Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:8 - ಕನ್ನಡ ಸತ್ಯವೇದವು C.L. Bible (BSI)

8 ನೀವು ನಗರವನ್ನು ಹಿಡಿದ ಕೂಡಲೇ ಅದಕ್ಕೆ ಬೆಂಕಿ ಹೊತ್ತಿಸಿರಿ. ಸರ್ವೇಶ್ವರನ ಮಾತಿನಂತೆ ನಡೆಯಿರಿ. ಇದೇ ನಾನು ನಿಮಗೆ ಕೊಡುವ ಆಜ್ಞೆ,” ಎಂದು ಹೇಳಿ ಅವರನ್ನು ರಾತ್ರಿಯಲ್ಲೇ ಕಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀವು ಪಟ್ಟಣವನ್ನು ಹಿಡಿದ ಕೂಡಲೆ ಅದಕ್ಕೆ ಬೆಂಕಿ ಹೊತ್ತಿಸಿರಿ. ಯೆಹೋವನ ಮಾತಿನಂತೆ ನಡೆಯಿರಿ. ಇದೇ ನಾನು ನಿಮಗೆ ಕೊಡುವ ಆಜ್ಞೆ” ಎಂದು ಹೇಳಿ ಅವರನ್ನು ರಾತ್ರಿಯಲ್ಲಿಯೇ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀವು ಪಟ್ಟಣವನ್ನು ಹಿಡಿದ ಕೂಡಲೆ ಅದಕ್ಕೆ ಬೆಂಕಿಹೊತ್ತಿಸಿರಿ. ಯೆಹೋವನ ಮಾತಿನಂತೆ ನಡೆಯಿರಿ, ನನ್ನ ಅಪ್ಪಣೆ ಇಷ್ಟೇ ಎಂದು ಹೇಳಿ ಅವರನ್ನು ರಾತ್ರಿಯಲ್ಲೇ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಯೆಹೋವನು ಹೇಳಿದಂತೆಯೇ ನೀವು ಮಾಡಬೇಕು. ನೀವು ಪಟ್ಟಣವನ್ನು ಸ್ವಾಧೀನಪಡಿಸಿಕೊಂಡ ಮೇಲೆ ಅದನ್ನು ಸುಟ್ಟುಹಾಕಬೇಕು. ನನ್ನ ಕಡೆಗೆ ಗಮನವಿರಲಿ! ಆಕ್ರಮಣ ಮಾಡುವುದಕ್ಕೆ ನಾನು ಆಜ್ಞೆಯನ್ನು ಕೊಡುತ್ತೇನೆ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀವು ಪಟ್ಟಣವನ್ನು ಹಿಡಿದ ತರುವಾಯ, ಬೆಂಕಿ ಹಚ್ಚಿ, ಅದನ್ನು ಸುಟ್ಟುಬಿಟ್ಟು, ಯೆಹೋವ ದೇವರ ಆಜ್ಞೆಯ ಪ್ರಕಾರವೇ ಮಾಡಿರಿ. ನಾನು ಇದನ್ನು ನಿಮಗೆ ಆಜ್ಞಾಪಿಸಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:8
12 ತಿಳಿವುಗಳ ಹೋಲಿಕೆ  

ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದಕೂಡಲೆ ಅವನನ್ನು ಹೊಡೆದು ಕೊಂದುಹಾಕಿ; ಹೆದರಬೇಡಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೆ? ಧೈರ್ಯದಿಂದಿರಿ, ಶೂರರಾಗಿರಿ,” ಎಂದು ಹೇಳಿದ್ದನು.


ಅವರು ಯೆಹೋಶುವನಿಗೆ, “ನೀವು ನಮಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡುತ್ತೇವೆ. ಎಲ್ಲಿಗೆ ಕಳಿಸಿದರೂ ಹೋಗುತ್ತೇವೆ.


ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವ ಎಡೆಗಳಲ್ಲೆಲ್ಲ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನ್ನ ಸಂಗಡ ಇರುತ್ತೇನೆ,” ಎಂದು ಹೇಳಿದರು.


ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗ ಬಾರಾಕನನ್ನು ಬರಹೇಳಿ ಅವನಿಗೆ, “ನಿಶ್ಚಯವಾಗಿ ಇಸ್ರಯೇಲರ ದೇವರಾದ ಸರ್ವೇಶ್ವರ ನಿನಗೆ ಆಜ್ಞಾಪಿಸಿದ್ದಾರೆ: ‘ನೀನೆದ್ದು ನಫ್ತಾಲಿ ಮತ್ತು ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು;


ಯೆಹೋಶುವನು ಆಯಿ ನಗರವನ್ನು ಸುಟ್ಟು ಅದು ಎಂದಿಗೂ ಮರಳಿ ಕಟ್ಟಲಾಗದಂತೆ ಹಾಳುದಿಬ್ಬವಾಗಿಸಿಬಿಟ್ಟನು. ಅದು ಇಂದಿನವರೆಗೂ ಹಾಗೆಯೆ ಉಳಿದಿದೆ.


ಬಳಿಕ ನಗರವನ್ನೂ - ಅದರಲ್ಲಿದ್ದುದೆಲ್ಲವನ್ನೂ ಬೆಂಕಿಯಿಂದ ಸುಟ್ಟುಹಾಕಿದರು. ಆದರೆ ಬೆಳ್ಳಿ ಬಂಗಾರವನ್ನು, ಕಂಚುಕಬ್ಬಿಣಗಳ ಪಾತ್ರೆ ಸರ್ವೇಶ್ವರನ ಆಲಯದ ಭಂಡಾರಕ್ಕೆ ಒಪ್ಪಿಸಿದರು.


ಆದರೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸಿರಾಡುವ ಒಬ್ಬರನ್ನಾದರೂ ಉಳಿಸಬಾರದು.


ಜೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು. ಆದರೆ ಕೊಳ್ಳೆಯನ್ನೂ ಪಶುಪ್ರಾಣಿಗಳನ್ನೂ ಈ ಸಾರಿ ನೀವೇ ಇಟ್ಟುಕೊಳ್ಳಬಹುದು. ನಿಮ್ಮಲ್ಲಿ ಕೆಲವರು ಆ ಊರಿನ ಹಿಂಬದಿಯಲ್ಲಿ ಹೊಂಚುಹಾಕಿಕೊಂಡಿರಲಿ,” ಎಂದು ಆಜ್ಞಾಪಿಸಿದರು.


ನಾವು ಮತ್ತು ಅವರು ನಗರಕ್ಕೆ ದೂರವಾದ ಮೇಲೆ ನೀವು ಹೊಂಚಿ ನೋಡುವ ಸ್ಥಳದಿಂದ ಎದ್ದು ನಗರದೊಳಗೆ, ನುಗ್ಗಿ ಅದನ್ನು ಸ್ವಾಧೀನ ಮಾಡಿಕೊಳ್ಳಿ. ನಿಮ್ಮ ದೇವರಾದ ಸರ್ವೇಶ್ವರ ಅದನ್ನು ನಿಮ್ಮ ಕೈಗೆ ಒಪ್ಪಿಸುವರು.


ಅವರು ಹೊಂಚುಹಾಕುವ ಸಲುವಾಗಿ ಬೇತೇಲಿಗೂ ಆಯಿಗೂ ನಡುವೆ ಆಯಿಯ ಪಶ್ಚಿಮಕ್ಕೆ ಹೋಗಿ ಅಡಗಿಕೊಂಡರು. ಯೆಹೋಶುವನು ಆ ರಾತ್ರಿಯಲ್ಲಿ ಜನರ ಮಧ್ಯೆ ಕಳೆದನು.


ನಗರಕ್ಕೆ ನುಗ್ಗಿದವರೂ ಹೊರಗೆ ಬಂದು ಆ ಜನರ ಮೇಲೆ ಎರಗಿದರು. ಹೀಗೆ ಆ ಕಡೆಯಿಂದಲೂ ಈ ಕಡೆಯಿಂದಲೂ ಇಸ್ರಯೇಲರ ಕೈಗೆ ಸಿಕ್ಕಿಬಿದ್ದರು. ಎಲ್ಲರನ್ನು ಸದೆಬಡಿಯಲಾಯಿತು. ಒಬ್ಬನಾದರೂ ಉಳಿಯಲಿಲ್ಲ. ಯಾವನೂ ತಪ್ಪಿಸಿಕೊಳ್ಳಲಿಲ್ಲ.


ನಗರದ ಉತ್ತರದಲ್ಲಿದ್ದ ಸಮಸ್ತ ಸೈನ್ಯವನ್ನು, ನಗರದ ಪಶ್ಚಿಮದಲ್ಲಿ ಹೊಂಚಿನೋಡುತ್ತಿದ್ದ ಸೈನ್ಯವನ್ನು ಕ್ರಮಪಡಿಸಿದ ನಂತರ ಅವನು ಆ ರಾತ್ರಿಯನ್ನು ಕಣಿವೆಯಲ್ಲಿ ಕಳೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು