Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:9 - ಕನ್ನಡ ಸತ್ಯವೇದವು C.L. Bible (BSI)

9 ಅವರು ಹೊಂಚುಹಾಕುವ ಸಲುವಾಗಿ ಬೇತೇಲಿಗೂ ಆಯಿಗೂ ನಡುವೆ ಆಯಿಯ ಪಶ್ಚಿಮಕ್ಕೆ ಹೋಗಿ ಅಡಗಿಕೊಂಡರು. ಯೆಹೋಶುವನು ಆ ರಾತ್ರಿಯಲ್ಲಿ ಜನರ ಮಧ್ಯೆ ಕಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ಹೊಂಚುಹಾಕುವುದಕ್ಕೆ ಹೊರಟುಹೋಗಿ ಬೇತೇಲಿಗೂ ಆಯಿಗೂ ನಡುವೆ ಆಯಿ ಎಂಬ ಊರಿನ ಪಶ್ಚಿಮದಲ್ಲಿ ಅಡಗಿಕೊಂಡರು. ಯೆಹೋಶುವನು ಆ ರಾತ್ರಿಯನ್ನು ಜನರ ಮಧ್ಯದಲ್ಲಿ ಕಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರು ಹೊಂಚುಹಾಕುವದಕ್ಕೆ ಹೊರಟುಹೋಗಿ ಬೇತೇಲಿಗೂ ಆಯಿಗೂ ನಡುವೆ ಆಯಿ ಎಂಬ ಊರಿನ ಪಶ್ಚಿಮದಲ್ಲಿ ಅಡಗಿಕೊಂಡರು. ಯೆಹೋಶುವನು ಆ ರಾತ್ರಿಯನ್ನು ಜನರ ಮಧ್ಯದಲ್ಲಿ ಕಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬಳಿಕ ಯೆಹೋಶುವನು ಅವರನ್ನು ಅವರು ಅಡಗಿಕೊಳ್ಳಬೇಕಾದ ಸ್ಥಳಕ್ಕೆ ಕಳುಹಿಸಿದನು. ಅವರು “ಬೇತೇಲ್” ಮತ್ತು “ಆಯಿ”ಯ ಮಧ್ಯದಲ್ಲಿದ್ದ ಒಂದು ಸ್ಥಳಕ್ಕೆ ಹೋದರು. ಇದು ಆಯಿಯ ಪಶ್ಚಿಮಕ್ಕಿತ್ತು. ಯೆಹೋಶುವನು ತನ್ನ ಜನರೊಂದಿಗೆ ಆ ರಾತ್ರಿ ಅಲ್ಲಿಯೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋಶುವನು ಅವರನ್ನು ಕಳುಹಿಸಿದಾಗ ಅವರು ಹೋಗಿ ಹೊಂಚಿಕೊಂಡು ಬೇತೇಲಿಗೂ ಆಯಿ ಎಂಬ ಪಟ್ಟಣಕ್ಕೂ ನಡುವೆ ಆಯಿ ಎಂಬ ಪಟ್ಟಣಕ್ಕೆ ಪಶ್ಚಿಮದ ಕಡೆ ಅಡಗಿಕೊಂಡರು. ಆದರೆ ಯೆಹೋಶುವನು ಆ ರಾತ್ರಿ ಜನರ ಮಧ್ಯದಲ್ಲಿ ಉಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:9
9 ತಿಳಿವುಗಳ ಹೋಲಿಕೆ  

ಬೇತೇಲ್, ಆಯಿ ಎಂಬ ಊರುಗಳವರು - 123


ಯೆಹೋಶುವ ಸುಮಾರು ಐದು ಸಾವಿರ ಜನರನ್ನು ಆರಿಸಿಕೊಂಡು ಬೇತೇಲಿಗೂ ಆಯಿಗೂ ನಡುವೆ ನಗರದ ಪಶ್ಚಿಮದಲ್ಲಿ ಹೊಂಚಿನೋಡುವುದಕ್ಕಾಗಿ ಇರಿಸಿದನು.


ಯೆಹೋಶುವನು ಕೆಲವು ಜನರನ್ನು ಕರೆದು, “ನೀವು ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ ‘ಆಯಿ’ ಎಂಬ ಪ್ರಾಂತ್ಯಕ್ಕೆ ಹೋಗಿ ಬೇಹುನೋಡಿ ಬನ್ನಿ,” ಎಂದು ಹೇಳಿ ಅವರನ್ನು ಜೆರಿಕೋವಿನಿಂದ ಕಳಿಸಿದನು. ಅವರು ಹೋಗಿ ಆಯಿ ಎಂಬ ಊರನ್ನು ಸಂಚರಿಸಿ ಬೇಹು ನೋಡಿ ಹಿಂದಿರುಗಿ ಬಂದರು.


ಆದಕಾರಣ ಅವನು ಆ ಕಾಣಿಕೆಯನ್ನು ಮುಂಚಿತವಾಗಿ ಕಳಿಸಿ, ತಾನು ಆ ರಾತ್ರಿ ಆ ತನ್ನ ಪಾಳೆಯದೊಳಗೇ ಇದ್ದನು.


ಬಳಿಕ ಅವನು ಅಲ್ಲಿಂದ ದಕ್ಷಿಣಕ್ಕೆ ಹೊರಟು ಬೇತೇಲಿಗೆ ಪೂರ್ವಕ್ಕಿರುವ ಗುಡ್ಡಗಾಡಿಗೆ ಬಂದು ಗುಡಾರ ಹಾಕಿ ನೆಲಸಿದನು. ಪಶ್ಚಿಮಕ್ಕೆ ಬೇತೇಲೂ ಪೂರ್ವಕ್ಕೆ ಆಯಿ ಎಂಬ ಊರು ಇದ್ದವು. ಅಲ್ಲೂ ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಅವರ ನಾಮಸ್ಮರಣೆಮಾಡಿ ಆರಾಧಿಸಿದನು.


ನೀವು ನಗರವನ್ನು ಹಿಡಿದ ಕೂಡಲೇ ಅದಕ್ಕೆ ಬೆಂಕಿ ಹೊತ್ತಿಸಿರಿ. ಸರ್ವೇಶ್ವರನ ಮಾತಿನಂತೆ ನಡೆಯಿರಿ. ಇದೇ ನಾನು ನಿಮಗೆ ಕೊಡುವ ಆಜ್ಞೆ,” ಎಂದು ಹೇಳಿ ಅವರನ್ನು ರಾತ್ರಿಯಲ್ಲೇ ಕಳಿಸಿದನು.


ಬೆಳಿಗ್ಗೆ ಅವನೆದ್ದು ಇಸ್ರಯೇಲರ ಹಿರಿಯರ ಸಂಗಡ ಸೈನ್ಯವನ್ನು ಕೂಡಿಸಿ ಅವರ ಮುಂದೆ ಆಯಿಗೆ ಹೊರಟನು.


ಹೀಗೆ ಬಹುಮಾನ ಪಡೆದವರು ಇವರು: ಬೇತೇಲಿನವರು, ದಕ್ಷಿಣ ಪ್ರಾಂತ್ಯದ ರಾಮೋತಿನವರು, ಯತ್ತೀರಿನವರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು