Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:1 - ಕನ್ನಡ ಸತ್ಯವೇದವು C.L. Bible (BSI)

1 ಜೋರ್ಡನ್ ಹೊಳೆಯ ಆಚೆ ಬೆಟ್ಟದ ಪ್ರದೇಶ, ಕಣಿವೆ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ, ಹಿತ್ತಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೊರ್ದನ್ ನದಿಯ ಆಚೆಗಿರುವ ಬೆಟ್ಟದ ಮೇಲಿನ ಪ್ರದೇಶ, ಕಣಿವೆ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ, ಹಿತ್ತಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿದರು ಹಾಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೊರ್ದನ್ ಹೊಳೆಯ ಆಚೆ ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ ಹಿತ್ತಿಯ ಕಾನಾನ್ ಪೆರಿಜ್ಜೀಯ ಹಿವ್ವಿಯ ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಜೋರ್ಡನ್ ನದಿಯ ಪಶ್ಚಿಮದ ಎಲ್ಲ ಅರಸರು ಈ ವಿಷಯಗಳ ಬಗ್ಗೆ ಕೇಳಿದರು. ಇವರು ಹಿತ್ತಿಯರ, ಅಮೋರಿಯರ, ಕಾನಾನ್ಯರ, ಪೆರಿಜ್ಜೀಯರ, ಹಿವ್ವಿಯರ, ಯೆಬೂಸಿಯರ ರಾಜರಾಗಿದ್ದರು. ಅವರು ಬೆಟ್ಟಪ್ರದೇಶಗಳಲ್ಲಿ ಮತ್ತು ಸಮತಲ ಪ್ರದೇಶಗಳಲ್ಲಿ ವಾಸವಾಗಿದ್ದರು. ಅವರು ಭೂಮಧ್ಯಸಾಗರದ ತೀರ ಪ್ರದೇಶದಲ್ಲಿ, ಲೆಬನೋನಿನವರೆಗೆ ಸಹ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೊರ್ದನ್ ನದಿಯ ಈಚೆಯಲ್ಲಿ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಲೆಬನೋನಿಗೆ ಎದುರಾದ ಮೆಡಿಟೆರಿಯನ್ ಸಮುದ್ರದ ಸಮಸ್ತ ಪ್ರಾಂತಗಳಲ್ಲಿಯೂ ಇರುವ ಹಿತ್ತಿಯರ, ಅಮೋರಿಯರ, ಕಾನಾನ್ಯರ, ಪೆರಿಜೀಯರ, ಹಿವ್ವಿಯರ, ಯೆಬೂಸಿಯರ ಅರಸರು ಇದನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:1
32 ತಿಳಿವುಗಳ ಹೋಲಿಕೆ  

‘ಪಶ್ಚಿಮ ದಿಕ್ಕಿನಲ್ಲಿ ಮಹಾಸಮುದ್ರದ ದಡವೇ ನಿಮ್ಮ ನಾಡಿನ ಮೇರೆಯಾಗಿರುವುದು.


ಈಜಿಪ್ಟಿನಲ್ಲಿ ನಿಮಗುಂಟಾಗಿ ಇರುವ ಸಂಕಷ್ಟಗಳಿಂದ ನಿಮ್ಮನ್ನು ಪಾರುಮಾಡಿ ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಬರಮಾಡಬೇಕೆಂದು ತೀರ್ಮಾನಿಸಿದ್ದೇನೆ’ ಎಂದು ತಿಳಿಸು.


ಚೈತನ್ಯಸ್ವರೂಪನಾದ ದೇವರು ನಿಮ್ಮ ಮಧ್ಯೆ ಇದ್ದಾರೆಂದು ನಿಮಗೆ ಈಗ ತಿಳಿಯುವುದು. ಅದೇ ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು ಹಾಗೂ ಯೆಬೂಸಿಯರನ್ನು ನಿಮ್ಮ ಮುಂದಿನಿಂದ ಓಡಿಸಿಬಿಡುವರೆಂದು ನಿಮಗೆ ಗೊತ್ತಾಗುವುದು.


ನನ್ನ ದೂತನು ನಿಮ್ಮ ಮುಂದೆ ನಡೆದು ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು ಹಾಗೂ ಯೆಬೂಸಿಯರು ಇರುವ ನಾಡಿಗೆ ನಿಮ್ಮನ್ನು ಸೇರಿಸುವನು. ಅವರನ್ನಾದರೋ ನಾನು ನಿರ್ಮೂಲ ಮಾಡುವೆನು.


ನೀವು ಜೋರ್ಡನನ್ನು ದಾಟಿ ಜೆರಿಕೋವಿಗೆ ಬಂದಿರಿ. ಆಗ ಜೆರಿಕೋವಿನವರು, ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷ್ಟಿಯರು, ಹಿವ್ವಿಯರು ಹಾಗೂ ಯೆಬೂಸಿಯರು ಇವರೆಲ್ಲರೂ ನಿಮಗೆ ವಿರುದ್ಧ ಯುದ್ಧಕ್ಕೆ ಬಂದರು. ನಾನು ಅವರೆಲ್ಲರನ್ನು ನಿಮ್ಮ ಕೈವಶಮಾಡಿದೆ.


ನೋಡಿ, ಜೋರ್ಡನಿನಿಂದ ಪಶ್ಚಿಮ ಮಹಾ ಸಮುದ್ರದವರೆಗೂ ಇರುವ ಜನಾಂಗಗಳಲ್ಲಿ ಸತ್ತವರ ಹಾಗೂ ಉಳಿದವರ ನಾಡನ್ನು ನಿಮಗೆ ಸೊತ್ತಾಗಿ ಕೊಟ್ಟಿದ್ದೇನೆ,


(ಮೋಶೆ ಮನಸ್ಸೆಕುಲದ ಅರ್ಧಜನರಿಗೆ ಬಾಷಾನಿನಲ್ಲಿ ಪಾಲನ್ನು ಕೊಟ್ಟಿದ್ದನು. ಉಳಿದ ಅರ್ಧಜನರಿಗೆ ಯೆಹೋಶುವನು ಜೋರ್ಡನಿನ ಪಶ್ಚಿಮದಲ್ಲಿ ಬೇರೆ ಕುಲದವರೊಂದಿಗೆ ಪಾಲುಕೊಟ್ಟಿದ್ದನು). ಯೆಹೋಶುವ ಅವರನ್ನು ಹೀಗೆ ಆಶೀರ್ವದಿಸಿ ತಮ್ಮ ಸ್ವಂತ ಸ್ಥಳಗಳಿಗೆ ಕಳಿಸುವಾಗ ಅವರಿಗೆ,


ಅವರು ತಮ್ಮ ವಾಗ್ದಾನಕ್ಕನುಸಾರ ನಿಮ್ಮ ಸಹೋದರರಿಗೆ ಈಗ ನೆಮ್ಮದಿಯನ್ನು ದಯಪಾಲಿಸಿದ್ದಾರೆ. ಆದುದರಿಂದ ಸರ್ವೇಶ್ವರನ ದಾಸನಾದ ಮೋಶೆ ಜೋರ್ಡನಿನ ಆಚೆಕಡೆ ನಿಮಗೆ ಕೊಟ್ಟ ಆಸ್ತಿಯನ್ನು ಅನುಭವಿಸುತ್ತಿರುವ ನಿಮ್ಮ ನಿಮ್ಮ ನಿವಾಸಿಗಳ ಬಳಿಗೆ ನೀವು ಹೋಗಬಹುದು.


ಮಹಾಸಾಗರದ ತೀರವೇ ಪಶ್ಚಿಮ ಎಲ್ಲೆ, ಯೆಹೂದ ಗೋತ್ರಗಳ ನಾಡಿನ ಸುತ್ತಣ ಎಲ್ಲೆಗಳು ಇವೇ.


ಗೆಬಾಲ್ಯರ ಸೀಮೆ, ಹೆರ್ಮೋನ್ ಬೆಟ್ಟದ ತಪ್ಪಲಿನಲ್ಲಿರುವ ಬಾಲ್ಗಾದಿನಿಂದ ಹಾಮಾತಿನ ಹಾದಿಯವರೆಗಿರುವ ಲೆಬನೋನಿನ ಪೂರ್ವಪ್ರದೇಶ;


ಅವನು ಸೇಯೀರಿನ ಹಾದಿಯಲ್ಲಿದ್ದ ಹಾಲಾಕ್ ಬೆಟ್ಟದಿಂದ ಹೆರ್ಮೋನಿನ ಬುಡದಲ್ಲಿ ಲೆಬನೋನ್ ಕಣಿವೆಯಲ್ಲಿರುವ ಬಾಲ್ಗಾದ್ ನಗರದವರೆಗೂ ಇರುವ ಪ್ರದೇಶವನ್ನೆಲ್ಲಾ ತೆಗೆದುಕೊಂಡು ಅದರ ಅರಸರನ್ನೆಲ್ಲಾ ಹಿಡಿದು ಸಂಹರಿಸಿಬಿಟ್ಟನು.


ಅವರು ಹೋಗಿ ಜೆರುಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್ ಮತ್ತು ಎಗ್ಲೋನ್ ಎಂಬ ನಗರಗಳ ಐದು ಮಂದಿ ಅರಸರನ್ನು ಗವಿಯಿಂದ ಎಳೆದು ಅವನ ಬಳಿಗೆ ತಂದರು.


ಜೋರ್ಡನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲ ಅರಸರು ಮತ್ತು ಸಮುದ್ರದ ಬಳಿಯಿದ್ದ ಸರ್ವ ಕಾನಾನ್ ರಾಜರು ಸರ್ವೇಶ್ವರ ಸ್ವಾಮಿ ಇಸ್ರಯೇಲರ ಕಣ್ಮುಂದೆಯೇ ಜೋರ್ಡನನ್ನು ಬತ್ತಿಸಿ ಆ ನದಿ ದಾಟಿಸಿದರೆಂದು ಕೇಳಿದರು. ಆಗ ಅವರ ಎದೆ ಒಡೆದುಕೋಯಿತು. ಇಸ್ರಯೇಲರ ಮುಂದೆ ಅವರಿಗೆ ಧೈರ್ಯವಿಲ್ಲದೆ ಹೋಯಿತು.


ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿನ ನಡುವೆ ನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಯೇಲರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಹೀಗೆ ಜನರೆಲ್ಲರೂ ಜೋರ್ಡನಿನ ಆಚೆಗೆ ಸೇರಿದರು.


ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನೂ ನೆಮ್ಮದಿಪಡಿಸಿ, ಸರ್ವೇಶ್ವರನಾದ ದೇವರು ತಮಗೆ ನೀಡುವ ನಾಡನ್ನು ಅವರು ಸ್ವತಂತ್ರಿಸಿಕೊಳ್ಳುವ ವರೆಗೆ ಅವರಿಗೆ ಸಹಾಯ ಮಾಡಲಿ. ತರುವಾಯ ಸರ್ವೇಶ್ವರನ ದಾಸ ಮೋಶೆ ಜೋರ್ಡನ್ನಿಗೆ ಈಚೆ ಸೂರ್ಯೋದಯದ ದಿಕ್ಕಿನಲ್ಲಿ, ನಿಮಗೆ ಕೊಟ್ಟ ಸ್ವಂತ ನಾಡಿಗೆ ಹಿಂದಿರುಗಿ ಬಂದು ಅದನ್ನು ಅನುಭವಿಸಬಹುದು.”


ಬೆಂಗಾಡು ಹಾಗೂ ಲೆಬನೋನ್ ಪರ್ವತದಿಂದ ಯೂಫ್ರೆಟಿಸ್ ಮಹಾನದಿಯ ವರೆಗಿರುವ ಹಿತ್ತಿಯರ ನಾಡೆಲ್ಲ ನಿಮ್ಮದಾಗುವುದು. ನಿಮ್ಮ ಸೀಮೆ ಪಶ್ಚಿಮ ದಿಕ್ಕಿನ ಮಹಾಸಾಗರದ ವರೆಗೆ ವಿಸ್ತರಿಸಿಕೊಳ್ಳುವುದು.


“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿಗೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸೇರಿಸಿ, ಸಂಖ್ಯೆಯಲ್ಲೂ ಶಕ್ತಿಯಲ್ಲೂ ನಿಮ್ಮನ್ನು ಮೀರುವ ಜನಾಂಗಗಳನ್ನು ಅಲ್ಲಿಂದ ನಿಮ್ಮ ಮುಂದೆಯೆ ಹೊರಡಿಸುವರು.


ಅರಾಬ ಎಂಬ ತಗ್ಗಿನಲ್ಲಿ ಪಿಸ್ಗಾ ಬೆಟ್ಟದ ಬುಡದಲ್ಲಿ ಇರುವ ಅರಾಬದ ಸಮುದ್ರದವರೆಗೆ ಜೋರ್ಡನ್ ನದಿಯ ಆಚೆ ಇರುವ ಭಾಗವನ್ನೆಲ್ಲಾ ಸ್ವಾಧೀನ ಮಾಡಿಕೊಂಡಿದ್ದರು.


ಸರ್ವೇಶ್ವರಾ, ನಾನು ಕೂಡ ಈ ನದಿಯನ್ನು ದಾಟಿ, ಆಚೆಯಿರುವ ಒಳ್ಳೆಯ ನಾಡನ್ನು ಅಂದರೆ, ಆ ಅಂದವಾದ ಮಲೆನಾಡನ್ನೂ ಲೆಬನೋನ್ ಪರ್ವತವನ್ನೂ ನೋಡುವುದಕ್ಕೆ ಅಪ್ಪಣೆಯಾಗಲಿ’ ಎಂದು ಭಿನ್ನಯಿಸಿದೆ.


ನಾನು ಈ ದಿನ ನಿಮಗೆ ಆಜ್ಞಾಪಿಸುವುದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ನಿಮ್ಮ ಮುಂದೆಯೇ ಹೊರಡಿಸಿಬಿಡುವೆನು.


ಕೆಂಪು ಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಿರುವ ಸಮುದ್ರದವರೆಗೂ ಮತ್ತು ಈ ಮರುಭೂಮಿಯಿಂದ ಯೂಫ್ರೆಟೀಸ್ ಮಹಾ ನದಿಯವರೆಗೂ ಇರುವ ನಾಡನ್ನೆಲ್ಲಾ ನಿಮಗೆ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು.


ದಕ್ಷಿಣ ಪ್ರಾಂತದಲ್ಲಿ ಅಮಾಲೇಕ್ಯರು, ಮಲೆನಾಡಿನಲ್ಲಿ ಹಿತ್ತಿಯರು ಯೆಬೂಸಿಯರು ಹಾಗು ಅಮೋರಿಯರು ಮತ್ತು ಸಮುದ್ರ ತೀರದಲ್ಲಿ ಹಾಗೂ ಜೋರ್ಡನ್ ನದಿಯ ಪರಿಸರದಲ್ಲಿ ಕಾನಾನ್ಯರು ವಾಸವಾಗಿದ್ದಾರೆ,” ಎಂದು ವರದಿ ಮಾಡಿದರು.


ಸರ್ವೇಶ್ವರಸ್ವಾಮಿ ಯೆಹೋಶುವನ ಸಂಗಡ ಇದ್ದುದರಿಂದ ಅವನ ಕೀರ್ತಿ ನಾಡಿನಲ್ಲೆಲ್ಲಾ ಹರಡಿತು.


ಆಗ ಇಸ್ರಯೇಲರು ಹಿವ್ವಿಯರಾದ ಅವರಿಗೆ, “ಬಹುಶಃ ನೀವು ನಮ್ಮ ನಾಡಿನ ನಿವಾಸಿಗಳೇ ಆಗಿರಬಹುದು. ಆದುದರಿಂದ ನಾವು ನಿಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳುವುದು ಹೇಗೆ?” ಎಂದು ಉತ್ತರಿಸಿದರು.


ಈಗ ಹಿಂದಿರುಗಿ ಅಮೋರಿಯರು ಇರುವ ಮಲೆನಾಡಿಗೂ ಅದರ ಸುತ್ತಮುತ್ತಲಿನ ಪ್ರದೇಶಕ್ಕೂ ಪ್ರಯಾಣಮಾಡಿರಿ. ಅಲ್ಲಿನ ಕಣಿವೆ, ತಪ್ಪಲು, ಇಳಕಲು ಪ್ರದೇಶಗಳಿಗೂ ದಕ್ಷಿಣಸೀಮೆ, ಸಮುದ್ರತೀರ ಎಂಬ ನಾಡುಗಳಿಗೂ ಕಾನಾನ್ಯರ ನಾಡು, ಲೆಬನೋನ್ ಪರ್ವತ ಮತ್ತು ಯೂಫ್ರೆಟಿಸ್ ಮಹಾನದಿಯವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶಗಳಿಗೂ ತೆರಳಿರಿ.


ಅಲ್ಲಿಂದ ತಿರುಗಿಕೊಂಡು ಚೀದೋನ್, ತೂರ್ ಕೋಟೆ, ಹಿವ್ವಿಯರ ಮತ್ತು ಕಾನಾನ್ಯರ ಪಟ್ಟಣಗಳು ಇವುಗಳ ಮೇಲೆ ಯೆಹೂದ ಪ್ರಾಂತ್ಯದ ದಕ್ಷಿಣ ದಿಕ್ಕಿನಲ್ಲಿರುವ ಬೇರ್ಷೆಬಕ್ಕೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು