Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:13 - ಕನ್ನಡ ಸತ್ಯವೇದವು C.L. Bible (BSI)

13 ದ್ರಾಕ್ಷಾರಸ ತುಂಬಿಸಿಕೊಂಡಿದ್ದ ಈ ಬುದ್ದಲಿಗಳು ಹೊಸದಾಗಿದ್ದವು. ಈಗ ಹರಿದುಹೋಗಿವೆ. ನಮ್ಮ ಬಟ್ಟೆಬರೆಗಳು ಹಾಗೂ ಕೆರಗಳು ದೀರ್ಘ ಪ್ರಯಾಣದಿಂದ ಸವೆದುಹೋಗಿವೆ,” ಎಂದು ವಿವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾವು ದ್ರಾಕ್ಷಾರಸ ತುಂಬಿಸಿಕೊಂಡಿದ್ದ ಈ ಬುದ್ದಲಿಗಳು ಹೊಸದಾಗಿದ್ದವು; ಈಗ ಹರಿದುಹೋಗಿವೆ. ನಮ್ಮ ಬಟ್ಟೆಬರೆಗಳು ಹಾಗೂ ಕೆರಗಳು ದೀರ್ಘಪ್ರಯಾಣದಿಂದ ಸವೆದುಹೋಗಿವೆ’” ಎಂದು ವಿವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾವು ದ್ರಾಕ್ಷಾರಸ ತುಂಬಿಸಿಕೊಂಡಿದ್ದ ಈ ಬುದ್ದಲಿಗಳು ಹೊಸವಾಗಿದ್ದವು; ಈಗ ಹರಿದವೆ. ನಮ್ಮ ಬಟ್ಟೆ ಕೆರಗಳು ದೀರ್ಘಪ್ರಯಾಣದಿಂದ ಹಳೆಯವಾದವು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಮ್ಮ ದ್ರಾಕ್ಷಾರಸದ ಬುದ್ದಲಿಗಳನ್ನು ನೋಡಿರಿ, ನಾವು ಮನೆಯನ್ನು ಬಿಟ್ಟಾಗ ಅವು ಹೊಸದಾಗಿದ್ದವು ಮತ್ತು ದ್ರಾಕ್ಷಾರಸದಿಂದ ತುಂಬಿದ್ದವು. ಆದರೆ ಈಗ ಹಳೆಯದಾಗಿ ಹರಿದುಹೋಗಿವೆ. ನಮ್ಮ ಬಟ್ಟೆಗಳನ್ನು ಮತ್ತು ಪಾದರಕ್ಷೆಗಳನ್ನು ನೋಡಿರಿ, ಈಗ ಅವು ದೂರ ಪ್ರಯಾಣದಿಂದ ಹಾಳಾಗಿಹೋಗಿವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಈಗ ಅವು ಒಣಗಿ ಬೂಷ್ಟು ಹಿಡಿದವುಗಳಗಿವೆ. ನಾವು ದ್ರಾಕ್ಷಾರಸ ತುಂಬುವಾಗ ಈ ಬುದ್ದಲಿಗಳು ಹೊಸದಾಗಿದ್ದವು. ಇಗೋ, ಈಗ ಅವು ಹರಿದು ಹೋಗಿವೆ. ಇದಲ್ಲದೆ ಈ ನಮ್ಮ ವಸ್ತ್ರಗಳೂ ನಮ್ಮ ಕೆರಗಳೂ ಪ್ರಯಾಣ ಬಹಳ ದೂರವಾದ್ದರಿಂದ ಹಳೆಯದಾಗಿವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:13
8 ತಿಳಿವುಗಳ ಹೋಲಿಕೆ  

ಅಂತೆಯೇ ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ತುಂಬಿಡುವುದಿಲ್ಲ. ತುಂಬಿಟ್ಟರೆ ಬುದ್ದಲಿಗಳು ಬಿರಿಯುತ್ತವೆ, ಮದ್ಯವು ಚೆಲ್ಲಿಹೋಗುತ್ತದೆ; ಬುದ್ದಲಿಗಳೂ ಹಾಳಾಗುತ್ತವೆ. ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡುತ್ತಾರೆ. ಆಗ ಎರಡೂ ಉಳಿಯುತ್ತವೆ,” ಎಂದರು.


ಅವರು ಒಂದು ಉಪಾಯವನ್ನು ಹೂಡಿದರು. ಅದೇನೆಂದರೆ - ಅವರು ತಮ್ಮ ಕತ್ತೆಗಳ ಮೇಲೆ ಹಳೆಯ ಗೋಣಿತಟ್ಟುಗಳನ್ನು ಹಾಕಿ ಅವುಗಳ ಮೇಲೆ ತೇಪೆ ಹಾಕಿದ ದ್ರಾಕ್ಷಾರಸದ ಹಳೆಯ ಬುದ್ದಲಿಗಳನ್ನು ಹೇರಿದರು.


ನಾವು ನಿಮ್ಮನ್ನು ಭೇಟಿಯಾಗುವುದಕ್ಕಾಗಿ ಮನೆಬಿಟ್ಟು ಹೊರಟಾಗ ಪ್ರಯಾಣಕ್ಕೆಂದು ತೆಗೆದುಕೊಂಡ ಈ ರೊಟ್ಟಿ ಬಿಸಿಯಾಗಿತ್ತು. ಈಗ ಒಣಗಿ ಚೂರು ಚೂರಾಗಿದೆ ನೋಡಿ.


ಆಗ ಇಸ್ರಯೇಲರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಸರ್ವೇಶ್ವರ ಸ್ವಾಮಿಯ ಅಪ್ಪಣೆಯನ್ನು ಕೇಳಲಿಲ್ಲ.


ನಲವತ್ತು ವರ್ಷ ನಾನು ನಿಮ್ಮನ್ನು ಮರುಭೂಮಿಯಲ್ಲಿ ನಡೆಸಿಕೊಂಡು ಬಂದಿದ್ದೇನೆ. ನಿಮ್ಮ ಮೈಮೇಲಿದ್ದ ಉಡುಪಾಗಲಿ, ಕಾಲಲ್ಲಿದ್ದ ಕೆರವಾಗಲಿ ಸವೆದುಹೋಗಲಿಲ್ಲ.


ಹರಿದುಹೋಗಿದ್ದ ಹಳೆಯ ಕೆರಗಳನ್ನು ಮೆಟ್ಟಿಕೊಂಡರು. ಹಳೆಯ ಬಟ್ಟೆಬರೆಗಳನ್ನು ಹಾಕಿಕೊಂಡರು. ಒಣರೊಟ್ಟಿ ಚೂರುಗಳನ್ನು ಬುತ್ತಿಯಾಗಿ ಕಟ್ಟಿಕೊಂಡರು.


ಅಂತೆಯೇ ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ಯಾರೂ ತುಂಬಿಡುವುದಿಲ್ಲ. ತುಂಬಿಟ್ಟರೆ, ಅದರಿಂದ ಬುದ್ದಲಿಗಳು ಬಿರಿಯುತ್ತವೆ. ಮದ್ಯವು ಮತ್ತು ಬುದ್ದಲಿಗಳು ಎರಡೂ ನಷ್ಟವಾಗುತ್ತವೆ. ಆದುದರಿಂದ ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡಬೇಕು,” ಎಂದರು.


ಅಂತೆಯೇ, ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ಯಾರೂ ತುಂಬಿಡುವುದಿಲ್ಲ. ತುಂಬಿ ಇಟ್ಟರೆ, ಹೊಸ ಮದ್ಯವು ಬುದ್ದಲಿಗಳನ್ನು ಬಿರಿಯುತ್ತದೆ; ಮದ್ಯ ಚೆಲ್ಲಿಹೋಗುತ್ತದೆ; ಬುದ್ದಲಿಗಳೂ ಹಾಳಾಗುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು