Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:22 - ಕನ್ನಡ ಸತ್ಯವೇದವು C.L. Bible (BSI)

22 ಯೆಹೋಶುವನು ಗಿಬ್ಯೋನ್ಯರನ್ನು ಕರೆಸಿ, “ನೀವು ನಮ್ಮ ನಡುವೆ ವಾಸಿಸುವವರಾಗಿದ್ದರೂ ಬಹುದೂರದವರೆಂದು ಹೇಳಿ ನಮ್ಮನ್ನು ವಂಚಿಸಿದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೋಶುವನು ಗಿಬ್ಯೋನ್ಯರನ್ನು ಕರೆಸಿ ಅವರಿಗೆ “ನೀವು ನಮ್ಮ ಮಧ್ಯದಲ್ಲಿ ವಾಸಿಸುವವರಾಗಿದ್ದರೂ ಬಹು ದೂರದವರೆಂದು ಹೇಳಿ ನಮ್ಮನ್ನು ವಂಚಿಸಿದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೆಹೋಶುವನು ಗಿಬ್ಯೋನ್ಯರನ್ನು ಕರಿಸಿ ಅವರಿಗೆ - ನೀವು ನಮ್ಮ ಮಧ್ಯದಲ್ಲಿ ವಾಸಿಸುವವರಾಗಿದ್ದರೂ ಬಹುದೂರದವರೆಂದು ಹೇಳಿ ನಮ್ಮನ್ನು ವಂಚಿಸಿದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೆಹೋಶುವನು ಗಿಬ್ಯೋನಿನ ಜನರನ್ನು ಕರೆದು, “ನೀವು ನಮಗೆ ಸುಳ್ಳು ಹೇಳಿದ್ದೇಕೆ? ನಿಮ್ಮ ನಾಡು ನಮ್ಮ ಪಾಳೆಯದ ಹತ್ತಿರವೇ ಇತ್ತು. ಆದರೆ ನೀವು ನಿಮ್ಮನ್ನು ದೂರದೇಶದವರು ಎಂದು ಹೇಳಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ತರುವಾಯ ಯೆಹೋಶುವನು ಗಿಬ್ಯೋನ್ಯರನ್ನು ಕರೆಯಿಸಿ ಅವರಿಗೆ, “ನೀವು ನಮ್ಮ ಮಧ್ಯದಲ್ಲಿ ವಾಸಿಸುವವರಾಗಿದ್ದರೂ, ‘ನಾವು ನಿಮಗೆ ಬಹಳ ದೂರವಾಗಿರುವವರು,’ ಎಂದು ಹೇಳಿ ನಮ್ಮನ್ನು ಮೋಸಗೊಳಿಸಿದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:22
9 ತಿಳಿವುಗಳ ಹೋಲಿಕೆ  

ತಾವೂ ರಾಯಭಾರಿಗಳೆಂದು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಬಂದರು. ಅವನಿಗೂ ಇಸ್ರಯೇಲರಿಗೂ, “ನಾವು ದೂರದೇಶದಿಂದ ಬಂದವರು. ನೀವು ನಮ್ಮ ಸಂಗಡ ಒಂದು ಒಪ್ಪಂದ ಮಾಡಿಕೊಳ್ಳಿ,” ಎಂದು ಕೇಳಿಕೊಂಡರು.


ಈ ಒಪ್ಪಂದವಾದ ಮೂರು ದಿನಗಳ ಮೇಲೆ ಅವರು ತಮ್ಮ ನೆರೆಯವರೆಂದೂ ತಮ್ಮ ಮಧ್ಯೆ ವಾಸಿಸುವವರೆಂದೂ ಇಸ್ರಯೇಲರಿಗೆ ಗೊತ್ತಾಯಿತು.


ಆ ಹೆಣ್ಣು ಲೇಯಳೆಂದು ಯಕೋಬನಿಗೆ ಬೆಳಿಗ್ಗೆ ತಿಳಿಯಿತು. ಅವನು ಲಾಬಾನನಿಗೆ, “ನೀವು ನನಗೇಕೆ ಹೀಗೆ ಮಾಡಿದಿರಿ? ರಾಖೇಲಳಿಗಾಗಿ ಅಲ್ಲವೆ ನಾನು ನಿಮಗೆ ಸೇವೆಮಾಡಿದ್ದು? ನನಗೆ ಮೋಸಮಾಡಿದ್ದೇಕೆ?” ಎಂದು ಕೇಳಿದನು.


ಆದರೂ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿ ಮೋಸಹೋದಂತೆ ನೀವೂ ಕೂಡ ಕ್ರಿಸ್ತಯೇಸುವಿನ ವಿಷಯದಲ್ಲಿ ಇರಬೇಕಾದ ಶುದ್ಧ ಪಾತಿವ್ರತ್ಯವನ್ನು ಕಳೆದುಕೊಂಡು ಕೆಟ್ಟುಹೋದೀರಿ ಎಂಬ ಭಯ ನನಗುಂಟು.


ಜೆರಿಕೋದವರನ್ನು ಮತ್ತು ಆಯಿ ಜನರನ್ನು ಯೆಹೋಶುವನು ಸಂಹರಿಸಿದ ಸುದ್ದಿ ಗಿಬ್ಯೋನಿನ ನಿವಾಸಿಗಳಿಗೆ ಮುಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು