Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:4 - ಕನ್ನಡ ಸತ್ಯವೇದವು C.L. Bible (BSI)

4 ಅವರು ಒಂದು ಉಪಾಯವನ್ನು ಹೂಡಿದರು. ಅದೇನೆಂದರೆ - ಅವರು ತಮ್ಮ ಕತ್ತೆಗಳ ಮೇಲೆ ಹಳೆಯ ಗೋಣಿತಟ್ಟುಗಳನ್ನು ಹಾಕಿ ಅವುಗಳ ಮೇಲೆ ತೇಪೆ ಹಾಕಿದ ದ್ರಾಕ್ಷಾರಸದ ಹಳೆಯ ಬುದ್ದಲಿಗಳನ್ನು ಹೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಒಂದು ಉಪಾಯವನ್ನು ಮಾಡಿದರು. ಅದೇನೆಂದರೆ ಅವರು ತಮ್ಮ ಕತ್ತೆಗಳ ಮೇಲೆ ಹಳೆಯ ಗೋಣಿ ತಟ್ಟುಗಳನ್ನು ಹಾಕಿ, ಅವುಗಳ ಮೇಲೆ ತೇಪೆ ಹಾಕಿದ ದ್ರಾಕ್ಷಾರಸದ ಹಳೆಯ ಬುದ್ದಲಿಗಳನ್ನು ಹೇರಿದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೇಗಂದರೆ - ಅವರು ತಮ್ಮ ಕತ್ತೆಗಳ ಮೇಲೆ ಹಳೆಯ ಗೋಣೀತಟ್ಟುಗಳನ್ನು ಹಾಕಿ, ಅವುಗಳ ಮೇಲೆ ಹರಿದುಹೋಗಿ ಕಟ್ಟಲ್ಪಟ್ಟಿರುವ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇಸ್ರೇಲರಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಒಂದು ಉಪಾಯಮಾಡಿದರು. ಅವರು ಹರುಕು-ಮುರುಕಾದ ಹಳೆಯ ದ್ರಾಕ್ಷಾರಸದ ಬುದ್ದಲಿಗಳನ್ನು ತಮ್ಮ ಕತ್ತೆಗಳ ಬೆನ್ನ ಮೇಲೆ ಹೇರಿಸಿದರು; ತಾವು ಬಹುದೂರ ಪ್ರಯಾಣ ಮಾಡಿ ಬಂದಿರುವುದಾಗಿ ತೋರಿಸಲು ತಮ್ಮ ಕತ್ತೆಗಳ ಮೇಲೆ ಹಳೆಯ ಗೋಣಿಚೀಲಗಳನ್ನು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಒಂದು ಉಪಾಯವನ್ನು ಮಾಡಿದರು. ಅದೇನೆಂದರೆ, ಅವರು ರಾಯಭಾರಿಗಳ ಹಾಗೆ ತೋರಿಸುವಂತೆ ಹಳೆಯ ಗೋಣಿ ಚೀಲಗಳನ್ನೂ ತೇಪೆ ಹಾಕಿದ ಹಳೆಯದಾದ ದ್ರಾಕ್ಷಾರಸದ ಬುದ್ದಲಿಗಳನ್ನೂ ಕಟ್ಟಿಕೊಂಡು, ತಮ್ಮ ಕತ್ತೆಗಳ ಮೇಲೆ ಹಾಕಿಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:4
12 ತಿಳಿವುಗಳ ಹೋಲಿಕೆ  

“ಈ ಅಪ್ರಾಮಾಣಿಕ ಮೇಸ್ತ್ರಿ ಮಾಡಿದ ಮುಂದಾಲೋಚನೆಯನ್ನು ಅವನ ಯಜಮಾನ ಪ್ರಶಂಶಿಸಿದ. ಏಕೆಂದರೆ, ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು.


ಅಂತೆಯೇ ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ಯಾರೂ ತುಂಬಿಡುವುದಿಲ್ಲ. ತುಂಬಿಟ್ಟರೆ, ಅದರಿಂದ ಬುದ್ದಲಿಗಳು ಬಿರಿಯುತ್ತವೆ. ಮದ್ಯವು ಮತ್ತು ಬುದ್ದಲಿಗಳು ಎರಡೂ ನಷ್ಟವಾಗುತ್ತವೆ. ಆದುದರಿಂದ ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡಬೇಕು,” ಎಂದರು.


“ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ.


ಅಂತೆಯೇ ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ತುಂಬಿಡುವುದಿಲ್ಲ. ತುಂಬಿಟ್ಟರೆ ಬುದ್ದಲಿಗಳು ಬಿರಿಯುತ್ತವೆ, ಮದ್ಯವು ಚೆಲ್ಲಿಹೋಗುತ್ತದೆ; ಬುದ್ದಲಿಗಳೂ ಹಾಳಾಗುತ್ತವೆ. ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡುತ್ತಾರೆ. ಆಗ ಎರಡೂ ಉಳಿಯುತ್ತವೆ,” ಎಂದರು.


ಬೆಂಕಿಗೆ ಬಿಸಾಡಿದ ಒಣ ಬುದ್ಧಲಿಯಂತಾದೆ I ಆದರೂ ನಿನ್ನ ನಿಬಂಧನೆಗಳನ್ನು ಮರೆಯದಿದ್ದೆ II


ಶೆಕೆಮನು ತಮ್ಮ ತಂಗಿ ದೀನಳನ್ನು ಕೆಡಿಸಿದ್ದರಿಂದ ಯಕೋಬನ ಮಕ್ಕಳು ಅವನಿಗೂ ಅವನ ತಂದೆ ಹಮೋರನಿಗೂ ಕಪಟದಿಂದ ಈ ಉತ್ತರಕೊಟ್ಟರು;


ಜೆರಿಕೋದವರನ್ನು ಮತ್ತು ಆಯಿ ಜನರನ್ನು ಯೆಹೋಶುವನು ಸಂಹರಿಸಿದ ಸುದ್ದಿ ಗಿಬ್ಯೋನಿನ ನಿವಾಸಿಗಳಿಗೆ ಮುಟ್ಟಿತು.


ಹರಿದುಹೋಗಿದ್ದ ಹಳೆಯ ಕೆರಗಳನ್ನು ಮೆಟ್ಟಿಕೊಂಡರು. ಹಳೆಯ ಬಟ್ಟೆಬರೆಗಳನ್ನು ಹಾಕಿಕೊಂಡರು. ಒಣರೊಟ್ಟಿ ಚೂರುಗಳನ್ನು ಬುತ್ತಿಯಾಗಿ ಕಟ್ಟಿಕೊಂಡರು.


ದ್ರಾಕ್ಷಾರಸ ತುಂಬಿಸಿಕೊಂಡಿದ್ದ ಈ ಬುದ್ದಲಿಗಳು ಹೊಸದಾಗಿದ್ದವು. ಈಗ ಹರಿದುಹೋಗಿವೆ. ನಮ್ಮ ಬಟ್ಟೆಬರೆಗಳು ಹಾಗೂ ಕೆರಗಳು ದೀರ್ಘ ಪ್ರಯಾಣದಿಂದ ಸವೆದುಹೋಗಿವೆ,” ಎಂದು ವಿವರಿಸಿದರು.


ನಾವು ನಿಮ್ಮನ್ನು ಭೇಟಿಯಾಗುವುದಕ್ಕಾಗಿ ಮನೆಬಿಟ್ಟು ಹೊರಟಾಗ ಪ್ರಯಾಣಕ್ಕೆಂದು ತೆಗೆದುಕೊಂಡ ಈ ರೊಟ್ಟಿ ಬಿಸಿಯಾಗಿತ್ತು. ಈಗ ಒಣಗಿ ಚೂರು ಚೂರಾಗಿದೆ ನೋಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು