Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:6 - ಕನ್ನಡ ಸತ್ಯವೇದವು C.L. Bible (BSI)

6 ‘ಇವರು ಮುಂಚಿನಂತೆ ನಮಗೆ ಹೆದರಿ ಓಡಿಹೋಗುತ್ತಿದ್ದಾರೆ’ ಎಂದು ಭಾವಿಸಿ, ಅವರು ನಮ್ಮನ್ನು ಹಿಂದಟ್ಟುವರು. ನಾವು ಓಡುತ್ತಲೇ ಇರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇವರು ಮೊದಲಿನಂತೆ ನಮಗೆ ಹೆದರಿ ಓಡಿಹೋಗುತ್ತಿದ್ದಾರೆಂದು ತಿಳಿದು ಅವರು ನಮ್ಮನ್ನು ಹಿಂದಟ್ಟುವರು; ನಾವು ಓಡುತ್ತಲೇ ಇರುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರು ಮುಂಚಿನಂತೆ ನಮ್ಮೊಡನೆ ಯುದ್ಧಕ್ಕೆ ಬಂದ ಕೂಡಲೆ ನಾವು ಓಡಿ ಹೋಗುವೆವು. ಇವರು ಮುಂಚಿನಂತೆ ನಮಗೆ ಹೆದರಿ ಓಡಿಹೋಗುತ್ತಾರೆಂದು ನೆನಸಿ ಅವರು ನಮ್ಮನ್ನು ಹಿಂದಟ್ಟುವರು; ನಾವು ಓಡುತ್ತಲೇ ಇರುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರು ನಗರದಿಂದ ನಮ್ಮನ್ನು ಬೆನ್ನಟ್ಟಿಕೊಂಡು ಬರುತ್ತಾರೆ. ನಾವು ಮುಂಚಿನಂತೆ ಅವರ ಮುಂದೆ ಸೋತು ಓಡಿಹೋಗುತ್ತಿದ್ದೇವೆ ಎಂದು ಅವರು ತಿಳಿದುಕೊಳ್ಳುತ್ತಾರೆ. ಹೀಗೆ ನಾವು ಬಹುದೂರ ಓಡಿಹೋದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಅವರು, ‘ಮುಂಚಿನ ಹಾಗೆಯೇ ನಮ್ಮ ಮುಂದೆ ಓಡಿಹೋಗುತ್ತಾರೆ,’ ಎಂದು ಹೇಳಿಕೊಳ್ಳುವರು. ಪಟ್ಟಣದ ಬಳಿಯಿಂದ ದೂರದವರೆಗೂ ಅವರು ಬರುವವರೆಗೆ ನಾವು ಓಡಿ ಹೋಗುತ್ತಲೇ ಇರುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:6
7 ತಿಳಿವುಗಳ ಹೋಲಿಕೆ  

ತನ್ನ ನಿಶ್ಚಿತಕಾಲ ಯಾವಾಗ ಬರುವುದೆಂದು ಮಾನವನಿಗೆ ತಿಳಿಯದು. ಮೀನುಗಳು ಮೋಸಬಲೆಗೂ, ಹಕ್ಕಿಗಳು ಉರುಲುಬಲೆಗೂ, ಸಿಕ್ಕಿ ಬೀಳುವಂತೆ ನರಮಾನವರು ತಮ್ಮ ಮೇಲೆ ತಟ್ಟನೆ ಬೀಳುವ ಕಾಲಪಾಶಕ್ಕೆ ಸಿಕ್ಕಿಕೊಳ್ಳುತ್ತಾರೆ.


ಕೆಟ್ಟದ್ದನ್ನು ಮಾಡಲು ನರಮಾನವರು ತುಂಬ ಆಸಕ್ತಿ ಉಳ್ಳವರಾಗಿದ್ದಾರೆ. ಕೇಡಿಗೆ ತಕ್ಕ ದಂಡನೆಯನ್ನು ಕೂಡಲೆ ವಿಧಿಸದಿರುವುದೇ ಇದಕ್ಕೆ ಕಾರಣ.


ಬೆನ್ಯಾಮೀನ್ಯರು, “ಅವರು ಮುಂಚಿನಂತೆ ಈಗಲೂ ಸೋತುಹೋಗುತ್ತಾರೆ” ಎಂದು ನೆನೆಸಿದರು. ಇಸ್ರಯೇಲರಾದರೋ, “ಅವರು ತಮ್ಮ ಪಟ್ಟಣಕ್ಕೆ ದೂರವಾಗುವಂತೆ ನಾವು ಸ್ವಲ್ಪ ದೂರ ಓಡಿಹೋಗೋಣ,” ಎಂದು ಮಾತನಾಡಿಕೊಂಡು


ನಮ್ಮ ಶತ್ರುಗಳು ಮಾತಾಡಿಕೊಂಡರು ಇಂತೆಂದು: ‘ಹಿಂದಟ್ಟಿ ಹಿಡಿಯುವೆವು ಅವರನು ಅಪಹರಿಸಿಕೊಳ್ವೆವು ಅವರ ಸೊತ್ತನು ತೀರಿಸಿಕೊಳ್ವೆವು ಅವರಲ್ಲಿ ನಮ್ಮ ಬಯಕೆಯನು ಶಕ್ತಿಯಿಂದ ಸಂಹರಿಸುವೆವು ಅವರನು ಕತ್ತಿ ಹಿಡಿದು.’


ಫರೋಹನು ಅದನ್ನು ಕಂಡು, ‘ಇಸ್ರಯೇಲರಿಗೆ ದಾರಿತಪ್ಪಿತು, ಸುತ್ತಲೂ ಮರುಭೂಮಿ ಅವರನ್ನು ಆವರಿಸಿದೆ” ಎಂದುಕೊಳ್ಳುವನು.


ನಾನು ಮತ್ತು ನನ್ನ ಸಂಗಡದವರೆಲ್ಲರು ನಗರದ ಸಮೀಪಕ್ಕೆ ಹೋಗುತ್ತೇವೆ. ಆಯಿಯ ಜನರು ಮುಂಚಿನಂತೆ ನಮ್ಮೊಡನ ಯುದ್ಧಕ್ಕೆ ಬರುವರು. ಕೂಡಲೆ ನಾವು ಅಲ್ಲಿಂದ ಓಡಿಹೋಗುತ್ತೇವೆ.


ನಾವು ಮತ್ತು ಅವರು ನಗರಕ್ಕೆ ದೂರವಾದ ಮೇಲೆ ನೀವು ಹೊಂಚಿ ನೋಡುವ ಸ್ಥಳದಿಂದ ಎದ್ದು ನಗರದೊಳಗೆ, ನುಗ್ಗಿ ಅದನ್ನು ಸ್ವಾಧೀನ ಮಾಡಿಕೊಳ್ಳಿ. ನಿಮ್ಮ ದೇವರಾದ ಸರ್ವೇಶ್ವರ ಅದನ್ನು ನಿಮ್ಮ ಕೈಗೆ ಒಪ್ಪಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು