Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:3 - ಕನ್ನಡ ಸತ್ಯವೇದವು C.L. Bible (BSI)

3 ಅಂತೆಯೇ ಯೆಹೋಶುವನು ಯೋಧರೆಲ್ಲರ ಸಹಿತವಾಗಿ ಆಯಿಗೆ ಹೊರಡಲು ಸಿದ್ಧನಾದನು. ಮೂವತ್ತು ಸಾವಿರ ಯುದ್ಧವೀರರನ್ನು ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅಂತೆಯೇ ಯೆಹೋಶುವನು ಎದ್ದು ಭಟರೆಲ್ಲರ ಸಹಿತವಾಗಿ ಆಯಿಗೆ ಹೋಗುವುದಕ್ಕೋಸ್ಕರ ಸಿದ್ಧನಾಗಿ ಮೂವತ್ತು ಸಾವಿರ ಯುದ್ಧವೀರರನ್ನು ಆರಿಸಿ ಅವರಿಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದರೆ ಕೊಳ್ಳೆಯನ್ನೂ ಪಶುಗಳನ್ನೂ ನಿಮಗೋಸ್ಕರ ತೆಗೆದುಕೊಳ್ಳಬಹುದು. ನಿಮ್ಮಲ್ಲಿ ಕೆಲವರು ಆ ಊರಿನ ಹಿಂದುಗಡೆಯಲ್ಲಿ ಹೊಂಚುಹಾಕಿಕೊಂಡಿರಲಿ ಎಂದು ಆಜ್ಞಾಪಿಸಲು ಅವನು ಎದ್ದು ಭಟರೆಲ್ಲರ ಸಹಿತವಾಗಿ ಆಯಿಗೆ ಹೋಗುವದಕ್ಕೋಸ್ಕರ ಸಿದ್ಧನಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋಶುವನು “ಆಯಿ”ಯ ಮೇಲೆ ಆಕ್ರಮಣಮಾಡಲು ಸೈನ್ಯಸಮೇತವಾಗಿ ಹೋದನು. ಮೂವತ್ತು ಸಾವಿರ ಯುದ್ಧವೀರರನ್ನು ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಆಯಿ ಎಂಬ ಪಟ್ಟಣಕ್ಕೆ ಏರಿ ಹೋಗಲು ಯೆಹೋಶುವನೂ, ಸಮಸ್ತ ಸೈನಿಕರೂ ಎದ್ದರು. ಆದರೆ ಯೆಹೋಶುವನು ಪರಾಕ್ರಮಶಾಲಿಗಳಾದ ಮೂವತ್ತು ಸಾವಿರ ಜನರನ್ನು ಆಯ್ದುಕೊಂಡು ರಾತ್ರಿಯಲ್ಲಿ ಅವರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:3
10 ತಿಳಿವುಗಳ ಹೋಲಿಕೆ  

ರಾತ್ರಿಯಲ್ಲಿ ಕಳ್ಳನು ಬರುವ ಹಾಗೆ ಪ್ರಭುವಿನ ದಿನವು ಬರುವುದೆಂದು ನೀವು ಚೆನ್ನಾಗಿ ಬಲ್ಲಿರಿ.


“ನಡುರಾತ್ರಿಯ ವೇಳೆ. ‘ಇಗೋ, ಮದುವಣಿಗ ಬರುತ್ತಿದ್ದಾನೆ; ಬನ್ನಿ, ಆತನನ್ನು ಎದುರುಗೊಳ್ಳಿ,’ ಎಂಬ ಕೂಗು ಕೇಳಿಸಿತು. ಕನ್ಯೆಯರೆಲ್ಲರೂ ಎದ್ದರು.


ಅವನು ನಿರೀಕ್ಷಿಸದ ದಿನದಲ್ಲಿ, ತಿಳಿಯದ ಗಳಿಗೆಯಲ್ಲಿ, ಯಜಮಾನನು ಬರುವನು.


ಜಲಪ್ರಳಯ ಬಂದು ಅವರನ್ನು ಕೊಚ್ಚಿಕೊಂಡು ಹೋಗುವ ತನಕ ಅದರ ಅರಿವೇ ಅವರಿಗಿರಲಿಲ್ಲ. ನರಪುತ್ರನು ಆಗಮಿಸುವಾಗಲೂ ಹಾಗೆಯೇ ನಡೆಯುವುದು.


ಪ್ರಭುವಿನ ದಿನ ಬಂದೇ ತೀರುವುದು. ಅದು ಕಳ್ಳನಂತೆಯೇ ಬರುವುದು. ಆಗ, ಆಕಾಶಮಂಡಲವು ಸಿಡಿಲ ಗರ್ಜನೆಯೊಂದಿಗೆ ಅಳಿದುಹೋಗುವುದು. ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಸುಟ್ಟು ಲಯವಾಗಿ ಹೋಗುವುವು. ಭೂಮಿಯೂ ಅದರಲ್ಲಿರುವ ಸಮಸ್ತವೂ ಉರಿದು ಭಸ್ಮವಾಗುವುವು.


ಜೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು. ಆದರೆ ಕೊಳ್ಳೆಯನ್ನೂ ಪಶುಪ್ರಾಣಿಗಳನ್ನೂ ಈ ಸಾರಿ ನೀವೇ ಇಟ್ಟುಕೊಳ್ಳಬಹುದು. ನಿಮ್ಮಲ್ಲಿ ಕೆಲವರು ಆ ಊರಿನ ಹಿಂಬದಿಯಲ್ಲಿ ಹೊಂಚುಹಾಕಿಕೊಂಡಿರಲಿ,” ಎಂದು ಆಜ್ಞಾಪಿಸಿದರು.


ಅವರಿಗೆ, “ನೀವು ನಗರದ ಹಿಂಭಾಗದಲ್ಲಿ ಹೊಂಚುಹಾಕಿ ಕುಳಿತಿರಬೇಕು. ನಗರದಿಂದ ಬಹುದೂರವಾಗಿರಬೇಡಿ. ಎಲ್ಲರೂ ಸಿದ್ಧವಾಗಿರಿ.


‘ಮೋಶೆ ಯೆಹೋಶುವನಿಗೆ, “ನೀನು ಯೋಧರನ್ನು ಆರಿಸಿಕೊಂಡು ನಾಳೆ ನಮ್ಮ ಪರವಾಗಿ ಹೊರಟು ಅಮಾಲೇಕ್ಯರೊಡನೆ ಯುದ್ಧಮಾಡು. ನಾನು ದೇವದಂಡವನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ತುದಿಯಲ್ಲಿ ನಿಂತುಕೊಳ್ಳುವೆನು,” ಎಂದು ಹೇಳಿದನು.


ಆಗ ಯೆಹೋಶುವ ಎಲ್ಲಾ ಯೋಧರ ಮತ್ತು ಯುದ್ಧವೀರರ ಸಮೇತ ಗಿಲ್ಗಾಲಿನಿಂದ ಹೊರಟರು.


ಆದುದರಿಂದ ನೀನು ಈ ರಾತ್ರಿಯಲ್ಲೇ ಸೈನ್ಯವನ್ನು ತೆಗೆದುಕೊಂಡು ಬಂದು ಹೊಲಗಳಲ್ಲಿ ಹೊಂಚುಹಾಕಿಕೊಂಡಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು