ ಕೈಗೆ ಸಿಕ್ಕಿಬಿದ್ದರು. ಎಲ್ಲರನ್ನು ಸದೆಬಡಿಯಲಾಯಿತು. ಒಬ್ಬನಾದರೂ ಉಳಿಯಲಿಲ್ಲ. ಯಾವನೂ ತಪ್ಪಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಪಟ್ಟಣದೊಳಗೆ ನುಗ್ಗಿದವರೂ ಒಟ್ಟಿಗೆ ಸೇರಿದ್ದರಿಂದ ಆಯಿ ಎಂಬ ಊರಿನವರು ಆ ಕಡೆಯಿಂದಲೂ ಈ ಕಡೆಯಿಂದಲೂ ಇದ್ದ ಇಸ್ರಾಯೇಲ್ಯರ ಮಧ್ಯದಲ್ಲಿ ಸಿಕ್ಕಿಬಿದ್ದರು. ಅವರು ಎಲ್ಲರನ್ನೂ ಕೊಂದು ಹಾಕಿದರು. ಒಬ್ಬನಾದರೂ ಉಳಿಯಲಿಲ್ಲ, ಯಾವನೂ ತಪ್ಪಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಪಟ್ಟಣದೊಳಗೆ ನುಗ್ಗಿದವರೂ ಬಂದುಬಿಟ್ಟದ್ದರಿಂದ ಆಯಿ ಎಂಬ ಊರಿನವರು ಈಚೆಯಲ್ಲಿಯೂ ಆಚೆಯಲ್ಲಿಯೂ ಇದ್ದ ಇಸ್ರಾಯೇಲ್ಯರ ಮಧ್ಯದಲ್ಲಿ ಸಿಕ್ಕಿಬಿದ್ದರು. ಅವರು ಎಲ್ಲರನ್ನೂ ಹೊಡೆದು ಹಾಕಿದರು. ಒಬ್ಬನಾದರೂ ಉಳಿಯಲಿಲ್ಲ, ಯಾವನೂ ತಪ್ಪಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಗ ಅಡಗಿಕೊಂಡಿದ್ದ ಜನರು ಯುದ್ಧದಲ್ಲಿ ಸಹಾಯ ಮಾಡಲು ಪಟ್ಟಣದಿಂದ ಹೊರಬಂದರು. ಇಸ್ರೇಲಿನ ಸೈನ್ಯವು “ಆಯಿ”ಯ ಜನರ ಎರಡು ಕಡೆಗೂ ಇತ್ತು. “ಆಯಿ”ಯ ಜನರು ಸಿಕ್ಕಿಬಿದ್ದರು. ಇಸ್ರೇಲರು ಅವರನ್ನು ಸೋಲಿಸಿ ಅವರಲ್ಲಿ ಒಬ್ಬರನ್ನೂ ಜೀವಂತವಾಗಿ ಉಳಿಸಲಿಲ್ಲ. ಅವರಲ್ಲಿ ಒಬ್ಬನಾದರೂ ತಪ್ಪಿಸಿಕೊಳ್ಳಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವರು ಪಟ್ಟಣದೊಳಗಿಂದ ಇವರಿಗೆ ಎದುರಾಗಿ ಬಂದ ಕಾರಣ, ಅವರು ಈ ಕಡೆ ಆ ಕಡೆ ಇರುವ ಇಸ್ರಾಯೇಲರ ಮಧ್ಯದಲ್ಲಿ ಸಿಕ್ಕಿದರು. ಅವರಲ್ಲಿ ಇಬ್ಬರೂ ತಪ್ಪಿಸಿಕೊಂಡ ಹಾಗೆಯೂ ಅವರನ್ನು ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:22
10 ತಿಳಿವುಗಳ ಹೋಲಿಕೆ  

ಅಂಥ ಏಳು ಜನಾಂಗಗಳು ಯಾವುವೆಂದರೆ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಹಾಗು ಯೆಬೂಸಿಯರು. ಅವರನ್ನು ನೀವು ಸೋಲಿಸಿ ವಿನಾಶ ಶಾಪಗ್ರಸ್ತರನ್ನಾಗಿಸಬೇಕು. ಅವರ ಸಂಗಡ ಒಪ್ಪಂದಮಾಡಿಕೊಳ್ಳಬಾರದು, ಅವರನ್ನು ಕನಿಕರಿಸಬಾರದು,


ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ದುಷ್ಟನ ಜಯಘೋಷ ಅಲ್ಪಕಾಲದ್ದು ಭ್ರಷ್ಟನ ಉಲ್ಲಾಸ ಕ್ಷಣಿಕವಾದದ್ದು.


ಅದೇ ದಿನ ಯೆಹೋಶುವನು ಮಕ್ಕೆದವನ್ನು ಸ್ವಾಧೀನಪಡಿಸಿಕೊಂಡನು. ಅದರ ರಾಜನನ್ನೂ ಪ್ರಜೆಗಳೆಲ್ಲರನ್ನೂ ಕತ್ತಿಗೆ ತುತ್ತಾಗಿಸಿದನು.


ಅಲ್ಲಿದ್ದ ಗಂಡಸರು, ಹೆಂಗಸರು, ಯುವಕರು, ಮುದುಕರು, ದನ ಕುರಿ, ಕತ್ತೆ ಇವುಗಳನ್ನೆಲ್ಲಾ ನಿಶ್ಯೇಷವಾಗಿ ಕತ್ತಿಯಿಂದ ಸಂಹರಿಸಿಬಿಟ್ಟರು.


ನೀವು ನಗರವನ್ನು ಹಿಡಿದ ಕೂಡಲೇ ಅದಕ್ಕೆ ಬೆಂಕಿ ಹೊತ್ತಿಸಿರಿ. ಸರ್ವೇಶ್ವರನ ಮಾತಿನಂತೆ ನಡೆಯಿರಿ. ಇದೇ ನಾನು ನಿಮಗೆ ಕೊಡುವ ಆಜ್ಞೆ,” ಎಂದು ಹೇಳಿ ಅವರನ್ನು ರಾತ್ರಿಯಲ್ಲೇ ಕಳಿಸಿದನು.


ನಗರವು ಹೊಂಚುಗಾರರಿಗೆ ಸ್ವಾಧೀನವಾದುದನ್ನೂ ಹೊಗೆ ಆಕಾಶಕ್ಕೆ ಏರುತ್ತಿದ್ದುದನ್ನೂ ನೋಡಿದ ಯೆಹೋಶುವ ಹಾಗೂ ಇಸ್ರಯೇಲರು ಹಿಂದಿರುಗಿ ಆಯಿ ಜನರ ಮೇಲೆ ಬಿದ್ದರು.


ಆಯಿಯ ಅರಸನನ್ನು ಮಾತ್ರ ಜೀವಸಹಿತ ಹಿಡಿದು ಯೆಹೋಶುವನ ಬಳಿಗೆ ಕರೆದುಕೊಂಡು ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು