Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:7 - ಕನ್ನಡ ಸತ್ಯವೇದವು C.L. Bible (BSI)

7 ನಾವು ಮತ್ತು ಅವರು ನಗರಕ್ಕೆ ದೂರವಾದ ಮೇಲೆ ನೀವು ಹೊಂಚಿ ನೋಡುವ ಸ್ಥಳದಿಂದ ಎದ್ದು ನಗರದೊಳಗೆ, ನುಗ್ಗಿ ಅದನ್ನು ಸ್ವಾಧೀನ ಮಾಡಿಕೊಳ್ಳಿ. ನಿಮ್ಮ ದೇವರಾದ ಸರ್ವೇಶ್ವರ ಅದನ್ನು ನಿಮ್ಮ ಕೈಗೆ ಒಪ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾವೂ ಅವರೂ ಪಟ್ಟಣದಿಂದ ದೂರವಾದ ಕೂಡಲೇ ನೀವು ಹೊಂಚಿ ಕುಳಿತ್ತಿದ್ದ ಸ್ಥಳದಿಂದ ಎದ್ದು ಪಟ್ಟಣದೊಳಗೆ ನುಗ್ಗಿ ಅದನ್ನು ಸ್ವಾಧೀನ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ಅದನ್ನು ನಿಮ್ಮ ಕೈಗೆ ಒಪ್ಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾವೂ ಅವರೂ ಪಟ್ಟಣಕ್ಕೆ ದೂರವಾದ ಮೇಲೆ ನೀವು ಹೊಂಚಿನೋಡುತ್ತಿದ್ದ ಸ್ಥಳದಿಂದ ಎದ್ದು ಪಟ್ಟಣದೊಳಗೆ ನುಗ್ಗಿ ಅದನ್ನು ಸ್ವಾಧೀನಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ಅದನ್ನು ನಿಮ್ಮ ಕೈಗೆ ಒಪ್ಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀವು ಯಾವ ಸ್ಥಳದಲ್ಲಿ ಅಡಗಿಕೊಂಡಿದ್ದೀರೋ ಆ ಸ್ಥಳದಿಂದ ಹೊರಬಂದು ಪಟ್ಟಣವನ್ನು ಸ್ವಾಧೀನಪಡಿಸಿಕೊಳ್ಳಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಗೆಲ್ಲುವ ಸಾಮರ್ಥ್ಯವನ್ನು ದಯಪಾಲಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ನೀವು ಹೊಂಚಿಕೊಳ್ಳುವ ಸ್ಥಳದಿಂದ ಎದ್ದು ಬಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವ ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:7
6 ತಿಳಿವುಗಳ ಹೋಲಿಕೆ  

ಸಿರಿಯಾದ ರಾಜನಿಗೆ ನಾಮಾನ್ ಎಂಬೊಬ್ಬ ಸೇನಾಪತಿಯಿದ್ದನು. ಸರ್ವೇಶ್ವರಸ್ವಾಮಿ ಇವನ ಮುಂಖಾತರ ಸಿರಿಯಾದವರಿಗೆ ಜಯವನ್ನು ಅನುಗ್ರಹಿಸಿದ್ದರು. ಆದ್ದರಿಂದ ರಾಜನು ಇವನನ್ನು ಮಹಾಪುರುಷನೆಂದೂ ಸನ್ಮಾನ್ಯನೆಂದೂ ಗೌರವಿಸುತ್ತಿದ್ದನು. ಆದರೆ ಪರಾಕ್ರಮಶಾಲಿಯಾದ ಇವನು ಭೀಕರ ಚರ್ಮರೋಗದಿಂದ ನರಳುತ್ತಿದ್ದನು.


ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ಅಂಜಬೇಡ, ಕಳವಳಗೊಳ್ಳಬೇಡ; ಯೋಧರೆಲ್ಲರನ್ನು ನಿನ್ನೊಡನೆ ಕರೆದುಕೊಂಡು ಆಯಿಗೆ ಹೋಗು. ಆಯಿ ಎಂಬ ಊರಿನ ರಾಜ, ಪ್ರಜೆ, ನಗರ, ನಾಡು ಇವೆಲ್ಲವನ್ನು ನಿನಗೆ ಕೊಟ್ಟಿದ್ದೇನೆ, ಹೋಗು.


‘ಇವರು ಮುಂಚಿನಂತೆ ನಮಗೆ ಹೆದರಿ ಓಡಿಹೋಗುತ್ತಿದ್ದಾರೆ’ ಎಂದು ಭಾವಿಸಿ, ಅವರು ನಮ್ಮನ್ನು ಹಿಂದಟ್ಟುವರು. ನಾವು ಓಡುತ್ತಲೇ ಇರುತ್ತೇವೆ.


ನೀವು ನಗರವನ್ನು ಹಿಡಿದ ಕೂಡಲೇ ಅದಕ್ಕೆ ಬೆಂಕಿ ಹೊತ್ತಿಸಿರಿ. ಸರ್ವೇಶ್ವರನ ಮಾತಿನಂತೆ ನಡೆಯಿರಿ. ಇದೇ ನಾನು ನಿಮಗೆ ಕೊಡುವ ಆಜ್ಞೆ,” ಎಂದು ಹೇಳಿ ಅವರನ್ನು ರಾತ್ರಿಯಲ್ಲೇ ಕಳಿಸಿದನು.


ಆದುದರಿಂದ ಮತ್ತೆ ಸರ್ವೇಶ್ವರನನ್ನು ಕೇಳಿದನು. ಅವರು, “ನೀನೆದ್ದು ಕೆಯೀಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು,” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು