ಯೆಹೋಶುವ 9:15 - ಕನ್ನಡ ಸತ್ಯವೇದವು C.L. Bible (BSI)15 ಯೆಹೋಶುವ ಅವರೊಡನೆ, “ನಿಮ್ಮ ಜೀವವನ್ನು ಕಾಪಾಡುತ್ತೇವೆ” ಎಂದು ಶಾಂತಿಸಂಧಾನ ಮಾಡಿಕೊಂಡನು. ಸಭೆಯ ನಾಯಕರೂ ಅಂತೆಯೇ ಪ್ರಮಾಣ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೆಹೋಶುವನು ಅವರೊಡನೆ “ನಿಮ್ಮ ಜೀವವನ್ನು ಕಾಪಾಡುತ್ತೇವೆ” ಎಂದು ಶಾಂತಿ ಸಂಧಾನ ಮಾಡಿಕೊಂಡನು. ಸಭೆಯ ನಾಯಕರೂ ಹಾಗೆಯೇ ಪ್ರಮಾಣ ಮಾಡಿದರು. ಜನರ ಪ್ರಧಾನರೂ ಪ್ರಮಾಣಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯೆಹೋಶುವನು ಅವರೊಡನೆ - ನಿಮ್ಮನ್ನು ಜೀವದಿಂದುಳಿಸುವೆವೆಂದು ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಂಡನು. ಸಮೂಹಪ್ರಧಾನರೂ ಪ್ರಮಾಣಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೆಹೋಶುವನು ಅವರೊಂದಿಗೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಒಪ್ಪಿಕೊಂಡನು. ಅವರು ಜೀವಸಹಿತ ಇರಲು ಅವಕಾಶ ಮಾಡಿಕೊಟ್ಟನು. ಯೆಹೋಶುವನ ಈ ಒಪ್ಪಂದಕ್ಕೆ ಇಸ್ರೇಲಿನ ಜನನಾಯಕರು ಒಪ್ಪಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೆಹೋಶುವನು ಅವರ ಸಂಗಡ ಸಮಾಧಾನದ ಒಡಂಬಡಿಕೆ ಮಾಡಿಕೊಂಡನು. ಅವರನ್ನು ಜೀವದಿಂದ ಉಳಿಸುವುದಕ್ಕೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಇದಲ್ಲದೆ ಸಭೆಯ ಪ್ರಧಾನರು ಅವರಿಗೆ ಪ್ರಮಾಣ ಮಾಡಿದರು. ಅಧ್ಯಾಯವನ್ನು ನೋಡಿ |