Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:33 - ಕನ್ನಡ ಸತ್ಯವೇದವು C.L. Bible (BSI)

33 ಎಲ್ಲ ಇಸ್ರಯೇಲರು, ಅಂದರೆ ಹಿರಿಯರು, ಅಧಿಕಾರಿಗಳು, ನ್ಯಾಯಾಧಿಪತಿಗಳು, ಅನ್ಯದೇಶೀಯರು ಹಾಗೂ ಸ್ವದೇಶೀಯರು ಸರ್ವೇಶ್ವರನ ಒಡಂಬಡಿಕೆಯ ಮಂಜೂಷದ ಎಡಬಲಗಳಲ್ಲಿ ನಿಂತರು. ಆ ಮಂಜೂಷವನ್ನು ಹೊತ್ತ ಲೇವಿಯರಾದ ಯಾಜಕರಿಗೆ ಅಭಿಮುಖರಾಗಿ ನಿಂತರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನ, ಏಬಾಲ್ ಬೆಟ್ಟದ ಕಡೆ ಅರ್ಧಜನ, ಹೀಗೆ ಸರ್ವೇಶ್ವರನ ದಾಸ ಮೋಶೆ ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ಪಡೆಯುವುದಕ್ಕೋಸ್ಕರ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಎಲ್ಲಾ ಇಸ್ರಾಯೇಲ್ಯರು, ಅಂದರೆ ಹಿರಿಯರು, ಅಧಿಕಾರಿಗಳು, ನ್ಯಾಯಾಧಿಪತಿಗಳು, ಪರದೇಶದವರೂ ಹಾಗೂ ಸ್ವದೇಶಸ್ಥರೂ ಯೆಹೋವನ ಒಡಂಬಡಿಕೆಯ ಮಂಜೂಷದ ಎಡಬಲಗಳಲ್ಲಿ ಅದನ್ನು ಹೊತ್ತ ಲೇವಿಯರಾದ ಯಾಜಕರ ಎದುರಾಗಿ ನಿಂತುಕೊಂಡರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನರೂ, ಏಬಾಲ್ ಬೆಟ್ಟದ ಕಡೆ ಅರ್ಧ ಜನರೂ, ಹೀಗೆ ಯೆಹೋವನ ಸೇವಕನಾದ ಮೋಶೆಯು ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ನುಡಿಯುವುದಕ್ಕೋಸ್ಕರ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಎಲ್ಲಾ ಇಸ್ರಾಯೇಲ್ಯರು ಅಂದರೆ ಹಿರಿಯರೂ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಅನ್ಯದೇಶಸ್ಥರೂ ಸ್ವದೇಶಸ್ಥರೂ ಯೆಹೋವನ ಒಡಂಬಡಿಕೆಯ ಮಂಜೂಷದ ಎಡಬಲಗಡೆಗಳಲ್ಲಿ ಅದನ್ನು ಹೊತ್ತ ಲೇವಿಯರಾದ ಯಾಜಕರ ಎದುರಾಗಿ ನಿಂತುಕೊಂಡರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನರೂ ಏಬಾಲ್ ಬೆಟ್ಟದ ಕಡೆ ಅರ್ಧಜನರೂ ಯೆಹೋವನ ಸೇವಕನಾದ ಮೋಶೆಯು ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ನುಡಿಯುವದಕ್ಕೋಸ್ಕರ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಹಿರಿಯರು, ಅಧಿಕಾರಿಗಳು, ನ್ಯಾಯಾಧೀಶರು ಮತ್ತು ಇಸ್ರೇಲರೆಲ್ಲರು ಪವಿತ್ರ ಪೆಟ್ಟಿಗೆಯ ಸುತ್ತಲೂ ನಿಂತುಕೊಂಡಿದ್ದರು. ಯೆಹೋವನ ಒಡಂಬಡಿಕೆಯ ಪವಿತ್ರ ಪೆಟ್ಟಿಗೆಯನ್ನು ಹೊತ್ತುತಂದ ಲೇವಿಯರ ಎದುರುಗಡೆ ಅವರು ನಿಂತುಕೊಂಡಿದ್ದರು. ಅರ್ಧಜನರು ಏಬಾಲ್ ಬೆಟ್ಟದ ಎದುರಿಗೂ ಮತ್ತು ಇನ್ನುಳಿದ ಅರ್ಧಜನರು ಗೆರಿಜ್ಜೀಮ್ ಬೆಟ್ಟದ ಎದುರಿಗೂ ನಿಂತುಕೊಂಡಿದ್ದರು. ಆಶೀರ್ವಾದವನ್ನು ಹೊಂದಿಕೊಳ್ಳಲು ಹೀಗೆ ಮಾಡಬೇಕೆಂದು ಯೆಹೋವನ ಸೇವಕನಾದ ಮೋಶೆಯು ಜನರಿಗೆ ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಇಸ್ರಾಯೇಲರೆಲ್ಲರೂ ಅವರ ಹಿರಿಯರೂ ಅವರ ಅಧಿಕಾರಿಗಳೂ ಅವರ ನ್ಯಾಯಾಧಿಪತಿಗಳೂ ಪರದೇಶಸ್ಥರೂ ಸ್ವದೇಶಸ್ಥರೂ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮುಂದೆ ಒಡಂಬಡಿಕೆಯ ಮಂಜೂಷಕ್ಕೆ ಈ ಕಡೆಯೂ ಆ ಕಡೆಯೂ ಅರ್ಧ ಗೆರಿಜೀಮ್ ಪರ್ವತದ ಕಡೆಗೂ ಅರ್ಧ ಏಬಾಲ್ ಪರ್ವತದ ಮುಂದೆಯೂ ನಿಂತರು. ಯೆಹೋವ ದೇವರ ಸೇವಕ ಮೋಶೆ ಇಸ್ರಾಯೇಲರನ್ನು ಆಶೀರ್ವದಿಸುವಂತೆ ಮುಂಚೆ ವಾಕ್ಯಗಳನ್ನು ಕೊಟ್ಟಾಗ ಆಜ್ಞಾಪಿಸಿದ ಹಾಗೆಯೇ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:33
22 ತಿಳಿವುಗಳ ಹೋಲಿಕೆ  

“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿಗೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸೇರಿಸಿದ ನಂತರ ನೀವು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು.


ಜನರೆಲ್ಲರು ಈ ಧರ್ಮಶಾಸ್ತ್ರವನ್ನು ಕೇಳಿ ತಿಳಿದುಕೊಳ್ಳುವಂತೆ ಸ್ತ್ರೀ ಪುರುಷರನ್ನೂ ಮಕ್ಕಳನ್ನೂ ನಿಮ್ಮ ಊರುಗಳಲ್ಲಿರುವ ಅನ್ಯರನ್ನೂ ಕೂಡಿಸಬೇಕು. ಆಗ ಅವರು ತಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗುವರು. ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಿ ನಡೆಯುವರು.


ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಸರ್ವೇಶ್ವರನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಹಿರಿಯರ ವಶಕ್ಕೆ ಕೊಟ್ಟನು.


ತರುವಾಯ ಯೆಹೋಶುವನು ಎಲ್ಲ ಇಸ್ರಯೇಲ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ನಾಯಕರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಉಪಸ್ಥಿತರಾದರು.


ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿನಿಂದ ಮೇಲೆ ಬಂದು ಒಣನೆಲದಲ್ಲಿ ಕಾಲಿಟ್ಟ ಕೂಡಲೇ ನೀರು ಮುಂಚಿನಂತೆ ಬಂದು ಜೋರ್ಡನ್ ನದಿಯ ದಡಮೀರಿ ಹರಿಯಿತು.


“ನಿಮ್ಮ ದೇವರಾದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಯಾಜಕರಾದ ಲೇವಿಯರು ಹೊತ್ತಿರುವುದನ್ನು ನೀವು ಕಂಡಕೂಡಲೆ ನೀವು ಕೂಡ ನಿಮ್ಮ ನಿಮ್ಮ ಸ್ಥಳವನ್ನು ಬಿಟ್ಟು ಅದರ ಹಿಂದೆ ಹೋಗಿ.


“ನೀವು ಈ ಧರ್ಮಶಾಸ್ತ್ರ ಪುಸ್ತಕವನ್ನು ನಿಮ್ಮ ವಶಕ್ಕೆ ತೆಗೆದುಕೊಂಡು ನಿಮ್ಮ ದೇವರಾದ ಸರ್ವೇಶ್ವರನ ಆಜ್ಞಾಶಾಸನಗಳುಳ್ಳ ಮಂಜೂಷದ ಬಳಿಯಲ್ಲೇ ಇಡಿ. ಇಸ್ರಯೇಲರೇ, ಅಲ್ಲಿ ಇದು ನಿಮಗೆ ವಿರೋಧವಾಗಿ ಸಾಕ್ಷಿಕೊಡಲಿ.


ಈ ಬಗ್ಗೆ ಇಸ್ರಯೇಲರಲ್ಲಿರುವ ಸ್ವದೇಶೀಯರಿಗೂ ವಿದೇಶೀಯರಿಗೂ ಒಂದೇ ವಿಧಿಯಿರಬೇಕು.


ನಿಮಗೂ ನಿಮ್ಮಲ್ಲಿ ವಾಸಿಸುವ ವಿದೇಶೀಯನಿಗೂ ಒಂದೇ ವಿಧಿ, ಒಂದೇ ನಿಯಮ ಇರಬೇಕು,’ ಎಂದರು.


ಸ್ವದೇಶಿಗೂ ನಿಮ್ಮೊಡನೆ ವಾಸವಾಗಿರುವ ವಿದೇಶಿಗೂ ಅನ್ವಯಿಸುವ ವಿಧಿ ಒಂದೇ ಆಗಿರುತ್ತದೆ,”


ಆತ ಇಸ್ರಯೇಲರೆಲ್ಲರನ್ನು, ಅವರ ಹಿರಿಯರನ್ನು, ಮುಖ್ಯಸ್ಥರನ್ನು, ನ್ಯಾಯಾಧಿಪತಿಗಳನ್ನು ಹಾಗೂ ಅಧಿಕಾರಿಗಳನ್ನು ತನ್ನ ಬಳಿಗೆ ಕರೆಯಿಸಿದನು. ಅವರಿಗೆ, “ನಾನು ಮುಪ್ಪಿನ ಮುದುಕನಾದೆ.


ನೂನನ ಮಗ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಹೋಗಿರಿ. ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಸರ್ವೇಶ್ವರನ ಮಂಜೂಷದ ಮುಂದೆ ನಡೆಯಲಿ,” ಎಂದು ತಿಳಿಸಿದನು.


ಮೋಶೆ ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ ಸರ್ವೇಶ್ವರನ ಅಪ್ಪಣೆಗಳನ್ನೆಲ್ಲ ಅವರು ನೆರವೇರಿಸುವ ತನಕ ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿನ ಮಧ್ಯದಲ್ಲೇ ನಿಂತರು.


ಜನರು ಜೋರ್ಡನ್ ನದಿಯನ್ನು ದಾಟಲು ತಮ್ಮ ತಮ್ಮ ಡೇರೆಗಳಿಂದ ಹೊರಟರು. ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಅವರ ಮುಂದೆ ಇದ್ದರು.


ಅನ್ಯರಿಗಾಗಲಿ ಸ್ವಜನರಿಗಾಗಲಿ ಪಕ್ಷಪಾತವಿಲ್ಲದೆ ಒಂದೇ ನಿಯಮವಿರಬೇಕು. ನಾನು ನಿಮ್ಮ ದೇವರಾದ ಸರ್ವೇಶ್ವರ.”


ಯಾಜಕರಿಗೆ, “ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ನದಿದಾಟಿರಿ,” ಎಂದು ಆಜ್ಞಾಪಿಸಿದನು. ಅವರು ಅಂತೆಯೇ ಮಂಜೂಷವನ್ನು ಹೊತ್ತುಕೊಂಡು ಹೋದರು.


ನಮ್ಮ ಪೂರ್ವಜರು ಈ ಬೆಟ್ಟದ ಮೇಲೆ ದೇವರನ್ನು ಆರಾಧಿಸುತ್ತಿದ್ದರು. ಆದರೆ ಆರಾಧಿಸತಕ್ಕ ಕ್ಷೇತ್ರ ಇರುವುದು ಜೆರುಸಲೇಮಿನಲ್ಲೇ ಎಂದು ಯೆಹೂದ್ಯರಾದ ನೀವು ಹೇಳುತ್ತೀರಲ್ಲಾ,” ಎಂದಳು.


ಸರ್ವರಿಗೂ ಅಂದರೆ ನಿಮಗೂ ನಿಮ್ಮಲ್ಲಿರುವ ಅನ್ಯದೇಶೀಯರಿಗೂ ಒಂದೇ ವಿಧಿಯಿರಬೇಕು. ಇದು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಲಿ. ಸರ್ವೇಶ್ವರನ ಸನ್ನಿಧಿಯಲ್ಲಿ ನೀವು ಹೇಗೆ ಇರುವಿರೋ ಹಾಗೆಯೇ ಅನ್ಯದೇಶೀಯನೂ ಇರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು