Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:35 - ಕನ್ನಡ ಸತ್ಯವೇದವು C.L. Bible (BSI)

35 ಮೋಶೆ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಮಹಿಳೆಯರಿಗೂ ಮಕ್ಕಳಿಗೂ ಅನ್ಯದೇಶೀಯರಿಗೂ ಕೇಳಿಸುವಂತೆ ಸರ್ವಸಮೂಹದ ಮುಂದೆ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಮೋಶೆಯು ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಹೆಂಗಸರಿಗೂ, ಚಿಕ್ಕವರಿಗೂ, ಪರದೇಶದವರಿಗೂ ಕೇಳಿಸುವಂತೆ ಸರ್ವಸಮೂಹದ ಮುಂದೆ ಅದನ್ನು ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಮೋಶೆಯು ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಹೆಂಗಸರಿಗೂ ಚಿಕ್ಕವರಿಗೂ ಅವರಲ್ಲಿದ್ದ ಅನ್ಯದೇಶಸ್ಥರಿಗೂ ಕೇಳಿಸುವಂತೆ ಸರ್ವಸಮೂಹದ ಮುಂದೆ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಅಲ್ಲಿ ಇಸ್ರೇಲಿನ ಎಲ್ಲ ಜನರು ಸೇರಿ ಬಂದಿದ್ದರು. ಎಲ್ಲ ಹೆಂಗಸರು ಮತ್ತು ಮಕ್ಕಳು ಮತ್ತು ಇಸ್ರೇಲಿನ ಜನರೊಂದಿಗೆ ಇದ್ದ ಎಲ್ಲ ವಿದೇಶಿಯರು ಅಲ್ಲಿ ಇದ್ದರು. ಅವರೆಲ್ಲರಿಗೆ ಕೇಳಿಸುವಂತೆ ಮೋಶೆಯು ಕೊಟ್ಟಿದ್ದ ಪ್ರತಿಯೊಂದು ಆಜ್ಞೆಯನ್ನು ಯೆಹೋಶುವನು ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಮೋಶೆ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಮಹಿಳೆಯರಿಗೂ, ಮಕ್ಕಳಿಗೂ, ಅನ್ಯದೇಶೀಯರಿಗೂ ಕೇಳಿಸುವಂತೆ ಸರ್ವಸಮೂಹದ ಮುಂದೆ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:35
15 ತಿಳಿವುಗಳ ಹೋಲಿಕೆ  

ಜನರೆಲ್ಲರು ಈ ಧರ್ಮಶಾಸ್ತ್ರವನ್ನು ಕೇಳಿ ತಿಳಿದುಕೊಳ್ಳುವಂತೆ ಸ್ತ್ರೀ ಪುರುಷರನ್ನೂ ಮಕ್ಕಳನ್ನೂ ನಿಮ್ಮ ಊರುಗಳಲ್ಲಿರುವ ಅನ್ಯರನ್ನೂ ಕೂಡಿಸಬೇಕು. ಆಗ ಅವರು ತಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗುವರು. ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಿ ನಡೆಯುವರು.


ಯಾಜಕ ಎಜ್ರನು, ಗ್ರಹಿಸಿಕೊಳ್ಳಲು ಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ, ಏಳನೆಯ ತಿಂಗಳಿನ ಪ್ರಥಮ ದಿನದಲ್ಲಿ ಆ ಧರ್ಮಶಾಸ್ತ್ರವನ್ನು ತಂದು ಬೆಳಗಿನಿಂದ ಮಧ್ಯಾಹ್ನದವರೆಗೂ ಓದಿದನು.


“ನೀನು ನನ್ನ ದೇವಾಲಯದ ಪ್ರಾಕಾರದಲ್ಲಿ ನಿಂತು, ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಜುದೇಯದ ಎಲ್ಲ ಊರಿನವರಿಗೆ ನಾನು ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದನ್ನೂ ಬಿಡಬೇಡ.


ಆದರೂ, ಆ ದಿನಗಳು ಕಳೆದ ಮೇಲೆ, ಅವರನ್ನು ಬಿಟ್ಟು ನಮ್ಮ ಪ್ರಯಾಣವನ್ನು ಮುಂದುವರಿಸಲು ಅನುವಾದೆವು. ಅವರಾದರೋ, ಮಡದಿ ಮಕ್ಕಳೊಡನೆ ಪಟ್ಟಣ ಬಿಟ್ಟು ಸಮುದ್ರತೀರದವರೆಗೂ ನಮ್ಮೊಡನೆ ಬಂದರು. ಅಲ್ಲಿ ನಾವೆಲ್ಲರೂ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.


ಇದನ್ನು ಕಂಡ ಯೇಸು ಸಿಟ್ಟುಗೊಂಡು ಶಿಷ್ಯರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ. ಅವರನ್ನು ತಡೆಯಬೇಡಿ; ದೇವರ ಸಾಮ್ರಾಜ್ಯ ಇಂಥವರದೇ.


ಜನರನ್ನು ಒಟ್ಟುಗೂಡಿಸಿರಿ; ಸಭೆಯನ್ನು ಏರ್ಪಡಿಸಿರಿ; ವೃದ್ಧರನ್ನು, ಮಕ್ಕಳನ್ನು, ಮೊಲೆಗೂಸುಗಳನ್ನು ಕರೆತನ್ನಿರಿ. ವಧೂವರರು ತಮ್ಮ ಕಲ್ಯಾಣಗೃಹದಿಂದ ಹೊರಟುಬರಲಿ.


ಎಜ್ರನು ದೇವಾಲಯದ ಮುಂದೆ ಹೀಗೆ ಅಡ್ಡಬಿದ್ದು ಅಳುತ್ತಾ, ವಿಜ್ಞಾಪನೆಯನ್ನೂ ಪಾಪ ನಿವೇದನೆಯನ್ನೂ ಮಾಡುತ್ತಿರುವಾಗ ಇಸ್ರಯೇಲರ ಗಂಡಸರು, ಹೆಂಗಸರು ಹಾಗು ಮಕ್ಕಳು ಮಹಾಸಮೂಹವಾಗಿ ಅವನ ಬಳಿಗೆ ಬಂದು ಕೂಡಿದರು. ಜನರೆಲ್ಲರು ಅಲ್ಲಿ ಬಹಳವಾಗಿ ದುಃಖಿಸತೊಡಗಿದರು.


ಗೋತ್ರದವರು, ಹಿರಿಯರು, ಅಧಿಕಾರಿಗಳು, ಹೆಂಗಸರು, ಮಕ್ಕಳು ನಿಮ್ಮ ಪಾಳೆಯದಲ್ಲಿ ಇರುವ ಅನ್ಯರಾದ ಕಟ್ಟಿಗೆಯವರು, ನೀರಿನವರು ಮುಂತಾದ ಆಳುಗಳು,


ಏಕೆಂದರೆ, ದೈವಯೋಜನೆಯನ್ನು ಕಿಂಚಿತ್ತೂ ಮರೆಮಾಚದೆ ತಿಳಿಯಪಡಿಸಿದ್ದೇನೆ.


ನಿಮ್ಮ ದೇವರಾದ ಸರ್ವೇಶ್ವರ ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಆಜ್ಞೆಗಳನ್ನು ನೀವು ಕೈಗೊಳ್ಳಬೇಕೇ ಹೊರತು ಅವುಗಳಿಗೆ ಏನೂ ಕೂಡಿಸಬಾರದು, ಅವುಗಳಿಂದ ಏನೂ ತೆಗೆದುಬಿಡಬಾರದು.


ಅವರೊಂದಿಗೆ ಬಹುಮಂದಿ ಅನ್ಯದೇಶೀಯರೂ ಹೊರಟು ಬಂದಿದ್ದರು. ಕುರಿ, ದನ ಮುಂತಾದ ಪಶುಪ್ರಾಣಿಗಳು ಬಹಳವಿದ್ದವು.


ಆ ದಿನದಲ್ಲಿ ವಿವಿಧ ಭಾಷೆಗಳನ್ನಾಡುವ ರಾಷ್ಟ್ರಗಳಿಂದ ಹತ್ತು ಹತ್ತು ಮಂದಿ ಬಂದು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವೂ ನಿಮ್ಮೊಂದಿಗೆ ಬರುತ್ತೇವೆ. ಏಕೆಂದರೆ ದೇವರು ನಿಮ್ಮೊಡನೆ ಇದ್ದಾರೆ ಎಂಬ ಸುದ್ದಿಯನ್ನು ಕೇಳಿದ್ದೇವೆ’ ಎಂದು ಹೇಳುವರು. ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.”


ಈ ಸಂಗತಿಗಳನ್ನೆಲ್ಲಾ ನೀವು ಜ್ಞಾಪಕಮಾಡಿಕೊಂಡು ಈ ಒಡಂಬಡಿಕೆಯ ವಾಕ್ಯಗಳನ್ನು ಅನುಸರಿಸಿ ನಡೆಯಬೇಕು; ಆಗ ನೀವು ನಡೆಸುವ ಕೆಲಸಕಾರ್ಯಗಳಲ್ಲಿ ಜಾಣರಾಗಿ ಅಭಿವೃದ್ಧಿ ಹೊಂದುವಿರಿ.


“ಇಸ್ರಯೇಲ ಜನರೇ, ನಿಮ್ಮ ಮುಖ್ಯಸ್ಥರು,


ಆ ನೀರುಬಾಗಿಲಿನ ಮುಂದಣ ಬಯಲಿನಲ್ಲಿ ಕೂಡಿಬಂದಿದ್ದ ಸ್ತ್ರೀಪುರುಷರಲ್ಲಿ ಗ್ರಹಿಸಲು ಶಕ್ತರಾದವರೆಲ್ಲರೂ ಧರ್ಮಶಾಸ್ತ್ರ ಪಾರಾಯಣವನ್ನು ಆಲಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು