Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:18 - ಕನ್ನಡ ಸತ್ಯವೇದವು C.L. Bible (BSI)

18 ಸಭೆಯ ನಾಯಕರು ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ಆ ಜನರಿಗೆ ಪ್ರಮಾಣ ಮಾಡಿದ್ದರಿಂದ ಇಸ್ರಯೇಲರು ಅವರನ್ನು ಕೊಲ್ಲಲಿಲ್ಲ. ಆದರೆ ಸಭಿಕರೆಲ್ಲರುತಮ್ಮ ನಾಯಕರಿಗೆ ವಿರುದ್ಧ ಗೊಣಗುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಸಭೆಯ ನಾಯಕರು ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಆ ಜನರಿಗೆ ಪ್ರಮಾಣಮಾಡಿದ್ದರಿಂದ ಇಸ್ರಾಯೇಲ್ಯರು ಅವರನ್ನು ಕೊಲ್ಲಲಿಲ್ಲ. ಆದರೆ ಸಭಿಕರೆಲ್ಲರು ತಮ್ಮ ನಾಯಕರಿಗೆ ವಿರೋಧವಾಗಿ ಗೊಣಗಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಸಮೂಹಪ್ರಧಾನರು ಇಸ್ರಾಯೇಲ್‍ದೇವರಾದ ಯೆಹೋವನ ಹೆಸರಿನಲ್ಲಿ ಅವರಿಗೆ ಪ್ರಮಾಣಮಾಡಿದ್ದರಿಂದ ಇಸ್ರಾಯೇಲ್ಯರು ಅವರನ್ನು ಹೊಡೆಯಲಿಲ್ಲ. ಆದರೆ ಸಮೂಹದವರೆಲ್ಲಾ ಪ್ರಧಾನರಿಗೆ ವಿರೋಧವಾಗಿ ಗುಣುಗುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ ಇಸ್ರೇಲರ ಸೈನ್ಯವು ಆ ಪಟ್ಟಣದ ಜನರೊಂದಿಗೆ ಯುದ್ಧಮಾಡಲಿಲ್ಲ. ಅವರು ಆ ಜನರೊಂದಿಗೆ ಶಾಂತಿ ಒಪ್ಪಂದ ಮಾಡಿಕೊಂಡಿದ್ದರು. ಅವರು ಇಸ್ರೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡಿದ್ದರು. ಒಪ್ಪಂದವನ್ನು ಮಾಡಿಕೊಂಡ ಜನನಾಯಕರ ಬಗ್ಗೆ ಜನರೆಲ್ಲರೂ ಅಸಮಾಧಾನ ವ್ಯಕ್ತಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ಪ್ರಧಾನರು ಅವರಿಗೆ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಮೇಲೆ ಪ್ರಮಾಣ ಮಾಡಿದ್ದರಿಂದ ಇಸ್ರಾಯೇಲರು ಅವರ ಮೇಲೆ ದಾಳಿಮಾಡಲಿಲ್ಲ. ಆದರೆ ಇಸ್ರಾಯೇಲರೆಲ್ಲರೂ ಪ್ರಧಾನರಿಗೆ ವಿರೋಧವಾಗಿ ಗೊಣಗುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:18
11 ತಿಳಿವುಗಳ ಹೋಲಿಕೆ  

ಭ್ರಷ್ಟರನು ಧಿಕ್ಕರಿಸುವನು, ಭಕ್ತರನು ಗೌರವಿಸುವನು I ನಷ್ಟವಾದರೂ ಕೊಟ್ಟ ಮಾತನು ತಪ್ಪನವನು II


ಎಲ್ಲವೂ ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು; ಸಜ್ಜನನಿಗೂ ದುರ್ಜನನಿಗೂ, ಒಳ್ಳೆಯವನಿಗೂ (ಕೆಟ್ಟವನಿಗೂ), ಶುದ್ಧನಿಗೂ, ಅಶುದ್ಧನಿಗೂ ಬಲಿಯನ್ನರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿ ಕಾದಿದೆ; ನಿರ್ದೋಷಿಯಂತೆ ದೋಷಿಯೂ ಇರುವನು; ಆಣೆಯಿಡುವವನ ಹಾಗೆ ಆಣೆಗೆ ಅಂಜುವವನೂ ಇರುವನು.


ನಿನ್ನ ಬಾಯಿ ಪಾಪಕ್ಕೆ ಕಾರಣ ಆಗದಂತೆ ನೋಡಿಕೊ. ಅದು ಅಜಾಗ್ರತೆಯಿಂದ ಆಯಿತೆಂದು ದೇವದೂತನ ಮುಂದೆ ನೆಪ ಹೇಳಬೇಡ. ದೇವರು ನಿನ್ನ ಮಾತಿಗೆ ಕೋಪಗೊಂಡು ನಿನ್ನ ಕೆಲಸವನ್ನು ಹಾಳುಮಾಡಿಯಾರು.


ದುಡುಕಿ ಮಾತನಾಡಬೇಡ. ದೇವರ ಸನ್ನಿಧಿಯಲ್ಲಿ ಮಾತುಕೊಡಲು ಆತುರಪಡಬೇಡ. ದೇವರು ಇರುವುದು ಪರಲೋಕದಲ್ಲಿ, ನೀನಿರುವುದಾದರೋ ಭೂಲೋಕದಲ್ಲಿ. ಆದುದರಿಂದ ನಿನ್ನ ಮಾತುಗಳಿಗೆ ಮಿತಿಯಿರಲಿ.


ದಾವೀದನು ತಾನು ಸೌಲನ ಮಗ ಯೋನಾತಾನನಿಗೆ ಸರ್ವೇಶ್ವರನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನೆದು, ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು.


ಹೇಗೆಂದರೆ - ಮೂರನೆಯ ದಿನದಂದು ಇಸ್ರಯೇಲರು ಹೊರಟು ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳನ್ನು ಸೇರಿದರು. ಆಗ ಆ ಊರುಗಳು ಆ ಜನರದ್ದೇ ಎಂದು ಗೊತ್ತಾಯಿತು.


ಆಗ ನಾಯಕರೆಲ್ಲರು ಸಭೆಯ ಎಲ್ಲ ಸದಸ್ಯರಿಗೆ, “ನಾವು ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ಅವರಿಗೆ ಪ್ರಮಾಣ ಮಾಡಿದ್ದರಿಂದ ಅವರನ್ನು ಮುಟ್ಟಲಾಗದು.


“ಕನ್ಯೆಯೊಬ್ಬಳು ತನ್ನ ತಂದೆಯ ಮನೆಯಲ್ಲಿದ್ದು ಸರ್ವೇಶ್ವರನಿಗೆ ಹರಕೆಯನ್ನು ಮಾಡಿದಾಗ ಇಲ್ಲವೆ ಯಾವುದಾದರೊಂದನ್ನು ಮುಟ್ಟುವುದಿಲ್ಲವೆಂದು ಪ್ರತಿಜ್ಞೆಮಾಡಿದಾಗ


ನೀವು ಹರಕೆಮಾಡದಿದ್ದರೆ ದೋಷವೇನೂ ಇಲ್ಲ.


ಆದರೆ ಬಾಯಿಂದ ನುಡಿದದ್ದನ್ನು ನೆರವೇರಿಸಲೇಬೇಕು. ನಿಮ್ಮ ದೇವರಾದ ಸರ್ವೇಶ್ವರನಿಗೆ ಬಾಯಿಂದ ಹರಕೆಮಾಡಿಕೊಂಡಂತೆಯೇ ಅದನ್ನು ಒಪ್ಪಿಸಿಬಿಡಬೇಕು.


“ಮತ್ತೊಬ್ಬನ ದ್ರಾಕ್ಷಿತೋಟದಲ್ಲಿ ನೀವು ಹಾದುಹೋಗುವಾಗ ಇಷ್ಟಾನುಸಾರ ಹಣ್ಣುಗಳನ್ನು ತಿನ್ನಬಹುದು. ಆದರೆ ಬುಟ್ಟಿಯಲ್ಲಿ ಹಾಕಿಕೊಂಡು ಹೋಗಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು